ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ದಶಕಗಳ ಬೇಡಿಕೆಗೆ ಒಪ್ಪಿದ ಕೇಂದ್ರ ಸರ್ಕಾರ

|
Google Oneindia Kannada News

ಬೆಂಗಳೂರು, ಮಾರ್ಚ್ 26; ಕರ್ನಾಟಕ ರಾಜ್ಯದ ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನವನ್ನು ನೀಡಲು ಅನುಮೋದನೆ ಸಿಕ್ಕಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಯೋಜನೆ ಸ್ಥಾನಮಾನ ಪಡೆದ ರಾಜ್ಯದ ಮೊದಲ ಯೋಜನೆ ಇದಾಗಿದೆ.

ಭದ್ರಾ ಮೇಲ್ಡಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ? ಭದ್ರಾ ಮೇಲ್ಡಂಡೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ?

ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ ರೈತರಿಗೆ ಅನುಕೂಲವಾಗುವ ಈ ಯೋಜನೆಗೆ 21,450 ಕೋಟಿ ರೂ. ವೆಚ್ಚವಾಲಿದೆ ಎಂದು ಅಂದಾಜಿಸಲಾಗಿದೆ. ರಾಷ್ಟ್ರೀಯ ಯೋಜನೆಯಾದ ಕಾರಣ ಕೇಂದ್ರದಿಂದ 16,125 ಕೋಟಿ ಅನುದಾನ ಸಿಗಲಿದೆ.

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ನೂತನ ಅಧ್ಯಕ್ಷರಾಗಿ ಪವಿತ್ರ ರಾಮಯ್ಯ ಅಧಿಕಾರ ಸ್ವೀಕಾರ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ನೂತನ ಅಧ್ಯಕ್ಷರಾಗಿ ಪವಿತ್ರ ರಾಮಯ್ಯ ಅಧಿಕಾರ ಸ್ವೀಕಾರ

Upper Bhadra Project Gets National Project Status

ಕೇಂದ್ರ ಹೂಡಿಕೆ ಸಮಿತಿಯು ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. ಜಲಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರ ಶ್ರಮವೂ ಇದರಲ್ಲಿ ಸಾಕಷ್ಟು ಇದೆ. ಹಲವು ಬಾರಿ ದೆಹಲಿಗೆ ತೆರಳಿ ಅಧಿಕಾರಿಗಳ ಜೊತೆ ಯೋಜನೆ ಬಗ್ಗೆ ಚರ್ಚೆ ನಡೆಸಿದ್ದರು.

ಭದ್ರಾ ಮೇಲ್ದಂಡೆ ಕಾಮಗಾರಿ: ಮತ್ತೆ ಶುರುವಾಯಿತು ರಾಜಕೀಯದಾಟಭದ್ರಾ ಮೇಲ್ದಂಡೆ ಕಾಮಗಾರಿ: ಮತ್ತೆ ಶುರುವಾಯಿತು ರಾಜಕೀಯದಾಟ

ಭದ್ರಾ ಮೇಲ್ದಂಡೆ ಯೋಜನೆಯಿಂದ ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ 2.25 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ. ರಾಷ್ಟ್ರೀಯ ಯೋಜನೆ ಸ್ಥಾನಮಾನ ಪಡೆಯಬೇಕಾದರೆ ಹನಿ ನೀರಾವರಿ ಯೋಜನೆ ಅಡಿಯಲ್ಲಿ 2 ಲಕ್ಷ ಹೆಕ್ಟೇರ್ ಪ್ರದೇಶವನ್ನು ಒಳಗೊಂಡಿರಬೇಕು.

2003ರಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಒಪ್ಪಿಗೆ ಪಡೆಯಲಾಯಿತು. ಅರಣ್ಯ ಇಲಾಖೆ ಅನುಮಿತಿ, ಭೂ ಸ್ವಾಧೀನ, ಹೆಚ್ಚಿದ ವೆಚ್ಚ ಸೇರಿದಂತೆ ವಿವಿಧ ಕಾರಣದಿಂದಾಗಿ ಯೋಜನೆ ವಿಳಂಬವಾಯಿತು. ಪ್ರಸ್ತುತ ಶೇ 16ರಷ್ಟು ಯೋಜನೆ ಕಾಮಗಾರಿ ಪೂರ್ಣಗೊಂಡಿದೆ.

ಏನಿದು ಯೋಜನೆ?; ತುಂಗಾ ಜಲಾಶಯದ ನೀರನ್ನು ಲಕ್ಕವಳ್ಳಿ ಸಮೀಪದ ಭದ್ರಾ ಜಲಾಶಯಕ್ಕೆ ಹರಿಸಲಾಗುತ್ತದೆ. ಅಲ್ಲಿಂದ ನಾಲೆ ಮೂಲಕ ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಗಳಿಗೆ ಹರಿಸಲಾಗುತ್ತದೆ.

ಮುಖ್ಯಮಂತ್ರಿಯಾಗಿದ್ದ ಎಸ್. ನಿಜಲಿಂಗಪ್ಪ ಅವರ ಕಾಲದಲ್ಲಿಯೇ ಭದ್ರಾ ನೀರನ್ನು ಚಿತ್ರದುರ್ಗಕ್ಕೆ ಹರಿಸಬೇಕು ಎಂದು ಪ್ರಯತ್ನ ನಡೆದಿತ್ತು. ನೀರಾವರಿ ತಜ್ಞ ಕೆ. ಸಿ. ರೆಡ್ಡಿ ಅಧ್ಯಕ್ಷತೆಯಲ್ಲಿ ರಚನೆಗೊಂಡ ಸಮಿತಿ ಅಧ್ಯಯನ ನಡೆಸಿ ಸರ್ಕಾರಕ್ಕೆ ಯೋಜನೆ ಬಗ್ಗೆ ವರದಿ ನೀಡಿತ್ತು. 2008ರಲ್ಲಿ ಸರ್ಕಾರ ಯೋಜನೆಗೆ ಚಾಲನೆ ನೀಡಿತು.

English summary
Union government approved to consider upper Bhadra project as national project status and will receive Rs.16,125 crores from govt. Project will help to farmers of Davanagere, Chitradurga, Tumakuru & Chikkamagaluru districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X