ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

63 ಸ್ಥಳೀಯ ಸಂಸ್ಥೆಗಳ ಚುನಾವಣೆ : ಅಂಕಿ-ಸಂಖ್ಯೆಗಳ ಲೆಕ್ಕ

|
Google Oneindia Kannada News

ಬೆಂಗಳೂರು, ಮೇ 03 : ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ರಾಜ್ಯದಲ್ಲಿ ಮತ್ತೊಂದು ಚುನಾವಣೆ ಎದುರಾಗಲಿದೆ. 63 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಣೆ ಮಾಡಿದೆ.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಚಾರಿ ಅವರು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು. 2018ರ ಆಗಸ್ಟ್‌ನಲ್ಲಿ 109 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. ಉಳಿದ 103 ಸ್ಥಳೀಯ ಸಂಸ್ಥೆಗಳ ಅವಧಿ ಮಾರ್ಚ್-ಜುಲೈ ನಡುವೆ ಪೂರ್ಣಗೊಳ್ಳಲಿದೆ.

63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಪ್ರಕಟ63 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಪ್ರಕಟ

'ಕ್ಷೇತ್ರ ಪುನರ್ ವಿಂಗಡನೆ ಹಾಗೂ ವಾರ್ಡ್‌ವಾರು ಮೀಸಲಾತಿ ಪ್ರಶ್ನಿಸಿ ಹಲವರು ಹೈಕೋರ್ಟ್‌ಗೆ ಹೋಗಿದ್ದಾರೆ. ಆದ್ದರಿಂದ, 39 ಸ್ಥಳೀಯ ಸಂಸ್ಥೆಗಳ 1271 ವಾರ್ಡ್‌ಗಳಿಗೆ ಈಗ ಚುನಾವಣೆ ನಡೆಯುತ್ತಿಲ್ಲ. ಹೈಕೋರ್ಟ್ ಆದೇಶ ಬಂದರೆ ಇವುಗಳ ಜೊತೆಗೆ ಚುನಾವಣೆ ನಡೆಸಲಾಗುತ್ತದೆ' ಎಂದು ಪಿ.ಎನ್.ಶ್ರೀನಿವಾಸಚಾರಿ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆ ಫಲಿತಾಂಶ : ಯಾವ ಪಕ್ಷದ ಹಿಡಿತ ಎಷ್ಟು?ಸ್ಥಳೀಯ ಸಂಸ್ಥೆ ಫಲಿತಾಂಶ : ಯಾವ ಪಕ್ಷದ ಹಿಡಿತ ಎಷ್ಟು?

ಮೇ 9ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದೆ. ಮೇ 16 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಮೇ 20 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಮೇ 29ರಂದು ಮತದಾನ ನಡೆಯಲಿದ್ದು, ಮೇ 31ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.....

ಇವಿಎಂ ಯಂತ್ರಗಳ ಬಳಕೆ

ಇವಿಎಂ ಯಂತ್ರಗಳ ಬಳಕೆ

ಮತದಾನಕ್ಕಾಗಿ ಒಟ್ಟು 1998 ಮತಯಂತ್ರಗಳನ್ನು ಬಳಕೆ ಮಾಡಲಾಗುತ್ತದೆ. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ವಿವಿಪ್ಯಾಟ್‌ಗಳನ್ನು ಬಳಕೆ ಮಾಡುತ್ತಿಲ್ಲ. ದೇಶದ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ವಿವಿಪ್ಯಾಟ್‌ಗಳನ್ನು ಬಳಕೆ ಮಾಡುತ್ತಿಲ್ಲ.

ನೋಟಾ ಮತ ಹಾಕಲು ಅವಕಾಶ

ನೋಟಾ ಮತ ಹಾಕಲು ಅವಕಾಶ

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ನೋಟಾ ಬಳಕೆಗೆ ಅವಕಾಶ ಮಾಡಿಕೊಡಲಾಗಿದೆ. ಯಾವ ಅಭ್ಯರ್ಥಿಗೂ ಮತ ಹಾಕಲು ಇಚ್ಚಿಸದವರು ನೋಟಾ ಮತ ಹಾಕಬಹುದಾಗಿದೆ.

ನಗರ ಸ್ಥಳೀಯ ಸಂಸ್ಥೆಗಳಿಗೆ ಐಎಎಸ್ ಅಧಿಕಾರಿಗಳನ್ನು ವಿಶೇಷ ವೀಕ್ಷಕರಾಗಿ, ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿಗಳನ್ನು ಸಾಮಾನ್ಯ ವೀಕ್ಷಕರಾಗಿ ನೇಮಕ ಮಾಡಲಾಗುತ್ತದೆ.

ಭಾವಚಿತ್ರವಿರುವ ಮತ ಪತ್ರ

ಭಾವಚಿತ್ರವಿರುವ ಮತ ಪತ್ರ

ಒಂದೇ ವಾರ್ಡ್‌ನಲ್ಲಿ ಒಂದೇ ಹೆಸರಿನ ಅಭ್ಯರ್ಥಿಗಳು ಸ್ಪರ್ಧಿಸುವ ಸಾಧ್ಯತೆ ಇದೆ. ಆದ್ದರಿಂದ ಅವರನ್ನು ಗುರುತಿಸಲು ಅವರ ಹೆಸರಿನ ಮುಂದೆ ವೃತ್ತಿ, ವಿಳಾಸ ತೋರಿಸಲಾಗುತ್ತಿತ್ತು. ಆದರೂ ಗೊಂದಲ ಉಂಟಾಗುತ್ತಿತ್ತು. ಆದ್ದರಿಂದ, ಅಭ್ಯರ್ಥಿಗಳ ಹೆಸರಿನ ಮುಂದೆ ಇತ್ತೀಚಿನ ಭಾವಚಿತ್ರ ಮುದ್ರಿಸಲಾಗುತ್ತದೆ.

ಚುನಾವಣಾ ವೆಚ್ಚದ ವಿವರ

ಚುನಾವಣಾ ವೆಚ್ಚದ ವಿವರ

ಬಿಬಿಎಂಪಿ ವ್ಯಾಪ್ತಿಯಲ್ಲಿ 5 ಲಕ್ಷ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 3.5 ಲಕ್ಷ, ನಗರಸಭೆ ವ್ಯಾಪ್ತಿಯಲ್ಲಿ 2 ಲಕ್ಷ, ಪುರಸಭೆ ವ್ಯಾಪ್ತಿಯಲ್ಲಿ 1.50 ಲಕ್ಷ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 1 ಲಕ್ಷ ವೆಚ್ಚ ಮಾಡಬಹುದಾಗಿದೆ.

ಉಪ ಚುನಾವಣೆಗಳು

ಉಪ ಚುನಾವಣೆಗಳು

ಸ್ಥಳೀಯ ಸಂಸ್ಥೆಗಳ ಚುನಾವಣೆ ಜೊತೆಗೆ ಮೇ 29ರಂದು ವಿವಿಧ ಉಪ ಚುನಾವಣೆ ನಡೆಯಲಿದೆ. 8 ತಾಲೂಕು ಪಂಚಾಯಿತಿಗಳ 10 ಕ್ಷೇತ್ರಗಳಿಗೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ 202 ಸ್ಥಾನಗಳಿಗೆ ಉಪ ಚುನಾವಣೆ ನಡೆಯಬೇಕಿದೆ.

ಬಿಬಿಎಂಪಿಯ ಸಗಾಯಿಪುರ ಹಾಗೂ ಕಾವೇರಿ ಪುರ ವಾರ್ಡ್, ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ 22, ಹೆಬ್ಬಗೋಡಿ ನಗರಸಭೆ ವಾರ್ಡ್‌ 26, ಸದಲಗ ಪುರಸಭೆಯ ವಾರ್ಡ್ 19 ಹಾಗೂ ಮುಗಳಖೋಡ ಪುರಸಭೆ ವಾರ್ಡ್‌ 2ರಲ್ಲಿ ಉಪ ಚುನಾವಣೆ ನಡೆಯಲಿದೆ.

English summary
Karnataka election commission announced the schedule for urban local bodies election 2019. Voting will be held on May 29, 2019. Model code of conduct in effect from May 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X