ಸ್ಥಳೀಯ ಸಂಸ್ಥೆ ಚುನಾವಣೆ : ಕಾಂಗ್ರೆಸ್‌ ದೊಡ್ಡ ಪಕ್ಷ, ಬಿಜೆಪಿಗೆ 2ನೇ ಸ್ಥಾನ!

ಬೆಂಗಳೂರು, ಸೆಪ್ಟೆಂಬರ್ 03 : 105 ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನಡೆದ ಚುನಾವಣೆ ಇದು. ಚುನಾವಣೆಯಲ್ಲಿ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಸೋಮವಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. 29 ನಗರಸಭೆ, 53 ಪುರಸಭೆ ಮತ್ತು 23 ಪಟ್ಟಣ ಪಂಚಾಯಿತಿಗಳಿಗೆ ಆಗಸ್ಟ್ 31ರಂದು ಚುನಾವಣೆ ನಡೆದಿತ್ತು. ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಈ ಚುನಾವಣೆಯಲ್ಲಿ 2ನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ಮೂರು ಮಹಾನಗರ ಪಾಲಿಕೆಗಳಿಗೂ ಚುನಾವಣೆ ನಡೆದಿತ್ತು. ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಬಿಜೆಪಿ ವಶಕ್ಕೆ ಪಡೆದುಕೊಂಡಿದೆ. ತುಮಕೂರು ಮತ್ತು ಮೈಸೂರು ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ವಾರ್ಡ್‌ಗಳಲ್ಲಿ ಗೆದ್ದಿದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ 2ನೇ ಸ್ಥಾನ ಪಡೆದಿದ್ದು, ಜೆಡಿಎಸ್ ಮೂರನೇ ಸ್ಥಾನದಲ್ಲಿದೆ. 'ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರ ಇರುವುದರಿಂದ ಹೆಚ್ಚಿನ ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಯಾರಿಗೆ ಎಷ್ಟು ಸ್ಥಾನ?

ಯಾರಿಗೆ ಎಷ್ಟು ಸ್ಥಾನ?

ಮೂರು ಮಹಾನಗರ ಪಾಲಿಕೆಗಳ ಒಟ್ಟು 135 ಸ್ಥಾನಗಳಲ್ಲಿ ಕಾಂಗ್ರೆಸ್ 36, ಬಿಜೆಪಿ 54, ಜೆಡಿಎಸ್ 30, ಇತರೆ 12 ಸ್ಥಾನಗಳಲ್ಲಿ ಜಯಗಳಿಸಿವೆ. ತುಮಕೂರು ಮತ್ತು ಮೈಸೂರು ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

358 ಪಟ್ಟಣ ಪಂಚಾಯಿತಿಗಳ ಪೈಕಿ ಕಾಂಗ್ರೆಸ್ 141, ಬಿಜೆಪಿ 129 ಮತ್ತು ಜೆಡಿಎಸ್ 29 ಸ್ಥಾನಗಳಲ್ಲಿ ಜಯಗಳಿಸಿದೆ. ಪಕ್ಷೇತರ ಅಭ್ಯರ್ಥಿಗಳು 59 ಕಡೆ ಜಯಗಳಿಸಿದ್ದಾರೆ.

926 ನಗರಸಭೆಗಳಲ್ಲಿ ಕಾಂಗ್ರೆಸ್ 294, ಬಿಜೆಪಿ 355 ಮತ್ತು ಜೆಡಿಎಸ್ 107 ಸ್ಥಾನಗಳಲ್ಲಿ ಜಯಗಳಿಸಿದೆ. 170 ಪಕ್ಷೇತರ ಅಭ್ಯರ್ಥಿಗಳುಗಳು ಗೆಲುವು ಸಾಧಿಸಿದ್ದಾರೆ.

1247 ಪುರಸಭೆಯಲ್ಲಿ ಕಾಂಗ್ರೆಸ್ 532, ಬಿಜೆಪಿ 389, ಜೆಡಿಎಸ್ 211 ಸ್ಥಾನಗಳಲ್ಲಿ ಜಯಗಳಿಸಿದೆ. 115 ಪಕ್ಷೇತರ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆಯ 62 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 19 ಮತ್ತು ಜೆಡಿಎಸ್ 18 ಸ್ಥಾನಗಳಲ್ಲಿ ಜಯಗಳಿಸಿವೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಮೈಸೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲಿವೆ. ಇದರಿಂದಾಗಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಅಧಿಕಾರ ಹಿಡಿಯಲು ಸಾಧ್ಯವಿಲ್ಲ.

ತುಮಕೂರು ಮಹಾನಗರ ಪಾಲಿಕೆ

ತುಮಕೂರು ಮಹಾನಗರ ಪಾಲಿಕೆ

ತುಮಕೂರು ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶವೂ ಅತಂತ್ರವಾಗಿದೆ. 35 ವಾರ್ಡ್‌ಗಳ ಪೈಕಿ ಬಿಜೆಪಿ 12 ಸ್ಥಾನದಲ್ಲಿ ಜಯಗಳಿಸಿದ್ದು, ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ 10 ಸ್ಥಾನಗಳಲ್ಲಿ ಜಯಗಳಿಸಿವೆ.

ಯಾವುದೇ ಮೈತ್ರಿ ಇರಲಿಲ್ಲ

ಯಾವುದೇ ಮೈತ್ರಿ ಇರಲಿಲ್ಲ

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿರಲಿಲ್ಲ. ಏಕಾಂಗಿಯಾಗಿಯೇ ಪಕ್ಷಗಳು ಚುನಾವಣೆ ಎದುರಿಸಿದ್ದವು. ಕೆಲವು ಕಡೆಗಳಲ್ಲಿ ಚುನಾವಣೋತ್ತರ ಮೈತ್ರಿ ಏರ್ಪಡುವ ಸಾಧ್ಯತೆ ಇದೆ.

'ಇನ್ನೂ ಹೆಚ್ಚಿನ ಸ್ಥಾನಗಳಲ್ಲಿ ಜಯಗಳಿಸುವ ವಿಶ್ವಾಸವಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಇರುವುದರಿಂದ ನಿರೀಕ್ಷಿತ ಸ್ಥಾನ ಸಿಗಲಿಲ್ಲ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+