ಉರಿಗೌಡ- ನಂಜೇಗೌಡ ವಿಚಾರವಾಗಿ ಆದಿಚುಂಚನಗಿರಿ ಶ್ರೀ ಆಕ್ರೋಶ: ಮಹತ್ವದ ಸಮಯದಲ್ಲಿ ದೊಡ್ಡ ಯಡವಟ್ಟು ಮಾಡಿಕೊಂಡ BJP ನಾಯಕರು
ರಾಜಕೀಯ ಸಂಚಲನ ಸೃಷ್ಟಿಸಿರುವ ಉರಿಗೌಡ ಮತ್ತು ನಂಜೇಗೌಡರ ಕುರಿತಾದ ಚರ್ಚೆಗೆ ಆದಿಚುಂಚನಗಿರಿಯ ನಿರ್ಮಲಾನಂದ ಶ್ರೀಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಬಿಜೆಪಿ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು, ಮಾರ್ಚ್ 20: ರಾಜ್ಯದಲ್ಲಿ ರಾಜಕೀಯ ಸಂಚಲನ ಸೃಷ್ಟಿಸಿರುವ ಉರಿಗೌಡ ಮತ್ತು ನಂಜೇಗೌಡರ ಕುರಿತಾದ ಚರ್ಚೆಗೆ ಆದಿಚುಂಚನಗಿರಿಯ ನಿರ್ಮಲಾನಂದ ಶ್ರೀಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಶ್ರೀಗಳು ಬಿಜೆಪಿಯ ಒಕ್ಕಲಿಗ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ಬಿಜೆಪಿ ನಾಯಕರು ಮಾಡಿಕೊಂಡಿರುವ ದೊಡ್ಡ ಯಡವಟ್ಟು ಪಕ್ಷಕ್ಕೆ ಹಿನ್ನೆಡೆ ಉಂಟು ಮಾಡಲಿದೆ ಎಂಬ ಮಾತುಗಳು ಕೇಳಿಬಂದಿವೆ.
ಬಿಜೆಪಿ ನಾಯಕರಾದ ಸಿ ಟಿ ರವಿ, ಅಶ್ವತ್ಥ ನಾರಾಯಣ, ಆರ್ ಅಶೋಕ್ ಸೇರಿದಂತೆ ಹಲವು ನಾಯಕರ ಹೆಸರಿಸಿರುವ ಶ್ರೀಗಳು ಮಹತ್ವದ ಸಲಹೆಗಳನ್ನು ನೀಡಿದ್ದಾರೆ. ಉರಿಗೌಡ ನಂಜೇಗೌಡ ವಿಚಾರವನ್ನು ರಾಜ್ಯ ಬಿಜೆಪಿ ನಾಯಕರು ಈಗಲೇ ಕೈ ಬಿಡಬೇಕು. ಇದರಿಂದ ಸಮುದಾಯಕ್ಕೆ ಕಳಂಕ ಉಂಟಾಗುತ್ತಿದೆ. ಆಧಾರರಹಿತ ವಿಚಾರಗಳನ್ನು ಮುನ್ನೆಲೆಗೆ ತರುವುದರಿಂದ ಯುವ ಸಮುದಾಯದ ದಾರಿ ತಪ್ಪಿಸಿದಂತಾಗುತ್ತದೆ ಎಂದು ಶ್ರೀಗಳು ಹೇಳಿದ್ದಾರೆ.

ಈ ವಿಚಾರವಾಗಿ ಮಾತನಾಡುತ್ತಿರುವ ಸಂದರ್ಭ ನಿರ್ಮಲಾನಂದ ಶ್ರೀಗಳ ಮುಖಭಾವದಲ್ಲಿ ಕೋಪದ ಭಾವನೆ ಎದ್ದುಕಾಣುತ್ತಿದೆ. ಉರಿಗೌಡ ಹಾಗೂ ನಂಜೆಗೌಡರ ಕುರಿತು ಆಧಾರವಿದ್ದರೆ ಮಠಕ್ಕೆ ಒಪ್ಪಿಸಿ, ಇಲ್ಲದಿದ್ದರೆ ಅಪೋಲಕಲ್ಪಿತ ವಿಚಾರಗಳನ್ನು ಇಲ್ಲಿಗೇ ನಿಲ್ಲಿಸಿ. ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿಗೆ ಅದರ ಬಗ್ಗೆ ಮಾತನಾಡಿ ಎಂದು ಬಿಜೆಪಿ ನಾಯಕರಿಗೆ ಒತ್ತಿ ಹೇಳಿದ್ದಾರೆ.
ಇದೇ ವೇಳೆ, ಸಚಿವ ಮುನಿರತ್ನ ಅವರಿಗೆ ಆದಿಚುಂಚನಗಿರಿ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ. ಉರಿಗೌಡ ಹಾಗೂ ನಂಜೇಗೌಡ ಸಿನಿಮಾಗೆ ಬಂಡವಾಳ ಹೂಡಲು ನಿರ್ಧರಿಸಿದ್ದ ಮುನಿರತ್ನ ಆ ಯೋಜನೆಯನ್ನು ಕೈಬಿಡಲು ನಿರ್ಧರಿಸಿದ್ದಾರೆ. ಐತಿಹಾಸಿಕ ಸಂಗತಿಗಳನ್ನು ಆಧರಿಸಿದ ಚಿತ್ರದ ಮುಹೂರ್ತ ಮೇ 18 ರಂದು ನಡೆಯಬೇಕಿತ್ತು. ಈ ಚಿತ್ರವನ್ನು ಆರ್ ಎಸ್ ಗೌಡ ಅವರು ನಿರ್ದೇಶಿಸಬೇಕಿತ್ತು.
ಇಂದು ನಿರ್ಮಲಾನಂದ ನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಮುನಿರತ್ನ, ನಿರ್ದಿಷ್ಟ ವರ್ಗದ ಭಾವನೆಗಳಿಗೆ ಧಕ್ಕೆ ತರುವಂತಹ ಸಿನಿಮಾ ಮಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಮುನಿರತ್ನ ಅವರು ಉರಿ ಗೌಡ ನಂಜೇ ಗೌಡ ಎಂಬ ಶೀರ್ಷಿಕೆಯನ್ನು ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿದ್ದರು. ಸಿನಿಮಾ ಮಾಡುವ ಅವರ ನಿರ್ಧಾರಕ್ಕೆ ಸಾರ್ವಜನಿಕರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಂದಲೂ ತೀವ್ರ ವಿರೋಧ ವ್ಯಕ್ತವಾಗಿತ್ತು.
ಈ ವಿಚಾರವಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಬಿಜೆಪಿ ನಾಯಕರ ವಿರುದ್ಧ ಶ್ರೀಗಳು ಪ್ರತಿಭಟನೆ ನಡೆಸಬೇಕು. ಪ್ರತಿಭಟನೆ ನೇತೃತ್ವವನ್ನು ಅವರೇ ವಹಿಸಿಕೊಳ್ಳಬೇಕು. ಬಿಜೆಪಿಯವರು ಒಕ್ಕಲಿಗ ಸಮುದಾಯಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಬಿಜೆಪಿಯವರು ಇಂತಹ ನೂರು ಸಿನಿಮಾ ಮಾಡಲಿ. ನಾವು ಹೆದರುವುದಿಲ್ಲ. ಅವರ ವಿರುದ್ಧ ಹೋರಾಟವನ್ನು ನಡೆಸುತ್ತೇವೆ ಎಂದೂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ವಿಚಾರವಾಗಿ ಒಕ್ಕಲಿಗರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಈ ಪಾತ್ರಗಳನ್ನು ಹೆಣೆಯುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒಕ್ಕಲಿಗರ ಸಂಘ ಒತ್ತಾಯಿಸಿದ್ದು, ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಬೆದರಿಕೆ ಹಾಕಿದೆ.
ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಸ್ಪಟಿಕಪುರಿ ಪೀಠಾಧಿಪತಿ ನಂಜಾವಧೂತ ಸ್ವಾಮೀಜಿ ನೇತೃತ್ವದಲ್ಲಿ ಆಂದೋಲನವನ್ನು ಪ್ರಾರಂಭಿಸುವುದಾಗಿ ಸಂಘ ಎಚ್ಚರಿಸಿದೆ.
ನಾಲ್ಕನೇ ಆಂಗ್ಲೋ- ಮೈಸೂರು ಯುದ್ಧದ ಸಮಯದಲ್ಲಿ ಟಿಪ್ಪು ಸುಲ್ತಾನನನ್ನು ಬ್ರಿಟಿಷರು ಕೊಂದರು ಎಂದು ಇತಿಹಾಸಕಾರರು ಹೇಳಿದ್ದಾರೆ. ಆದರೆ, ಟಿಪ್ಪು ಸಾವಿಗೆ ಉರಿಗೌಡ ಮತ್ತು ನಂಜೇಗೌಡರು ಕಾರಣ ಎಂದು ಬಿಜೆಪಿ ನಾಯಕರು ತಿಳಿಸಿದ್ದಾರೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications