ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಹೆದ್ದಾರಿಗಳಲ್ಲೂ ಇನ್ನು ಟೋಲ್ ಕಟ್ಟಬೇಕು

|
Google Oneindia Kannada News

ಬೆಂಗಳೂರು, ಡಿ.6 : ಇನ್ನು ಮುಂದೆ ರಾಜ್ಯ ಹೆದ್ದಾರಿಗಳಲ್ಲಿಯೂ ಟೋಲ್ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ)ದಡಿ ಅಭಿವೃದ್ಧಿಪಡಿಸುವ ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯರಸ್ತೆಗಳಲ್ಲಿಯೂ ಟೋಲ್ ಶುಲ್ಕ ಸಂಗ್ರಹಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಶನಿವಾರ ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ.ಜಯಚಂದ್ರ ಅವರು, ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಮಾಡಲು ಸಭೆಯಲ್ಲಿ ಒಪ್ಪಿಗೆ ದೊರೆತಿದ್ದು, ಯಾವ ರಸ್ತೆಗಳಲ್ಲಿ ಎಷ್ಟು ಸಂಗ್ರಹ ಮಾಡಬೇಕೆಂದು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.

T.B Jayachandra

ಉತ್ತಮ ರಸ್ತೆಗಳು ಜನರಿಗೆ ಬೇಕು ಎಂದರೆ ಟೋಲ್ ಕಟ್ಟಲೇಬೇಕು ಎಂದು ಹೇಳಿದ ಜಯಚಂದ್ರ ಅವರು, ಪಿಪಿಪಿ ಮಾದರಿಯಲ್ಲಿ ರಾಜ್ಯ ಹೆದ್ದಾರಿಗಳನ್ನು ಸರ್ಕಾರ ಅಭಿವೃದ್ಧಿ ಪಡಿಸಲಿದೆ. ಅಭಿವೃದ್ಧಿ ಪಡಿಸಿದ ರಸ್ತೆಗಳಲ್ಲಿ ಟೋಲ್ ಶುಲ್ಕವನ್ನು ಸಂಗ್ರಹಣೆ ಮಾಡಲಾಗುತ್ತದೆ ಎಂದರು. [ಕಲಬುರಗಿ ಸಂಪುಟ ಸಭೆಯ ತೀರ್ಮಾನಗಳು ಇಲ್ಲಿವೆ]

ಯಾವ ರಾಜ್ಯ ಹೆದ್ದಾರಿಗಳಲ್ಲಿ ಶುಲ್ಕ ಸಂಗ್ರಹಣೆ ಮಾಡಬೇಕು. ರಾಜ್ಯ ಹೆದ್ದಾರಿಗಳ ಶುಲ್ಕ ಎಷ್ಟಿರಬೇಕು? ಎಂಬ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುತ್ತದೆ. ಉತ್ತಮ ರಸ್ತೆಗಳ ನಿರ್ವಹಣೆ ಮಾಡಲು ಟೋಲ್ ಶುಲ್ಕ ಸಂಗ್ರಹಣೆ ಮಾಡುವುದು ಅನಿವಾರ್ಯವಾಗಿದೆ ಎಂದು ಸಚಿವರು ಹೇಳಿದರು.

152 ಕೋಟಿ ಬಿಡುಗಟೆಗೆ ಒಪ್ಪಿಗೆ : ಯಲಹಂಕ-ಗೌರಿಬಿದನೂರು ನಡುವಿನ 76 ಕಿ.ಮೀ ರಸ್ತೆಯನ್ನು ಅಭಿವೃದ್ಧಿಪಡಿಸಲು 152 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

English summary
Users of State highways to pay toll soon in Karnataka. Roads built under A public–private partnership (PPP) model will collect toll soon said Law Minister T.B Jayachandra after cabinet meeting on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X