ಮುಂದೊಂದು ದಿನ ಯುಟಿ ಖಾದರ್ ನಮ್ಮನ್ನೆಲ್ಲಾ ಮೀರಿಸಿ ಬೆಳೆಯಬಹುದು: ಡಿ.ಕೆ.ಶಿವಕುಮಾರ್
ಬೆಂಗಳೂರು, ಸೆಪ್ಟೆಂಬರ್ 30: ಸ್ಪೀಕರ್ ಆಗಿರುವ ಯು.ಟಿ.ಖಾದರ್ ಅವರಿಗೆ ಮಂತ್ರಿ ಸ್ಥಾನ ನೀಡಿ ಎಂದು ಮನವಿ ಮಾಡಿದ್ದೀರಿ, ಅವರು ನಮಗಿಂತ ಎತ್ತರದ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. ಎಸ್.ಎಂ.ಕೃಷ್ಣ, ಜಗದೀಶ್ ಶೆಟ್ಟರ್ ಅವರುಗಳು ಸ್ಪೀಕರ್ ಆಗಿದ್ದರು. ಯಾರ ಹಣೆಯಲ್ಲಿ ಏನು ಬರೆದಿರುತ್ತದೆ ಎಂದು ಯಾರಿಗೂ ತಿಳಿದಿಲ್ಲ, ನೀವು ನಮ್ಮನ್ನೆಲ್ಲಾ ಮೀರಿಸಿ ಮುಂದೊಂದು ದಿನ ಬೆಳೆಯಬಹುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಶನಿವಾರ ನಡೆದ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ನಿನ ನೂತನ ಸೌಹಾರ್ದ ಭವನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಬ್ಯಾರಿ ಭಾಷಿಕ ಸಮುದಾಯ ಸಾಕಷ್ಟು ಕೊಡುಗೆ ನೀಡಿದೆಲೋಕಸಭೆ ಚುನಾವಣೆ ವೇಳೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಬ್ಯಾರಿ ಸಮುದಾಯ ಕಾಂಗ್ರೆಸ್ ಪಕ್ಷದ ಕೈ ಹಿಡಿಯಬೇಕು ಎಂದು ಮನವಿ ಮಾಡಿದರು.

ಎಲ್ಲಾ ಧರ್ಮದವರ ಜೊತೆ ಸ್ನೇಹಭಾವದಿಂದ ಇರುವ ಹಾಗೂ ಎಲ್ಲರನ್ನೂ ಜೊತೆಯಲ್ಲಿ ಕರೆದುಕೊಂಡು ಹೋಗುವ ಸೌಹಾರ್ದಯುತ ಗುಣ ಈ ಸಮುದಾಯಕ್ಕೆ ಇದೆ. ಕನ್ನಡ ಸಾಹಿತ್ಯ, ಸಂಸ್ಕೃತಿ, ಭಾಷೆಗೆ ಬ್ಯಾರಿ ಭಾಷಿಕರು ನೀಡಿರುವ ಕೊಡುಗೆ ಸ್ಮರಣೀಯವಾದುದು. ಹೆಣ್ಣುಮಕ್ಕಳು ಒಡವೆ ಹಾಕಿಕೊಂಡರೆ ಸುಂದರವಾಗಿ ಕಾಣುತ್ತಾರೋ, ಬ್ಯಾರಿ ಭಾಷಿಕರು ಕನ್ನಡವನ್ನು ಸುಂದರಗೊಳಿಸಿದ್ದಾರೆ ಎಂದರು.
ಧರ್ಮ ಯಾವುದಾದರೂ ತತ್ವವೊಂದೇ, ನಾಮ ನೂರಾದರೂ ದೈವವೊಂದೇ, ಪೂಜೆ ಯಾವುದಾದರೂ ಭಕ್ತಿಯೊಂದೇ, ಕರ್ಮ ಯಾವುದಾದರೂ ನಿಷ್ಠೆಯೊಂದೆ, ದೇವನೊಬ್ಬ ನಾಮ ಹಲವು ಎನ್ನುವ ಮಾತಿನಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂರಾರು ದೇವಾಲಯಗಳಿಗೆ ದಾನ- ಧರ್ಮ ಮಾಡಿದವರು ಬ್ಯಾರಿ ಭಾಷಿಕರು. ಮುಲ್ಕಿಯ ದುರ್ಗಾಪರಮೇಶ್ವರಿ ದೇವಸ್ಥಾನ ಕಟ್ಟಿಸಿದ್ದು ಬಪ್ಪ ಬ್ಯಾರಿ ಎಂದು ಇದೇ ವೇಳೆ ಸ್ಮರಿಸಿಕೊಂಡರು.
ಬ್ಯಾರಿ ಸಮುದಾಯದ ಭವನಕ್ಕೆ ಸಹಾಯ ಮಾಡಲು ಅಥವಾ ನಿಮಗೆ ಆಶ್ವಾಸನೆಗಳನ್ನು ನೀಡಲು ಇಲ್ಲಿಗೆ ಬಂದಿಲ್ಲ, ಬದಲಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ ಕಾರಣ ನಿಮ್ಮ ಋಣ ತೀರಿಸಲು ಬಂದಿದ್ದೇನೆ. ದೇಶದಲ್ಲಿ ಬದಲಾವಣೆಯ ಗಾಳಿ ಎಬ್ಬಿಸಿ, ಸಮರ್ಥವಾದ ಉತ್ತರ ನೀಡಲು ಕಾರಣರಾಗಿದ್ದೀರಿ. ಎಲ್ಲಾ ಧರ್ಮ, ಜಾತಿಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಸರ್ಕಾರ ನಮ್ಮದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಧರ್ಮದವರನ್ನು ಕಾಂಗ್ರೆಸ್ ಸರ್ಕಾರ ಕಾಪಾಡುತ್ತದೆ ಎಂದು ಭರವಸೆ ನೀಡಿದರು.
ಹುಟ್ಟಿದ ಊರಿನಲ್ಲೇ ಉದ್ಯೋಗ ಸೃಷ್ಟಿ ಮಾಡಿ:
ಬಿಜೆಪಿ ಸರ್ಕಾರ ಇದ್ದ ವೇಳೆ ಹೂಡಿಕೆದಾರರ ಸಮಾವೇಶದ ಮೂಲಕ 10 ಲಕ್ಷ ಕೋಟಿ ಬಂಡವಾಳ ರಾಜ್ಯಕ್ಕೆ ಹರಿದು ಬಂದಿತು ಎಂದು ಹೇಳಿದ್ದರು. ಆದರೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ಒಬ್ಬರೂ ಬಂದಿರಲಿಲ್ಲ. ಗಲ್ಫ್ ಸೇರಿದಂತೆ ಹೊರದೇಶಗಳಿಗೆ ಹೋಗದೆ, ಹುಟ್ಟಿದ ಊರಿನಲ್ಲಿ ಉದ್ಯೋಗ ಸೃಷ್ಟಿ ಮಾಡಿ, ಪ್ರತಿಭಾ ಪಲಾಯನ ರಾಜ್ಯದ ಅಭಿವೃದ್ಧಿಗೆ ಮಾರಕ ಎಂದು ತಿಳಿಸಿದರು.
ಮಂಗಳೂರು ಹೂಡಿಕೆದಾರರ ಸ್ವರ್ಗ. ಎಲ್ಲಾ ರೀತಿಯಲ್ಲೂ ಅಲ್ಲಿ ಅವಕಾಶವಿದ್ದು, ಸರ್ಕಾರ ನಿಮ್ಮ ಬೆನ್ನಿಗೆ ನಿಲ್ಲುತ್ತದೆ. ಸ್ಥಳೀಯವಾಗಿ ಉದ್ಯೋಗ ಸೃಷ್ಟಿಮಾಡಿ, ಕೋಮು ಗಲಭೆಯ ಪ್ರಯೋಗಶಾಲೆ ಎನ್ನುವ ಹೆಸರು ಅಳಿಸಿ ಹಾಕಿ. ಮಲೇಷ್ಯಾ ಮಾದರಿಯಲ್ಲಿ ಟ್ವಿನ್ ಸಿಟಿಯನ್ನು ಮೊದಲು ಕಟ್ಟಿದವರೇ ಬ್ಯಾರಿ ಸಮುದಾಯದವರು, ನಿಮ್ಮ ಕೈಲಿ ಎಲ್ಲವೂ ಸಾಧ್ಯ ಎಂದರು.
ಸಮುದಾಯದ ಬೆಳವಣಿಗೆಗೆ ನಿವೇಶನಗಳ ಅಗತ್ಯವಿದೆ ಎಂದು ಮನವಿ ಮಾಡಿದ್ದೀರಿ, ಕಾನೂನಿ ಚೌಕಟ್ಟಿನಲ್ಲಿ ಏನು ಸಾಧ್ಯತೆ ಇದ್ದರೂ ಸಹಾಯ ಮಾಡಲಾಗುವುದು. ಮುಖ್ಯಮಂತ್ರಿಗಳು ಕೈಗೆ ಪೆನ್ ಕೊಟ್ಟಿದ್ದಾರೆ, ಇದರಿಂದ ಏನು ಬೇಕಾದರೂ ಮಾಡಬಹುದು "You Can Make More Friends, You can Make More Enemies" ನಾವು ಸ್ನೇಹ ಸಂಪಾದನೆ ಮಾಡೋಣ. ನನ್ನ ಮನೆ ಹಾಗೂ ಮುಖ್ಯಮಂತ್ರಿಗಳ ಮನೆ ಬಾಗಿಲು ಸದಾ ತೆರೆದಿರುತ್ತದೆ ಎಂದು ಹೇಳಿದರು.
ರಾಜ್ಯಸಭೆಗೆ ಕಳಿಸುತ್ತೇವೆ ಎಂದರೂ ಫಾರೂಕ್ ಬರಲಿಲ್ಲ:
ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಬಿ.ಎಂ.ಫಾರೂಕ್ ಅವರಿಗೆ ನಾನು ಮತ್ತು ಸಿದ್ದರಾಮಯ್ಯ ಅವರು ಅನೇಕ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ಮಾಡಿ, ರಾಜ್ಯಸಭೆ ಸದಸ್ಯನನ್ನಾಗಿ ಮಾಡುತ್ತೇವೆ ಎಂದು ಹೇಳಿದೆವು. ಆದರೆ ಕುಮಾರಸ್ವಾಮಿ ಅವರೇ ಮುಖ್ಯ ಎಂದು ಅವರ ಜೊತೆ ಹೋದರು. ಮುಂದಕ್ಕೆ ಈ ತಪ್ಪು ಮಾಡಲು ಹೋಗಬೇಡಿ, ಇಡೀ ಸಮುದಾಯ ಬಳಲುತ್ತಾ ಇದೆ ಎಂದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು











Click it and Unblock the Notifications