ಬಿಜೆಪಿ ಮುಳುಗಿಸುವ 5 ನಾಯಕರ ಪಟ್ಟಿ ಕೊಟ್ಟ ಖಾದರ್!

Posted By: Gururaj
Subscribe to Oneindia Kannada

ಬೆಂಗಳೂರು, ಜನವರಿ 03 : 'ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಮುಳುಗಿಸಲು ಪಕ್ಷದ 5 ನಾಯಕರು ಸಾಕು. ಜೈಲಿಗೆ ಹೋಗಿ ಬಂದವರನ್ನು ಜನರು ಮರೆಯುತ್ತಾರೆ. ಆದರೆ, ಅನ್ನ, ಕ್ಷೀರ, ಮನೆ ಕೊಟ್ಟವರನ್ನು ಮರೆಯುವುದಿಲ್ಲ' ಎಂದು ಯು.ಟಿ.ಖಾದರ್ ಹೇಳಿದರು.

ಯುಟಿ ಖಾದರ್ ಸಂದರ್ಶನ

ಬುಧವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದರು.

ಅಭ್ಯರ್ಥಿಗಳ ಘೋಷಣೆಗೆ ತಡೆ, ಏನಿದು ಅಮಿತ್ ಶಾ ಲೆಕ್ಕಾಚಾರ?

'ಗುಜರಾತ್‌ನಲ್ಲಿಯೇ ಮೋದಿ ಹವಾ ಇಲ್ಲ. ಇನ್ನು ಕರ್ನಾಟಕದಲ್ಲಿ ನಡೆಯುತ್ತದೆಯೇ?. ಗುಜರಾತ್‌ನಲ್ಲಿ ರಾಹುಲ್ ಗಾಂಧಿ ಅವರಿಗೆ ಸಿದ್ದರಾಮಯ್ಯ, ಖರ್ಗೆ, ಪರಮೇಶ್ವರ ಅವರಂತಹ ನಾಯಕರು ಸಿಕ್ಕಿದ್ದರೆ ಬಿಜೆಪಿ ಧೂಳಿಪಟವಾಗುತ್ತಿತ್ತು' ಎಂದು ಹೇಳಿದರು.

ಕರ್ನಾಟಕ ಚುನಾವಣೆ ಬಗ್ಗೆ ರಾಹುಲ್ - ಸಿದ್ದು ಫೋನ್ ಸಂಭಾಷಣೆ

'ಅನ್ನಭಾಗ್ಯ ಯೋಜನೆ ಕೇಂದ್ರ ಸರ್ಕಾರದ್ದು ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಹಾಗಾದರೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯದಲ್ಲಿ ಯೋಜನೆ ಏಕೆ ಜಾರಿಗೆ ಬಂದಿಲ್ಲ?' ಎಂದು ಖಾದರ್ ಪ್ರಶ್ನಿಸಿದರು. ಖಾದರ್ ಹೇಳಿದ 5 ನಾಯಕರ ಪಟ್ಟಿ ಇಲ್ಲಿದೆ...

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ

‘ಒಬ್ಬರು ಸಂವಿಧಾನ ಬದಲಿಸಬೇಕು ಎಂದು ಹೇಳುತ್ತಾರೆ' ಎಂದು ಯು.ಟಿ.ಖಾದರ್ ಕೇಂದ್ರ ಕೌಶಾಲ್ಯಾಭಿವೃದ್ಧಿ ಸಚಿವ, ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗ್ಡೆ ಬಿಜೆಪಿ ಮುಳುಗಿಸುತ್ತಾರೆ ಎಂದರು.

'ಬೆಂಕಿ ಹಚ್ಚಬೇಕು'

'ಬೆಂಕಿ ಹಚ್ಚಬೇಕು'

‘ಒಬ್ಬ ಬಿಜೆಪಿ ನಾಯಕರು ಬೆಂಕಿ ಹಚ್ಚಬೇಕು' ಎಂದು ಹೇಳುತ್ತಾರೆ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಹೆಸರು ಹೇಳದೆ ಬಿಜೆಪಿ ಮುಳುಗಿಸುತ್ತಾರೆ ಎಂದು ಖಾದರ್ ಹೇಳಿದರು.

ಶೋಭಾ ಕರಂದ್ಲಾಜೆ

ಶೋಭಾ ಕರಂದ್ಲಾಜೆ

ಯು.ಟಿ.ಖಾದರ್ ಅವರು ಹೇಳಿದ ಬಿಜೆಪಿ ಮುಳುಗಿಸುವ ನಾಯಕರ ಪಟ್ಟಿಯಲ್ಲಿ ಶೋಭಾ ಕರಂದ್ಲಾಜೆ ಅವರನ್ನು ಸೇರಿಸಿದರು. ಇತ್ತೀಚಿನ ದಿನಗಳಲ್ಲಿ ತಮ್ಮ ಉಗ್ರ ಭಾಷಣದಿಂದಲೇ ಉಡುಪಿ-ಚಿಕ್ಕಮಗಳೂರು ಸಂಸದೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ ಸುದ್ದಿ ಮಾಡುತ್ತಿದ್ದಾರೆ.

ಗೋ.ಮಧುಸೂದನ್

ಗೋ.ಮಧುಸೂದನ್

ಕೆಲವು ದಿನಗಳ ಹಿಂದೆ ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದ ಗೋ.ಮಧುಸೂದನ್ ಅವರು ಸಹ ಕರ್ನಾಟಕದಲ್ಲಿ ಪಕ್ಷವನ್ನು ಮುಳುಗಿಸುವ ನಾಯಕರು ಎಂಬುದು ಖಾದರ್ ಹೇಳಿಕೆ.

ನಳೀನ್ ಕುಮಾರ್ ಕಟೀಲ್

ನಳೀನ್ ಕುಮಾರ್ ಕಟೀಲ್

ಸಚಿವ ಯು.ಟಿ.ಖಾದರ್ ಅವರ ಪ್ರಕಾರ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಅವರು ಕರ್ನಾಟಕದಲ್ಲಿ ಪಕ್ಷವನ್ನು ಮುಳುಗಿಸುತ್ತಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Food and Public Distribution minister U.T.Khader slammed Karnataka BJP leaders and said that 5 party leaders enough to destroy the image of party in Karnataka.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ