ಉತ್ತರ ಕರ್ನಾಟಕ ನದಿ ನೀರು ಯೋಜನೆಗಳ ಜಾರಿಗೆ ಗಡುವು ನೀಡಿದ ರೈತರು: ಹೋರಾಟದ ಎಚ್ಚರಿಕೆ

ಹುಬ್ಬಳ್ಳಿ, ಡಿಸೆಂಬರ್ 18: ಉತ್ತರ ಕರ್ನಾಟಕ ಭಾಗದ ಅನೇಕ ವರ್ಷಗಳ ಬೇಡಿಕೆಯಾಗಿರುವ ರೈತರ ಜೀವನಾಡಿಯಾಗಿರುವ ಮಹದಾಯಿ ನದಿ ನೀರು ಯೊಜನೆ, ಕಳಸಾ ಮತ್ತು ಬಂಡೂರಿ ಯೋಜನೆಯನ್ನು ಮುಂದಿನ ಲೋಕಸಭಾ ಚುನಾವಣೆಗೂ ಮೊದಲೇ ಅನುಷ್ಠಾನವಾಗಬೇಕು ಎಂದು ರೈತ ಸೇನಾ ಆಗ್ರಹಿಸಿದೆ. ಒಂದು ವೇಳೆ ಸರ್ಕಾರಗಳು ಈ ಬಗ್ಗೆ ಕಾಳಜಿ ವಹಿಸದಿದ್ದರೆ ಉಗ್ರ ಹೋರಾಟ ಹಾದಿ ತುಳಿಯುವುದಾಗಿ 'ರೈತ ಸೇನಾ' ಎಚ್ಚರಿಕೆ ನೀಡಿದೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸೇನಾ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಹದಾಯಿ ಹೋರಾಟಗಾರ ವಿರೇಶ ಸೊಬರದಮಠ ಅವರು, ಉತ್ತರ ಕರ್ನಾಟಕ ಭಾಗದ ಬಹು ದಿನಗಳ ಬೇಡಿಕೆಯಾಗಿರುವ ಮಹದಾಯಿ, ಕಳಸಾ ಮತ್ತು ಬಂಡೂರಿ ಯೋಜನೆಯನ್ನು ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

Uttar Karnataka Raita Sena Given Dead line to Govt for Implement of Mahadayi, Kalasa Banduri Project

ಅನೇಕ ವರ್ಷಗಳಿಂದ ಮಹದಾಯಿಗಾಗಿ ಹೋರಾಟ ಮಾಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲ ಕಾನೂನು ತೊಡಕು ನಿವಾರಿಸಿ ಯೋಜನೆ ಜಾರಿಗೊಳಿಸಿದರೆ ಜನರಿಗೆ ಅನುಕೂಲವಾಗಲಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಸಮಸ್ಯೆ ನಿವಾರಣೆ ಮಾಡುವುದು ದೊಡ್ಡದಲ್ಲ. ಮನಸ್ಸು ಮಾಡಬೇಕು. ಲೋಕಸಭೆ ಚುನಾವಣೆಯ ಮುಂಚಿತವಾಗಿ ಯೋಜನೆ ಜಾರಿಗೊಳಿಸಲು ಪ್ರಯತ್ನ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಮಳೆ ಆಗದೇ ಉ.ಕ ರೈತರಿಗೆ ಭಾರೀ ಸಂಕಷ್ಟ

ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗದೆ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಜನ, ಜಾನುವಾರುಗಳು ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಮುಂಗಾರು ಹಂಗಾಮಿನ ಬಿತ್ತನೆ ಮಾಡಿಲ್ಲ. ಇಲ್ಲೆಲ್ಲ ಸಂಪೂರ್ಣ ಬರಗಾಲ ಆವರಿಸಿದೆ. ಸರ್ಕಾರ ಎಚ್ಚೆತ್ತುಕೊಂಡು ಬರಗಾಲ ಘೋಷಿಸಿ, ಪರಿಹಾರ ಕಾರ್ಯ ಕೈಗೊಳ್ಳಬೇಕು.‌ ಜನಜಾನುವಾರುಗಳು ಕುಡಿಯುವ ನೀರಿಲ್ಲದೇ ಹಾಹಾಕಾರ ಪಡುತಿದ್ದು, ಈ ಯೋಜನೆ ಜಾರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ವಿವರಿಸಿದರು.

Uttar Karnataka Raita Sena Given Dead line to Govt for Implement of Mahadayi, Kalasa Banduri Project

ಈಗಾಗಲೇ ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್ ನೇತೃತ್ವದ ನ್ಯಾಯಮಂಡಳಿ ತೀರ್ಪು ನೀಡಿ ಆಗಿದೆ. ಕರ್ನಾಟಕಕ್ಕೆ ಒಟ್ಟು 13.7 ಟಿಎಂಸಿ ನೀರು ಹಂಚಿಕೆ ಮಾಡಿದ್ದರು ಸಹಿತ ಕಾಮಗಾರಿ ನಡೆಯುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ನ್ಯಾಯಮಂಡಳಿಯಿಂದ ನೀರು ಹಂಚಿಕೆ ಆಗಿದೆ

ಮಹದಾಯಿ ಜಲ ವಿವಾದ ನ್ಯಾಯಮಂಡಳಿಯು ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಸೇರಬೇಕಾದ ನೀರನ್ನು ಹಂಚಿಕೆ ಮಾಡಿದೆ. ಕರ್ನಾಟಕಕ್ಕೆ ಕುಡಿಯುವ ನೀರಿಗಾಗಿ ಕೇವಲ 5.5 ಟಿಎಂಸಿ ಹಂಚಿಕೆ ಮಾಡಿದೆ. ಈ ಪೈಕಿ ಮಲಪ್ರಭಾ ಡ್ಯಾಂಗೆ 4 ಟಿಎಂಸಿ ನೀರು ಬಿಡಬೇಕು ಎಂದು ಸೂಚಿಸಿದೆ.

ಕರ್ನಾಟಕಕ್ಕೆ ಒಟ್ಟು 13.07 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಕಳಸಾ ನಾಲೆಯಿಂದ 1.72 ಟಿಎಂಸಿ, ಬಂಡೂರಿ ನಾಲೆಯಿಂದ 2.18 ಟಿಎಂಸಿ, ಮಹದಾಯಿ ಜಲನಯನ ಪ್ರದೇಶದ ವ್ಯಾಪ್ತಿಯಲ್ಲಿ ಬಳಕೆ ಮಾಡಲು 1.50 ಟಿಎಂಸಿ ನೀರು ಹಾಗೂ ವಿದ್ಯುಚ್ಛಕ್ತಿಗೆ ಉತ್ಪಾದನೆಗೆ 8.02 ಟಿಎಂ ನೀರು ಹಂಚಿಕೆ ಮಾಡಲಾಗಿದೆ.

ನೀರು ತಿರುಗಿಸಲು ಸಹ ಒಪ್ಪಿಗೆ ಸಿಕ್ಕಿದೆ

ಅವಳಿನಗರಗಳಾದ ಹುಬ್ಬಳ್ಳಿ-ಧಾರವಾಡ ನಗರದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಹದಾಯಿ ನದಿಯಿಂದ ಮಲಪ್ರಭಾ ಜಲಾಶಯಕ್ಕೆ ನೀರು ತಿರುಗಿಸುವ ಕರ್ನಾಟಕದ ಪ್ರಸ್ತಾಪಕ್ಕೆ ನ್ಯಾಯ ಮಂಡಳಿ ಸಹ ಒಪ್ಪಿಗೆ ನೀಡಿದೆ ಎಂದರು.

ಕುಡಿಯುವ ಉದ್ದೇಶಕ್ಕಾಗಿ 7.5 ಟಿಎಂಸಿ ನೀರು ಹಂಚಿಕೆ ಮಾಡುವಂತೆ ಕರ್ನಾಟಕ, ನ್ಯಾಯಮಂಡಳಿಗೆ ಮನವಿ ಮಾಡಿತ್ತು. ಆದರೆ ಇದುವರೆಗೆ ಯಾವುದೇ ರೀತಿಯ ಯೋಜನೆ ಬಗ್ಗೆ ಉಭಯ ಸರ್ಕಾರ ಗಮನ ಹರಿಸುತ್ತಿಲ್ಲ ಇಲ್ಲ. ನಿಮ್ಮ ನಿರ್ಲಕ್ಷ್ಯ ಹೀಗೆ ಮುಂದುವರಿದರೆ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+