ಕೊನೆಗೂ ವಿ. ಸೋಮಣ್ಣ ಮನವೊಲಿಸಿದ ಬಿಜೆಪಿ ಹೈಕಮಾಂಡ್: ಈ ಕ್ಷೇತ್ರದಿಂದ ಸ್ಪರ್ಧೆ?
ಬೆಂಗಳೂರು, ಡಿಸೆಂಬರ್ 09: 2023 ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ವಿ ಸೋಮಣ್ಣ ಹೀನಾಯವಾಗಿ ಸೋಲು ಅನುಭವಿಸಿದ್ದು, ಬಹಿರಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಬೇಡಿಕೆ ಇಟ್ಟಿದ್ರು. ಆದರೆ, ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದ ಬಳಿಕೆ ಅಸಮಾಧಾನಗೊಂಡ, ಪಕ್ಷ ತ್ಯಾಗಕ್ಕೆ ವಿ ಸೋಮಣ್ಣ ಮುಂದಾಗಿದ್ದು, ಕೊನೆಗೂ ವಿ ಸೋಮಣ್ಣ ಮನವೊಲಿಸುವಲ್ಲಿ ಯಶಸ್ವಿಯಾಗಿದೆ.
ಹೌದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಸೋಮಣ್ಣ ಅವರಿಗೆ ಸ್ಥಾನ ಕೈ ತಪ್ಪಿದ್ದರಿಂದ ಅಸಮಾಧಾನಗೊಂಡು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ,ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದ್ದವು. ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಕೊಟ್ಟಿರುವ ಟಾರ್ಗೆಟ್ ತಲುಪುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಅಸಮಾಧಾನಿತ ಬಿಜೆಪಿ-ಜೆಡಿಎಸ್ ನಾಯಕರಿಗೆ ಗಾಳ ಹಾಕಿದ್ರು. ಅದರಂತೆ ಬಿಜೆಪಿ ಹಿರಿಯ ನಾಯಕ ಹಾಗೂ ಲಿಂಗಾಯತ ನಾಯಕರಾಗಿರುವ ವಿ ಸೋಮಣ್ಣ ಅವರಿಗೂ ಗಾಳ ಹಾಕಿದ್ದಾರೆ ಎನ್ನಲಾಗಿತ್ತು. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಬಾಕಿ ಇರುವ ಸಂದರ್ಭದಲ್ಲಿ ವಿ ಸೋಮಣ್ಣ ಪಕ್ಷ ತೊರೆದು ಕಾಂಗ್ರೆಸ್ ಗೆ ಹೋಗುವುದರಿಂದ ವಿಧಾನಸಭಾ ಚುನಾವಣೆಯಲ್ಲಿ ಆದ ಎಫೆಕ್ಟ್ ಲೋಕಸಭಾ ಚುನಾವಣೆಯಲ್ಲೂ ಆಗುತ್ತದೆ ಎಂದು ರಾಜ್ಯ ನಾಯಕರು ಹೈಕಮಾಂಡ್ ನಾಯಕರಿಗೆ ತಿಳಿಸಿದ್ದಾರೆ.

ಈ ಹಿಂದೆ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯಲ್ಲಿ ಹಿರಿಯ ಲಿಂಗಾಯತ ನಾಯಕರಿಗೆ ಟಿಕೆಟ್ ಕಡೆಗಣಿಸಿದ್ದು, ಬಿಜೆಪಿ ಸೋಲಿಗೆ ಕಾರಣ ಎಂದು ಹಲವು ಬಿಜೆಪಿಯ ಹಿರಿಯ ನಾಯಕರೇ ಬಹಿರಂಗವಾಗಿ ಹೇಳಿದ್ರು, ಅಲ್ಲದೇ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಲಿಂಗಾಯತ ನಾಯಕರಿಗೆ ಬಿಜೆಪಿ ಪಕ್ಷದಲ್ಲಿ ಮನ್ನಣೆ ಇಲ್ಲ, ಲಿಂಗಾಯತರಿಗೆ ಅನ್ಯಾಯ ಮಾಡಿದೆ ಎಂದು ಕಾಂಗ್ರೆಸ್ ಅಸ್ತ್ರವನ್ನಾಗಿ ಮಾಡಿಕೊಂಡಿತು.
ಇನ್ನೂ ವಿ ಸೋಮಣ್ಣ ಪಕ್ಷ ನಾಯಕರ ಮೇಲೆ ಅಸಮಾಧಾನಗೊಂಡು ಪಕ್ಷ ತ್ಯಾಜಿಸಿದರೇ ಲೋಕಸಭಾ ಚುನಾವಣೆ ಹೊತ್ತಲಿ ಸಾಕಷ್ಟು ಡ್ಯಾಮೇಜ್ ಆಗುತ್ತೆ. ಅಲ್ಲದೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ, ಮೈಸೂರು ಹಾಗೂ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹಿನ್ನಡೆಯಾಗುವ ಸಾದ್ಯತೆ ಇದೆ. ಏಕೆಂದರೆ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ಮಾತ್ರವಲ್ಲದೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ವಿ ಸೋಮಣ್ಣ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ. ಇನ್ನೂ ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಠಮಾನ್ಯಗಳು ಹಾಗೂ ಸ್ವಾಮಿಗಳ ಜೊಗೆಗೆ ವಿ ಸೋಮಣ್ಣ ಅವರು ಉತ್ತಮವಾದ ಸಂಬಂಧ ಹೊಂದಿದ್ದು, ಬಿಜೆಪಿ ನಾಯಕರಿಂದ ನನಗೆ ಚುನಾವಣೆಯಲ್ಲಿ ಸೋಲಾಯಿತು ಎಂದು ಮುಕ್ತವಾಗಿ ಹೇಳಿಕೊಂಡಿದ್ದಾರೆ.
ಇನ್ನೂ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ನ ಆಪರೇಷನ್ ಹಸ್ತಕ್ಕೆ ಬ್ರೇಕ್ ಹಾಕುವ ಮೂಲಕ ತಮ್ಮ ನಾಯಕರನ್ನ ಹಿಡಿದಿಟ್ಟುಕೊಳ್ಳುವ ತಂತ್ರಕ್ಕೆ ಮುಂದಾಗಿದೆ. ಹೀಗಾಗಿ ವಿ ಸೋಮಣ್ಣ ಅವರು ಪಕ್ಷ ಬಿಡುವುದರಿಂದ ಸಾಕಷ್ಟು ಸಮಸ್ಯೆಯಾಗಲಿದೆ ಎಂಬ ಲೆಕ್ಕಾಚಾರದಲ್ಲಿ ಕೇಂದ್ರ ಸಚಿವರೊಬ್ಬರು ವಿ ಸೋಮಣ್ಣ ಅವರನ್ನ ಮನವೊಲಿ ಪಕ್ಷದಲ್ಲಿಯೇ ಉಳಿಯುವಂತೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡುವ ಆಫರ್ ನ್ನ ಬಿಜೆಪಿ ನಾಯಕರು ನೀಡಿದ್ದಾರೆ. ತುಮಕೂರು ಕ್ಷೇತ್ರದಿಂದ ನೀವು ಅಥವಾ ನಿಮ್ಮ ಪುತ್ರ ಯಾರಾದರೂ ಸರಿ ಈ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ಆಫರ್ ನೀಡಿದ್ದಾರೆ ಎನ್ನಲಾಗಿದ್ದು, ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಸಿದ್ದತೆ ನಡೆಸಿದ್ದಾರೆ.
ಒಟ್ನಲಿ, ಬಿಜೆಪಿ ಗೆ ಗುಡ್ ಬೈ ಹೇಳಿ ಕೈ ಹಿಡಿಯಲು ಮುಂದಾಗಿದ್ದ ವಿ ಸೋಮಣ್ಣ ಅವರನ್ನ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದ್ದು, ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯಿಂದ ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನವನ್ನ ಶಮನಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಹಲವು ತಂತ್ರಗಾರಿಕೆಯನ್ನ ನಡೆಸಿದೆ. ಇತ್ತ ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಉತ್ತರ ಕರ್ನಾಟಕ ಭಾಗದ ನಾಯಕರ ಅಸಮಾಧಾನಕ್ಕೆ ಮದ್ದು ಅರೆಯಲು ಬಿಜೆಪಿ ಮಾಸ್ಟರ್ ಪ್ಲಾನ್ ನಡೆಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications