ವಿ. ಸೋಮಣ್ಣ, ಅರವಿಂದ ಲಿಂಬಾವಳಿ ಕಾಂಗ್ರೆಸ್ ಸೇರ್ಪಡೆ: ಜಿ ಪರಮೇಶ್ವರ್ ಸುಳಿವು?
ತುಮಕೂರು, ನವೆಂಬರ್ 24: ಸೂಕ್ತ ಸ್ಥಾನಮಾನ ಸಿಗದೆ ಬಿಜೆಪಿಯಿಂದ ದಿನೇ ದಿನೆ ದೂರವಾಗುತ್ತಿರುವ ಮಾಜಿ ಸಚಿವ ವಿ ಸೋಮಣ್ಣ ಹಾಗೂ ಅರವಿಂದ ಲಿಂಬಾವಳಿ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಸುಳಿವು ನೀಡಿದ್ದಾರೆ.
ಬಿಜೆಪಿಯ ನಾಯಕರು ಕಾಂಗ್ರೆಸ್‌ಗೆ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆ ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ಅತೃಪ್ತ ಬಿಜೆಪಿ ನಾಯಕರಾದ ವಿ ಸೋಮಣ್ಣ ಮತ್ತು ಅರವಿಂದ ಲಿಂಬಾವಳಿ ಅವರು ಹಳೆಯ ಪಕ್ಷದ ಕಡೆಗೆ ಹೆಚ್ಚು ಹತ್ತಿರವಾಗುತ್ತಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟಿದ್ದಾರೆ.

ಬಿಜೆಪಿಯ ಹಿರಿಯ ನಾಯಕರು ಕಾಂಗ್ರೆಸ್ ಸೇರುವ ಕುರಿತು ಕೆಪಿಸಿಸಿ ಅಧ್ಯಕ್ಷರ ಮಟ್ಟದಲ್ಲಿ ಮಾತುಕತೆ ನಡೆಸಲಾಗುವುದು. ವಿ ಸೋಮಣ್ಣ ಅವರು ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಾರೆ. ನಾನು ಡಿಸೆಂಬರ್ 6 ರಂದು ಸಮಾರಂಭದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆ ಅವಧಿಯಿಂದಲೂ ಬಿಜೆಪಿಯ ಹಿರಿಯ ನಾಯಕ ವಿ ಸೋಮಣ್ಣ ಪಕ್ಷದ ವಿರುದ್ಧ ಅಸಮಾಧಾನದ ಮಾತುಗಳನ್ನು ಆಡುತ್ತಲೇ ಬಂದಿದ್ದಾರೆ. ವಿಧಾನಸಭಾ ಚುನಾವಣೆ ಬಳಿಕವೂ ತಮ್ಮ ಹಿರಿಯತನಕ್ಕೆ ಆದರೂ ರಾಜ್ಯಾಧ್ಯಕ್ಷ ಸ್ಥಾನವನ್ನು ಕೊಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಹೈಕಮಾಂಡ್ ಅವರನ್ನು ಸಂಪೂರ್ಣ ಬದಿಗೊತ್ತಿದಂತೆ ಕಾಣುತ್ತಿದೆ.
ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಟಿಕೆಟ್ ಸಿಗುವ ಯಾವುದೇ ಭರವಸೆ ಕಾಣದ ಹಿನ್ನೆಲೆಯಲ್ಲಿ ಡಿಸೆಂಬರ್ 6ರವರೆಗೆ ಕಾದುನೋಡುವ ನಿರ್ಧಾರಕ್ಕೆ ಸೋಮಣ್ಣ ಬಂದಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅವರು ಗೆಲ್ಲುವುದಿಲ್ಲ ಎಂದು ಗೊತ್ತಿದ್ದರೂ ಅವರಿಗೆ ಟಿಕೆಟ್ ನೀಡಲಾಗಿತ್ತು, ಅದರಂತೆ ಅವರು ಅಲ್ಲಿ ಸೋತರು. ಬಳಿಕ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗದೆ ಪರದಾಡುವಂತಾಗಿದೆ.

ಬಿಎಸ್ ಯಡಿಯೂರಪ್ಪ ಅವರ ಮಗನಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಿದಂತೆ ತಾಮಗಾದರೂ ಪರವಾಗಿಲ್ಲ ತಮ್ಮ ಮಗನಿಗಾದರೂ ಪಕ್ಷ ಸ್ಥಾನಮಾನ ನೀಡಿದರೆ ಅವರು ಸುಮ್ಮನಾಗುತ್ತಿದ್ದರೂ ಆದರೆ ಹೈಕಮಾಂಡ್ ಅವರನ್ನು ಗೌರವಿಸಿದಂತೆ ಕಾಣುತ್ತಿಲ್ಲ. ಹೀಗಾಗಿ ಅವರು ಬಿಜೆಪಿ ಬಿಡುವ ಹಂತದಲ್ಲಿ ಇದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ.
ಅವರಂತೆ ಬಿಜೆಪಿಯ ಮತ್ತೊಬ್ಬ ಹಿರಿಯ ನಾಯಕ ಆರ್‌ಎಸ್‌ಎಸ್‌ಗೆ ಹತ್ತಿರವಿರುವ ದಲಿತ ನಾಯಕ ಅರವಿಂದ ಲಿಂಬಾವಳಿ ಅವರಿಗೂ ಪಕ್ಷ ಅನ್ಯಾಯ ಮಾಡುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆರ್‌ಎಸ್‌ಎಸ್‌ಗೆ ಹತ್ತಿರದ್ದರಿಂದಲೇ ಅವರಿಗಲ್ಲದೆ ಅವರ ಪತ್ನಿಗೆ ಟಿಕೆಟ್ ನೀಡಲಾಗಿತ್ತಾದರೂ ಅವರ ಹಿರಿತನಕ್ಕೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗಬಹುದು ಎಂದು ಭಾವಿಸಲಾಗಿತ್ತು. ಈಗ ಅದೂ ಇಲ್ಲ ಎನ್ನುತ್ತಿದಂತೆ ಅವರೂ ಕೂಡ ಈಗ ಸಿಟ್ಟಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿರುವ ಅರವಿಂದ ಲಿಂಬಾವಳಿ ಅವರು ಸಿದ್ದರಾಮಯ್ಯ ಅವರು ಹಿಂದುಳಿದವರ ಪ್ರಗತಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಹಿಂದೆ ಅವರು ಈ ಮಾತುಗಳನ್ನು ಹೇಳಿದ ಹಿನ್ನೆಲೆ ಇಲ್ಲ. ಈಗ ಅವರು ಸಿದ್ದರಾಮಯ್ಯ ಅವರನ್ನು ಹೊಗಳಿರುವುದರಿಂದ ಕಾಂಗ್ರೆಸ್‌ಗೆ ಹತ್ತಿರವಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಜೊತೆಗೆ ಮಾತುಕತೆ ನಡೆಸಿರುವ ಸೋಮಣ್ಣ ಅವರು ಡಿಸೆಂಬರ್ 15 ರ ನಂತರ ಅಂದ್ರೆ ಬೆಳಗಾವಿಯನ್ನ ನಡೆಯುವ ಚಳಿಗಾಲದ ಅಧಿವೇಶನದ ಬಳಿಕ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕರ್ನಾಟಕ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬ ಅಸಮಾಧಾನಿತ ನಾಯಕರಿಗೆ ಗಾಳ ಹಾಕಿತ್ತಿದ್ದು, ಮಾಜಿ ಸಚಿವ ವಿ ಸೋಮಣ್ಣ, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಕುರಿತು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications