ಕಾಂಗ್ರೆಸ್‌ ನತ್ತ ಹೊರಟ ವಿ ಸೋಮಣ್ಣ ಅವರಿಂದ ಶಕ್ತಿ ಪ್ರದರ್ಶನ! ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ

ಬೆಂಗಳೂರು, ನವೆಂಬರ್‌ 15: ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ ಅವರು ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧಿಸಿ ಹೀನಾಯವಾಗಿ ಸೋಲು ಅನುಭವಿಸಿದ್ದು, ಬಹಿರಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಬೇಡಿಕೆ ಇಟ್ಟಿದ್ರು. ಆದರೆ, ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದ ಬಳಿಕೆ ಅಸಮಾಧಾನ ಹೆಚ್ಚಾಗಿದ್ದು, ಬಿಜೆಪಿ ನಾಯಕರ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ವಿ ಸೋಮಣ್ಣ ಮುಂದಾಗಿದ್ದಾರೆ.

ಹೌದು, ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ಹಲವು ಹಿರಿಯ ನಾಯಕರು ಮುನಿಸಿಕೊಂಡಿದ್ದಾರೆ. ಈ ಪೈಕಿ ಮಾಜಿ ಸಚಿವ ಹಾಗೂ ಲಿಂಗಾಯತ ನಾಯಕರಲ್ಲಿ ವಿ ಸೋಮಣ್ಣ ಅವರು ಸಹ ಒಬ್ಬರು. ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸೋಮಣ್ಣಗೆ ಇದೀಗ ಸ್ಥಾನ ತಪ್ಪಿದೆ. ಇತ್ತ ಸೋಮಣ್ಣ ಅವರನ್ನ ವಿರೋಧಿಸುತ್ತಲೇ ಬಂದಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿರುವುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

v-somanna-express-unhappy

ಈ ಎಲ್ಲಾ ಕಾರಣಗಳಿಂದ ಬೇಸರಗೊಂಡಿರುವ ಮಾಜಿ ಸಚಿವ ವಿ ಸೋಮಣ್ಣ ಅವರು ಡಿಸೆಂಬರ್ 6ರಂದು ತುಮಕೂರಿನಲ್ಲಿ ರಾಜಕೀಯ ಶಕ್ತಿ ಪ್ರದರ್ಶನ ಮಾಡಿ ಹೈಕಮಾಂಡ್‌ ಗೆ ಸಂದೇಶ ರವಾನಿಸಲು ವಿ ಸೋಮಣ್ಣ ಸಜ್ಜಾಗಿದ್ದಾರೆ ಎನ್ನಲಾಗಿದೆ.

ವಿ ಸೋಮಣ್ಣ ತುಮಕೂರಿನಲ್ಲಿ ಶಕ್ತಿ ಪ್ರದರ್ಶನ ನಡೆಸುತ್ತಿರುವುದು ಯಾಕೆ?

ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ವಿ ಸೋಮಣ್ಣ ನನ್ನ ಸೋಲಿಗೆ ನನ್ನ ಪಕ್ಷದ ಕೆಲ ನಾಯಕರೇ ಕೆಲಸ ಮಾಡಿದ್ದಾರೆ ಎಂದು ಬಹಿರಂಗವಾಗಿ ವಿ ಸೋಮಣ್ಣ ಅಸಮಾಧಾನ ವ್ಯಕ್ತಿಪಸಿದ್ರು. ಇನ್ನೂ ರಾಜ್ಯಾಧ್ಯಕ್ಷ ಹುದ್ದೆಗೂ ಬೇಡಿಕೆ ಇಟ್ಟ ವಿ ಸೋಮಣ್ಣ ಅವರಿಗೆ ಮತ್ತೆ ನಿರಾಸೆಯಾಗಿದ್ದು, ಇದೀಗ ಕಾಂಗ್ರೆಸ್‌ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಹೌದು, ಕಾಂಗ್ರೆಸ್‌ ಹೈಕಮಾಂಡ್‌ ಕೊಟ್ಟಿರುವ 20 ಕ್ಷೇತ್ರಗಳನ್ನ ಗೆಲ್ಲಲು ಹಲವು ತಂತ್ರಗಾರಿಕೆಯನ್ನ ನಡೆಸಿರುವ ಕಾಂಗ್ರೆಸ್‌ ನಾಯಕರು, ಬೆಂಗಳೂರು-ದಕ್ಷಿಣ ಲೋಕಸಭೆಯನ್ನು ಬಲಪಡಿಸಲು ವಿ ಸೋಮಣ್ಣ ಅವರನ್ನು ನಿಯೋಜಿಸಲು ಪ್ಲಾನ್‌ ಹಾಕಿಕೊಂಡಿದ್ದು, ಕಾಂಗ್ರೆಸ್‌ ಗೆ ಕರೆತರುವ ನಿಟ್ಟಿನಲ್ಲಿ ವಿ ಸೋಮಣ್ಣ ಜೊತೆಗೆ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.

ಹಳೇ ಮೈಸೂರು ಭಾಗದಲ್ಲಿ ವೀರಶೈವ ಲಿಂಗಾಯತ ನಾಯಕರ ಕೊರತೆಯನ್ನ ಕಾಂಗ್ರೆಸ್‌ ಎದುರಿಸುತ್ತಿದೆ. ವಿ.ಸೋಮಣ್ಣ ಅವರನ್ನು ಕರೆತಂದು ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ತುಮಕೂರಿನ ವೀರಶೈವ-ಲಿಂಗಾಯತ ಮುಖಂಡರು, ಮಠಮಾನ್ಯಗಳ ಜೊತೆ ಉತ್ತಮ ಒಡನಾಟದಲ್ಲಿರೋ ವಿ.ಸೋಮಣ್ಣ ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ. ಹೀಗಾಗಿ ವಿ ಸೋಮಣ್ಣ ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್‌ ಸಿದ್ದತೆ ನಡೆಸಿದೆ ಎನ್ನಲಾಗಿದೆ. ಹೀಗಾಗಿ ವಿ ಸೋಮಣ್ಣ ಅವರು ಮುಂದಿನ ಲೋಕಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+