ಬಿಜೆಪಿ ನಾಯಕರ ವಿರುದ್ಧ ಸಿಡಿದೆದ್ದ ವಿ ಸೋಮಣ್ಣ: ಇಂದು ತುಮಕೂರಿನಲ್ಲಿ ಮಹತ್ವ ನಿರ್ಧಾರ ಘೋಷಣೆ?

ಬೆಂಗಳೂರು, ಡಿಸೆಂಬರ್‌ 06: ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ ಅವರು ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಿಂದ ಸ್ಪರ್ಧಿಸಿ ಹೀನಾಯವಾಗಿ ಸೋಲು ಅನುಭವಿಸಿದ ಬಳಿಕ ಬಹಿರಂಗವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಬೇಡಿಕೆ ಇಟ್ಟಿದ್ರು. ಆದರೆ, ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡದ ಬಳಿಕೆ ಅಸಮಾಧಾನ ಹೆಚ್ಚಾಗಿದ್ದು, ಬಿಜೆಪಿ ನಾಯಕರ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ವಿ ಸೋಮಣ್ಣ ಮುಂದಾಗಿದ್ದಾರೆ.

ಹೌದು, ತುಮಕೂರಿನಲ್ಲಿ ಮಾಜಿ ಸಚಿವ ವಿ ಸೋಮಣ್ಣ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಡಿಸೆಂಬರ್‌ 6 ರಂದು(ಇಂದು) ತನ್ನ ನಿರ್ಧಾರವನ್ನ ಘೋಷಿಸಿವುದಾಗಿ ವಿ ಸೋಮಣ್ಣ ಹೇಳಿದ್ರು. ಇಂದು ವಿ ಸೋಮಣ್ಣ ಅವರು ಸಿದ್ಧಗಂಗಾ ಮಠದಲ್ಲಿ ತಾವು ನಿರ್ಮಿಸಿರುವ ಗುರುಭವನವನ್ನು ಉದ್ಘಾಟನೆ ಮಾಡಲಿದ್ದಾರೆ. ಉದ್ಘಾಟನೆಯ ಬಳಿಕ ತಮ್ಮ ಮುಂದಿನ ರಾಜಕೀಯ ನಡೆ ಏನು ಎಂಬ ಬಗ್ಗೆ ವಿ ಸೋಮಣ್ಣ ಘೋಷಣೆ ಮಾಡಲಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

V Somanna Likely Announce His Next Political Step During Siddaganga Math Function

ಬಿಜೆಪಿ ಹೈಕಮಾಂಡ್‌ ನಾಯಕರು ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧವೂ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ವಿ ಸೋಮಣ್ಣ ಇಂದು ತುಮಕೂರಿನಲ್ಲಿ ಶಕ್ತಿ ಪ್ರದರ್ಶನಕ್ಕಾಗಿ ತುಮಕೂರಿನ ಸಿದ್ಧಗಂಗಾ ಮಠದ ಹಳೇ ಮಠದ ಆವರಣದಲ್ಲಿ ಗುರುಭವನ ನಿರ್ಮಿಸಿದ್ದು, ಬೃಹತ್‌ ವೇದಿಕೆ ಸಜ್ಜಾಗಿದೆ. ಈ ಬೃಹತ್‌ ವೇದಿಕೆಯಲ್ಲಿ ತಮ್ಮ ನಿರ್ಧಾರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧವಾಗಿಯೂ ಅಸಮಾಧಾನ ಹೊರ ಹಾಕುವ ಸಾಧ್ಯತೆ ಇದೆ.

ಇಂದು ವಿ ಸೋಮಣ್ಣ ದೆಹಲಿಗೆ?

ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಮ್ಮ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದ ವಿ ಸೋಮಣ್ಣ ಇಂದು ಹೈಕಮಾಂಡ್‌ ನಾಯಕ ಭೇಟಿಗೆ ದೆಹಲಿಗೆ ತೆರಳಲಿದ್ದಾರೆ. ಅಸಮಾಧಾನಗೊಂಡ ಸೋಮಣ್ಣ ಮಾತ್ರವಲ್ಲದೇ ಅವರ ಜೊತೆಗೆ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಅರವಿಂದ್ ಲಿಂಬಾವಳಿ, ರಮೇಶ್ ಜಾರಕಿಹೊಳಿ ಸಹ ದೆಹಲಿಗೆ ಪಯಾಣ ಬೆಳೆಸಲಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿಯುತ್ತಾರಾ ವಿ ಸೋಮಣ್ಣ?

ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ವಿ ಸೋಮಣ್ಣ ಈಗಾಗಲೇ ರಾಜ್ಯ ಕಾಂಗ್ರೆಸ್‌ ನಾಯಕರ ಜೊತೆಗೆ ಸಂಪರ್ಕದಲ್ಲಿದ್ದು, ಹಲವು ಬಾರೀ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರ ಜೊತೆಗೆ ಚರ್ಚೆ ನಡೆಸಿದ್ದಾರೆ. ಈಗಾಗಲೇ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಸೋಮಣ್ಣ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಸ್ವತಃ ತಾವೇ ನಿರ್ಮಿಸಿರುವ ಗುರುಭವನ ಉದ್ಘಾಟನೆಗೆ ಕಾಂಗ್ರೆಸ್​ ನಾಯಕರನ್ನು ಆಹ್ವಾನಿಸಿದ್ದಾರೆ. ಅಲ್ಲದೇ ವಿ ಸೋಮಣ್ಣ ಕಾಂಗ್ರೆಸ್‌ ಗೆ ಸೇರ್ಪಡೆಯಾದರೇ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಕುರಿತು ಕಾಂಗ್ರೆಸ್‌ ನಾಯಕರು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇನ್ನೂ ಈ ಹಿಂದೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ವಿ ಸೋಮಣ್ಣ ತುಮಕೂರು ಜಿಲ್ಲೆಯ ಗುಬ್ಬಿ ವಿಧಾನಸಭಾ ಕ್ಷೇತ್ರದಿಂದ ಪುತ್ರ ಅರುಣ್‌ ಸೋಮಣ್ಣ ಅವರನ್ನ ಕಣಕ್ಕಿಳಿಸಲು ಸಾಕಷ್ಟು ಪ್ರಯತ್ನ ನಡೆಸಿದ್ರು, ಆದರೆ, ಬಿಜೆಪಿ ಹೈಕಮಾಂಡ್‌ ಇದಕ್ಕೆ ಮಣೆ ಹಾಕಲಿಲ್ಲ. ಹೀಗಾಗಿ ಬಿಜೆಪಿ ನಾಯಕರಿಂದ ಬೇಸರಗೊಂಡಿರುವ ವಿ ಸೋಮಣ್ಣ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ದೇಗುಲ ಮಠದ ಮುಮ್ಮಡಿ ನಿರ್ವಾಣ ಶ್ರೀಗಳು, ಗೃಹ ಸಚಿವ ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ಸಂಸದ ಜಿ.ಎಸ್.ಬಸವರಾಜು, ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ ಸೇರಿದಂತೆ ಇತರೆ ನಾಯಕರು ಭಾಗವಹಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+