ನನ್ನ ಕ್ಷೇತ್ರ ಚಿನ್ನದ ರೀತಿ ಇತ್ತು, ನನನ್ನು ಈಗ ನಿರುದ್ಯೋಗಿ ಮಾಡಿದ್ದಾರೆ-ವಿ.ಸೋಮಣ್ಣ ಬೇಸರ

ಬೆಂಗಳೂರು, ಮೇ 14: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ವಿ.ಸೋಮಣ್ಣ ಚಾಮರಾಜನಗರ ಹಾಗೂ ವರಣಾ ಎರಡೂ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಫಲಿತಾಂಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಲ್ಲವನ್ನೂ ಅನುಭವಿಸಿದ್ದೇನೆ, ಇದು ಆಗ ಬಾರದಿತ್ತು, ಆಗಿದೆ ಎಂದು ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲನ್ನು ಸ್ವೀಕಾರ ಮಾಡಬೇಕು. ಅದನ್ನು ಸ್ವೀಕಾರ ಮಾಡದಿದ್ದರೆ ನನ್ನಂತ ಹುಚ್ಚ ಮತ್ತೊಬ್ಬರಿಲ್ಲ. ಆದರೆ ಒಂದು ವಿಚಾರವೆಂದರೆ ನನನ್ನು ನಿರುದ್ಯೋಗಿ ಮಾಡಿದ್ದಾರೆ. ಬೆಳಗ್ಗೆ ನಾಲ್ಕು ಗಂಟೆ ಯಿಂದ ಕೆಲಸ ಆರಂಭಿಸುತ್ತಿದ್ದವನು ನಾನು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

V Somanna

ಸೋತಾಗಿದೆ, ಏನು ಮಾತಾಡಲಿ? ಮಾತಾಡೋದು ಅಗತ್ಯ ಇಲ್ಲ. ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತದೆ. ನನ್ನ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳಿತೆಂದು ಹೋದೆ. ಇದೀಗ ಜನ ತೀರ್ಮಾನ ಮಾಡಿದ್ದಾರೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು, ಪಕ್ಷದ ಮಾತು ಕೇಳಿದೆ ಅಷ್ಟೇ ಎಂದಿದ್ದಾರೆ.

ಬಿಜೆಪಿ ಯಡಿಯೂರಪ್ಪರನ್ನ ಮೂಲೆಗುಂಪು ಮಾಡಿದ್ಯಾ ಎಂಬ ಕುರಿತು ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಪಕ್ಷ ಮೂಲೆಗುಂಪು ಮಾಡಿಲ್ಲ, ಯಡಿಯೂರಪ್ಪ ಹೇಳಿದ್ದಾರಾ ಮೂಲೆಗುಂಪು ಮಾಡಿದ್ದಾರೆ ಅಂತ. ಸೋತ ತಕ್ಷಣ ಎಲ್ಲವೂ ಮುಗಿದು ಹೋಯ್ತಾ? ಪಕ್ಷಕ್ಕೂ ಹಿನ್ನಡೆ ಆಗಿದ್ದು ನಮಗೆಲ್ಲ ಎಚ್ಚರಿಕೆ ಗಂಟೆ. ಜನರ ತೀರ್ಮಾನ ಇದು, ನಾವು ಬದ್ಧರಾಗಬೇಕು. ದೇಶಕ್ಕೆ ಪ್ರಧಾನಿ ಮೋದಿ ಪ್ರಶ್ನಾತೀತ ನಾಯಕರು, ಅವರ ಕೆಲಸಗಳು ಅವಿಸ್ಮರಣೀಯವಾದದ್ದು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+