Ananth Kumar Hegde: ಅನಂತಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ವಿ ಸೋಮಣ್ಣ
ತುಮಕೂರು ಮಾರ್ಚ್ 25: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ವಿಜೇತರಾಗಿದ್ದ ಅನಂತಹೆಗಡೆ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪಿದೆ. ಅನಂತಕುಮಾರ್ ಹೆಗಡೆಗೆ ಬಿಜೆಪಿ ಟಿಕೆಟ್ ಕೈತಪ್ಪಲು ಕಾರಣ ಏನು ಎನ್ನುವುದನ್ನು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು.
ಸಂವಿಧಾನ ವಿರೋಧಿ ಹೇಳಿಕೆಯಿಂದ ಹೆಗಡೆಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಟಿಕೆಟ್ ಕೈತಪ್ಪಿದ್ದು ಕ್ಷೇತ್ರದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮಣೆ ಹಾಕಲಾಗಿದೆ ಎಂದು ಎಂದು ವಿ ಸೋಮಣ್ಣ ಹೇಳಿದ್ದಾರೆ. ಹೆಗಡೆ ಅವರು ಸಂವಿಧಾನ ತಿದ್ದುಪಡಿ ಕುರಿತು ನೀಡಿದ ಹೇಳಿಕೆಯೇ ಅವರಿಗೆ ಟಿಕೆಟ್ ನಿರಾಕರಿಸಲು ಕಾರಣ. ಸಂವಿಧಾನವನ್ನು ಅಪಮಾನಿಸಿದರೆ ಅದಕ್ಕಿಂತ ಬೇರೆ ಪಾಪವಿಲ್ಲ ಎಂದು ತುಮಕೂರಿನಲ್ಲಿ ಅವರು ಹೇಳಿದರು.

ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಹೆಗಡೆ ಅವರು ಜನಸಂಪರ್ಕಕ್ಕೆ ಬಂದಿಲ್ಲ. ಕಾರ್ಯಕರ್ತರ ಕೈಗೂ ಸಿಕ್ಕಿಲ್ಲ. ಜೊತೆಗೆ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗಿದ್ದರು. ಬಳಿಕ ಬಿಜೆಪಿ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲ ಎಂಬುದನ್ನು ತಿಳಿದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಹೆಸರುವಾಸಿಯಾಗಿರುವ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ತಪ್ಪಲು ಕಾರಣವೇನು ಎಂಬುದರ ಬಗ್ಗೆ ಚರ್ಚೆಗಳು ಆರಂಭವಾಗಿವೆ.
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ ಎರಡನೇ ಪಟ್ಟಿಯಲ್ಲಿ 20 ಕ್ಷೇತ್ರದ ಅಭ್ಯರ್ಥಿಯನ್ನ ಪ್ರಕಟಿಸಿತ್ತು. ಐದನೇ ಪಟ್ಟಿಯಲ್ಲಿ ನಾಲ್ಕು ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನ ಪ್ರಕಟಿಸಿದೆ. ಇದರಲ್ಲಿ ಉತ್ತರ ಕನ್ನಡ ಕ್ಷೇತ್ರದ ಹಾಲಿ ಸಂಸದರಾದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈ ತಪ್ಪಿದೆ.
ಚಿತ್ರದುರ್ಗ ಲೋಕಸಭಾ ಕ್ಷೇತ್ರವೊಂದನ್ನು ಬಿಟ್ಟು ಉಳಿದ ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಯಚೂರು ಹಾಗೂ ಬೆಳಗಾವಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಾರ್ಚ್ 13ರಂದು ಬಿಡುಗಡೆ ಮಾಡಲಾಗಿತ್ತು. ಮಿತ್ರಕೂಟದಲ್ಲಿರುವ ಜೆಡಿಎಸ್‌ಗೆ ಮಂಡ್ಯ, ಹಾಸನ, ಕೋಲಾರ ಲೋಕಸಭಾ ಕ್ಷೇತ್ರವನ್ನ ಬಿಟ್ಟುಕೊಟ್ಟಿದೆ.

ಕಳೆದ ಹಲವು ದಿನಗಳಿಂದ ಅನಾರೋಗ್ಯದ ಹಿನ್ನಲೆ ರಾಜಕೀಯದಲ್ಲಿ ಸೈಲೆಂಟ್ ಆಗಿರುವ ಅನಂತ್ ಕುಮಾರ್ ಹೆಗಡೆ ಅವರು ಹೈಕಮಾಂಡ್ ನಾಯಕರಿಂದಲೂ ಅಂತರವನ್ನ ಕಾಯ್ದುಕೊಂಡಿದ್ದರು. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅನಂತ್ ಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೊಡಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು.
ಇಷ್ಟು ದಿನ ತೆರೆಮರೆಯಲ್ಲಿದ್ದ ಅನಂತ್ ಕುಮಾರ್ ಹೆಗಡೆ ಇದೀಗ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪ್ರತ್ಯಕ್ಷರಾಗಿದ್ದರು. ಈ ಮೂಲಕ ಅನಂತ್ ಕುಮಾರ್ ಹೆಗಡೆ ಮತ್ತೊಮ್ಮೆ ಲೋಕಸಭಾ ಚುನಾವಣೆ ಅಖಾಡಕ್ಕಿಳ್ಳಿಯುವ ಇಂಗಿತ ವ್ಯಕ್ತಪಡಿಸಿದ್ರು. ಆದರೆ, ಈ ಬಾರಿ ಕಾಗೇರಿ ಅವರಿಗೆ ಬಿಜೆಪಿ ಟಿಕೆಟ್ ದಕ್ಕಿದೆ.
ಇನ್ನೂ ಬಿಜೆಪಿ ವರಿಷ್ಠರಾದ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ (PM Narendra Modi), ಅಮಿತ್ ಶಾ (Amit Shah) ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಬೇರೆ ಎಲ್ಲ ನಾಯಕರು ತನ್ನ ಮೇಲೆ ವಿಶ್ವಾಸವಿಟ್ಟು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹಾಲಿ ಶಾಸಕ ಅನಂತಕುಮಾರ್ ಹೆಗಡೆ ಬದಲಿಗೆ ಟಿಕೆಟ್ ಗಿಟ್ಟಿಸಿರುವ ಹಿರಿಯ ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಹೇಳಿದರು.












Click it and Unblock the Notifications