ರಾಜ್ಯದ ಮುಂದಿನ ಮುಖ್ಯಮಂತ್ರಿ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೇಂದ್ರ ಸಚಿವ ವಿ.ಸೋಮಣ್ಣ
V.Somanna: ರಾಜ್ಯದಲ್ಲಿ ಸದ್ಯ ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಕೆಲ ರಾಜಕೀಯ ನಾಯಕರು ಪ್ರತಿಕ್ರಿಯಿಸಿದ್ದು, ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಇದೆಲ್ಲದ ನಡುವೆ ಇದೀಗ ಕೇಂದ್ರ ಸಚಿವ ವಿ.ಸೋಮಣ್ಣ, ಅವರು ಈ ರಾಜ್ಯದ ಮುಖ್ಯಮಂತ್ರಿ ಯಾರಾಗಬೇಕು ಎಂದು ಕೇಂದ್ರ ಸಚಿವ ಸ್ಫೋಟಕ ಭವಿಷ್ಯ ನುಡಿದರು.
ತುಮಕೂರಿನ ಹೆಗ್ಗೆರೆಯಲ್ಲಿ ರೇಲ್ವೆ ಮೇಲ್ಸೆತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ ಅವರು, ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಪರಮೇಶ್ವರ್ ಅದೃಷ್ಟದ ಗೃಹ ಮಂತ್ರಿ ಆಗಿದ್ದಾರೆ. ಎಲ್ಲೋ ಒಂದು ಕಡೆ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಎನ್ನುವ ಆಸೆ ಇದೆ. ಇದನ್ನ ನಾನೊಬ್ಬನೇ ಹೇಳುತ್ತಿಲ್ಲ, ಬದಲಾಗಿ ತುಮಕೂರಿನ ಜನತೆಯ ಆಸೆಯಾಗಿದೆ ಎಂದು ಹೇಳಿ ಗಮನ ಸೆಳೆದರು.

ಇದೇ ವೇಳೆ ಮಧ್ಯ ಪ್ರವೇಶಿಸಿದ ಶಾಸಕ ಸುರೇಶ್ ಗೌಡ ಅವರು, ಡಿ.ಕೆ.ಶಿವಕುಮಾರ್ ಅವರು ಸಹ ಇದ್ದಾರೆ ಎಂದರು. ಬಳಿಕ ಇದಕ್ಕೆ ಪ್ರತಿಕ್ರಿಯಿಸಿದ ವಿ.ಸೋಮಣ್ಣ ಅವರು ಹಣೆಬರಹ ಏನಿದೆ ಅಂತಾ ಯಾರಿಗೆ ಗೊತ್ತು? ಹಣೆ ಬರಹದಂತೆ ಆಗಲಿ ಎಂದು ಹೇಳಿದರು. ಅಲ್ಲದೆ, ತುಮಕೂರಿನಲ್ಲಿ ತಮ್ಮ ಗೆಲುವಿಗೆ ಕಾಂಗ್ರೆಸ್ ನಾಯಕರೂ ಕೂಡ ಸಹಕರಿಸಿದ್ದಾರೆ ಎನ್ನುವ ಸ್ಫೋಟಕ ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನನ್ನ ಗೆಲುವಿಗೆ ಎಷ್ಟು ಸಹಕಾರ ನೀಡಿದ್ದಾರೆಯೋ ಅಷ್ಟೇ ಕಾಂಗ್ರೆಸ್‌ನ ಹಲವು ನಾಯಕರು ಸಹಕಾರ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡರ ಸೋಲಿಗೆ ಪರೋಕ್ಷವಾಗಿ ಕಾಂಗ್ರೆಸ್ ನಾಯಕರೇ ಕಾರಣ ಅನ್ನೋದನ್ನು ಎಂಬ ಅಚ್ಚರಿ ಹೇಳಿಕೆಯನ್ನು ಜಿ.ಪರಮೇಶ್ವರ್ ಇರುವ ವೇದಿಯಲ್ಲೇ ನೀಡಿದರು.
ಸಿದ್ದರಾಮಯ್ಯ ಹೇಳಿದ್ದೇನು?: ಸಿಎಂ ಬದಲಾವಣೆ ಕುರಿತು ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಹೈಕಮಾಂಡ್ ನಿರ್ಧಾರದಂತೆ ನಡೆದುಕೊಳ್ಳುತ್ತೇನೆ. ಪಕ್ಷದ ಹೈಕಮಾಂಡ್ ಏನೇ ನಿರ್ಧಾರ ಮಾಡಿದರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದರು.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಸಕ ಇಕ್ಬಾಲ್ ಹುಸೇನ್ ಅವರ ಇತ್ತೀಚಿನ ಹೇಳಿಕೆಗಳನ್ನು ಉಲ್ಲೇಖಿಸಿದರು. ಪಕ್ಷದ ಒಳಗಿನ ಯಾವುದೇ ಗೊಂದಲಕ್ಕೂ ತಾವು ಕಾರಣರಲ್ಲ. ಪಕ್ಷದ ಒಗ್ಗಟ್ಟು ಮತ್ತು ಹೈಕಮಾಂಡ್‌ನ ನಿರ್ಧಾರಕ್ಕೆ ನಾನು ಯಾವಾಗಲೂ ಬದ್ಧ ಎಂದು ಹೇಳಿದರು.
ಇನ್ನೂ ಇದೇ ವೇಳೆ ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆಗಳ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಯೋಜನೆಗಳ ಕುರಿತು ಮುಂಬರುವ ಅಧಿವೇಶನದಲ್ಲಿ ಸಂಪೂರ್ಣ ಉತ್ತರ ನೀಡಲಾಗುವುದು ಎಂದು ಹೇಳಿದರು.
ಮೌಢ್ಯದ ಬಗ್ಗೆ ಸಿಎಂ ಹೇಳಿದ್ದೇನು?: ಅಲ್ಲದೆ, ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳುವುದೇ ಶಿಕ್ಷಣದ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಚಂದನ ಎಜುಕೇಶನ್ ಸೊಸೈಟಿ ಲಕ್ಷ್ಮೇಶ್ವರ ಇವರ ವತಿಯಿಂದ ಆಯೋಜಿಸಲಾಗಿದ್ದ ಭಾರತ ರತ್ನ ಪ್ರೋ.ಸಿ ಎನ್ಆರ್ ರಾವ್ ಅವರ 10ನೇ ವರ್ಷದ ವಿಜ್ಞಾನ ವಿಸ್ಕೃತ ಕಾರ್ಯಕ್ರಮ-2025 ಹಾಗೂ ಶ್ರೀ ಬಿ.ಎಸ್.ಪಾಟೀಲ ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಚಂದನ ಶ್ರೀ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮೌಢ್ಯ ವಿರೋಧಿ ಕಾಯ್ದೆಯನ್ನು ಜಾರಿಗೆ ತಂದೆವು. ಬಸವಣ್ಣನವರ ನಾಡಿನಲ್ಲಿ ಹುಟ್ಟಿದ ನಾವು ಇಂದಿಗೂ ಸಹ ಮೌಢ್ಯಗಳನ್ನು ಆಚರಿಸುತ್ತಿರುವುದು ದುರ್ದೈವದ ಸಂಗತಿಯಾಗಿದೆ. ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಬೇಕು ಎಂದು ಹೇಳಿದರು.
-
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications