ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ: ರಾಜಕೀಯ ಗಣ್ಯರಿಂದ ಸಂತಾಪ
ಬೆಂಗಳೂರು, ಏಪ್ರಿಲ್ 29: ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತಡ ರಾತ್ರಿ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀನಿವಾಸ್ ಪ್ರಸಾದ್ ಅವರ ನಿಧನದ ಸುದ್ದಿ ಸಾಕಷ್ಟು ನೋವುಂಟು ಮಾಡಿದ್ದು, ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ.
— Siddaramaiah (@siddaramaiah) April 29, 2024
ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ… pic.twitter.com/E0M7JWez3h
ಶ್ರೀನಿವಾಸ್ ಪ್ರಸಾದ್ ಅವರು ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ ಎಂದು ಹೇಳಿದ್ದಾರೆ.

ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ. ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಸಂತಾಪ ಸೂಚಿಸಿದ್ದಾರೆ.
ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ
ಬಿಜೆಪಿಯ ಹಿರಿಯ ಮುಖಂಡ, ಚಾಮರಾಜನಗರ ಕ್ಷೇತ್ರದ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕೇಂದ್ರದ ಮಾಜಿ ಆಹಾರ ಸಚಿವರಾದ ಅವರು 6 ಬಾರಿ ಸಂಸದರಾಗಿ, ಎರಡು ಬಾರಿ ಶಾಸಕರಾಗಿ ಜನಪ್ರಿಯತೆ ಪಡೆದಿದ್ದರು ಎಂದು ವಿಜಯೇಂದ್ರ ಅವರು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬಸ್ಥರು ಬಂಧುಮಿತ್ರರು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ಶ್ರೀ ವಿ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ… pic.twitter.com/8cqFNkP1JL
— Vijayendra Yediyurappa (Modi Ka Parivar) (@BYVijayendra) April 29, 2024
ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರು, ಹಿರಿಯ ಮುತ್ಸದ್ದಿಗಳಾದ ಶ್ರೀ ವಿ ಶ್ರೀನಿವಾಸ್ ಪ್ರಸಾದ್ ಅವರು ಅನಾರೋಗ್ಯದಿಂದ ನಿಧನರಾದ ಸುದ್ದಿ ಅತೀವ ದುಃಖ ತರಿಸಿದೆ. ಅವರ ಅಗಲಿಕೆಯಿಂದ ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಮುಳುಗಿದಂತಾಗಿದೆ. ಅವರ ರಾಜಕೀಯ ಜೀವನದ ಕಡೇ ದಿನಗಳಲ್ಲಿ ಬಿಜೆಪಿಯನ್ನು ಆಯ್ದುಕೊಂಡು ಸಂಸದರಾಗಿ ಪಕ್ಷದ ತತ್ವ, ಸಿದ್ದಾಂತ ಹಾಗೂ ರಾಷ್ಟ್ರೀಯವಾದದ ಸತ್ವವನ್ನು ಜನರಿಗೆ ತಿಳಿಸುವಲ್ಲಿ ನಾಯಕತ್ವ ವಹಿಸಿದ್ದು ಬಿಜೆಪಿಯ ಸಾಮಾಜಿಕ ನ್ಯಾಯ ಹಾಗೂ ಸಂವಿಧಾನ ಮೌಲ್ಯವನ್ನು ಎತ್ತಿ ಹಿಡಿಯುವ ಬದ್ಧತೆಯನ್ನು ಸಾಕ್ಷೀಕರಿಸಿತ್ತು.
ಪ್ರಸ್ತುತ ಕಾಲಮಾನದಲ್ಲಿ ಮಾನ್ಯ ಪ್ರಸಾದರ ಅನುಪಸ್ಥಿತಿ ರಾಷ್ಟ್ರರಾಜಕಾರಣದಲ್ಲೂ ಕೊರತೆ ಸೃಷ್ಟಿಸಿದಂತಾಗಿದೆ. ಅವರ ಅಗಲಿಕೆಯ ನೋವನ್ನು ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ತಿಳಿಸಿದ್ದಾರೆ.
ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ
ಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ."ಶೋಷಿತರ ಪರ ಗಟ್ಟಿ ದನಿಯಾಗಿದ್ದ, ಮಾರ್ಗದರ್ಶಕರು, ಹಿತೈಷಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ (75) ಅವರ ಅಗಲಿಕೆ ಸುದ್ದಿ ಕೇಳಿ ನೋವಾಗಿದೆ.
ಇವರ ನಿಧನದಿಂದ ಮೌಲ್ಯಧಾರಿತ ರಾಜಕಾರಣದ ಕೊಂಡಿ ಮರೆಯಾದಂತಾಗಿದೆ. ಶ್ರೀನಿವಾಸ್ ಪ್ರಸಾದ್ ಅವರು ಕೇಂದ್ರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಸಚಿವರಾಗಿದ್ದಾಗ ಕರ್ನಾಟಕ ರಾಜ್ಯದ ಬೇಡಿಕೆಗಳಿಗೆ ದನಿಯಾಗಿದ್ದರು. ಕಿರಿಯ ರಾಜಕಾರಣಿಗಳಿಗೆ ಮಾರ್ಗದರ್ಶಕರಾಗಿದ್ದರು, ಮಾದರಿಯಾಗಿದ್ದರು.
ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಶೋಷಿತರ ಪರ ದನಿ ಎತ್ತುತ್ತಿದ್ದರು. ವಿಧಾನಸಭೆ ಹಾಗೂ ಸಂಸತ್ ಪ್ರತಿನಿಧಿಸಿದ್ದರು. ಕೆಲ ಕಾಲ ಇವರು ಹಾಗೂ ನಾನು ಸಂಪುಟ ಸಹೋದ್ಯೋಗಿಗಳಾಗಿದ್ದೆವು. ಈ ವೇಳೆ ಅವರ ರಾಜಕೀಯ ಜಾಣ್ಮೆಯನ್ನು ಹತ್ತಿರದಿಂದ ಕಂಡಿದ್ದೇನೆ.
ಇವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ, ಅಭಿಮಾನಿಗಳಿಗೆ ಭಗವಂತನು ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
-
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್












Click it and Unblock the Notifications