ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಸಿಕೆ ಪಡೆದವರಿಗೆ ಕೊರೊನಾ ಸೋಂಕು: ಸೌಮ್ಯ ಲಕ್ಷಣಗಳು ಗೋಚರ

|
Google Oneindia Kannada News

ಬೆಂಗಳೂರು, ಜುಲೈ 27: ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಹಾಕಿಸಿಕೊಂಡಿರುವ ಜನರಲ್ಲಿ ಕೂಡ ಕೊರೊನಾ ಸೋಂಕು ತಗುಲುತ್ತಿದ್ದು, ಲಕ್ಷಣ ಮಾತ್ರ ಸೌಮ್ಯವಾಗಿದೆ ಎಂದು ವರದಿಗಳು ತಿಳಿಸಿವೆ.

ಈ ರೋಗಿಗಳು ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಹಾಗೂ ಚೇತರಿಸಿಕೊಳ್ಳುತ್ತಿದ್ದಾರೆ , ಆದರೆ ಒಂದಕ್ಕಿಂತ ಹೆಚ್ಚು ಕಾಯಿಲೆಗಳಿರುವ ರೋಗಿಗಳಲ್ಲಿ ಕೆಲವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

 ಈ ಎರಡು ಲಸಿಕೆ ಪ್ರತಿಕಾಯ ಮಟ್ಟ 2-3 ತಿಂಗಳ ಬಳಿಕ ಇಳಿಕೆ ಸಾಧ್ಯತೆ ಈ ಎರಡು ಲಸಿಕೆ ಪ್ರತಿಕಾಯ ಮಟ್ಟ 2-3 ತಿಂಗಳ ಬಳಿಕ ಇಳಿಕೆ ಸಾಧ್ಯತೆ

ಜಯನಗರದ ಜನರಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಕೊರೊನಾ ಸೋಂಕಿನಿಂದ 23 ಮಂದಿ ಮೃತಪಟ್ಟಿದ್ದಾರೆ. ಅದರಲ್ಲಿ ಮೂವರು ಲಸಿಕೆಯ ಮೊದಲ ಡೋಸ್ ಪಡೆದಿದ್ದರು. ಓರ್ವ ಎರಡೂ ಡೋಸ್‌ಗಳನ್ನು ತೆಗೆದುಕೊಂಡಿದ್ದರೆ, ಉಳಿದವರು ಒಂದೇ ಒಂದು ಡೋಸ್ ಲಸಿಕೆಯನ್ನೂ ಪಡೆದಿರಲಿಲ್ಲ.

Vaccinated Against Covid-19 Most Covid Patients Show Mild Symptoms

''ಲಸಿಕೆಯನ್ನು ಪಡೆದವರಿಗೆ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ, ಎರಡೂ ಲಸಿಕೆ ಪಡೆದ 54 ವರ್ಷದ ವ್ಯಕ್ತಿಯೊಬ್ಬರಿಗೆ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು, ಒಂದು ಡೋಸ್ ಪಡೆದ ಉಳಿದ ಮೂವರು ಹೈಪೋಥೈರಾಯ್ಡಿಸಮ್ ನಿಂದ ಬಳಲುತ್ತಿದ್ದರು. ಸಾಮಾನ್ಯವಾಗಿ ಹೈಪೋಥೈರಾಯ್ಡಿಸಮ್ ಹೊಂದಿರುವ ಕೋವಿಡ್ ರೋಗಿಗಳು ದೀರ್ಘ ಕಾಲದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಅಲ್ಲಿ ಸಾವು ವಿಳಂಬವಾಗಬಹುದು ಆದರೆ ತಡೆಯಲಾಗುವುದಿಲ್ಲ'' ಎಂದು ಜಯನಗರ ಜನರಲ್ ಆಸ್ಪತ್ರೆಯ ಕೋವಿಡ್ ನೋಡಲ್ ಅಧಿಕಾರಿ ಸುಧಾ ತಿಳಿಸಿದ್ದಾರೆ.

ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ 30 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಪಡೆದ ಬಳಿಕವೂ ಸೋಂಕು ತಗುಲಿದೆ. ಅವರಲ್ಲಿ ಒಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಗುಣಮುಖರಾದರು. ಉಳಿದವರು ಸೌಮ್ಯ ಲಕ್ಷಣಗಳನ್ನು ಹೊಂದಿದ್ದರು ಮತ್ತು ಆಸ್ಪತ್ರೆಗೆ ದಾಖಲಾಗಿಲ್ಲ, ಈ ಯಾವುದೇ ಪ್ರಕರಣಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.

ತಲೆನೋವು SARS-COV-2 ವೈರಸ್‌ನ ಸಾಮನ್ಯ ಲಕ್ಷಣವಾಗಿದೆ. ಅಲ್ಲದೆ ಡೆಲ್ಟಾ ವೈರಸ್‌ ತಗುಲಿದವರಲ್ಲಿಯೂ ಈ ಲಕ್ಷಣಗಳು ಕಂಡು ಬರುತ್ತಿದೆ. ವಿಪರೀತ ತಲೆನೋವು, ಮೈಕೈ ನೋವು ಉಂಟಾಗುವುದು.

ತಲೆನೋವು 3 ದಿನಗಳಿಗಿಂತ ಅಧಿಕ ಸಮಯವಿದ್ದು ಅದರ ಜೊತೆಗೆ ಮೈಕೈ ನೋವು, ಮೈಯೆಲ್ಲಾ ಒಂಥರಾ ಬಿಗಿಯಾದ ಅನುಭವ ಉಂಟಾಗುತ್ತಿದ್ದರೆ ಅದು ಕೊರೊನಾ ಲಕ್ಷಣವಿರಬಹುದು, ಪರೀಕ್ಷೆ ಮಾಡಿಸಿ.

ಶೀತವಿದ್ದರೆ ಸಾಮಾನ್ಯವಾಗಿ ನಾವು ನಿರ್ಲಕ್ಷ್ಯ ಮಾಡುತ್ತೇವೆ, ಆದರೆ ಶೀತದಿಂದ ತುಂಬಾ ತೊಂದರೆಯಾಗುತ್ತಿದ್ದರೆ ನಿರ್ಲಕ್ಷ್ಯ ಮಾಡದಿರುವುದು ಒಳ್ಳೆಯದು, ಏಕೆಂದರೆ ಇದರಿಂದ ಶ್ವಾಸಕೋಶಕ್ಕೆ ಹಾನಿಯುಂಟಾಗಬಹುದು, ತುಂಬಾ ದಿನ ಕಾಯದೆ ಬೇಗ ಪರೀಕ್ಷೆ ಮಾಡಿಸಿ.

ತುಂಬಾ ಸೀನು ಬರುತ್ತಿದ್ದರೆ ಲಸಿಕೆ ಪಡೆದವರು ಒಮ್ಮೆ ಕೊರೊನಾ ಪರೀಕ್ಷೆ ಮಾಡಿಸುವುದು ಒಳ್ಳೆಯದು. ಏಕೆಂದರೆ ಲಸಿಕೆ ಪಡೆದವರಲ್ಲಿ ಕೊರೊನಾವೈರಸ್‌ ತಗುಲಿದಾಗ ವಿಪರೀತ ಸೀನು ಕಂಡು ಬರುವುದು ಎಂದು ಅಧ್ಯಯನದಿಂದ ತಿಳಿದು ಬಂದಿದೆ.

English summary
Hospitals are reporting cases of breakthrough infections where people who have been vaccinated against Covid-19 have received one or two doses, but have still contracted SARS-CoV-2. These patients have milder symptoms and recover.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X