ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

18+ ವಯಸ್ಸಿನವರಿಗೆ ಲಸಿಕೆ: ಬಾಯಿ ಬಿಟ್ಟರೆ ಬಣ್ಣಗೇಡು, ಮೋದಿ ನಾಚಿಕೆಗೇಡು

|
Google Oneindia Kannada News

ಬೆಂಗಳೂರು, ಏಪ್ರಿಲ್ 29: ಇದೇ ಬರುವ ಮೇ ಒಂದರಿಂದ 18+ ವಯಸ್ಸಿನವರಿಗೆ ಲಸಿಕೆ ನೀಡುವ ಅಭಿಯಾನದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿ, ಕೇಂದ್ರ ಸರಕಾರದ ಕಾರ್ಯವೈಖರಿಯ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಕುಮಾರಸ್ವಾಮಿ ಟ್ವೀಟ್ ಹೀಗಿದೆ, "ಮೇ ಒಂದರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಎಂದು ಬೊಬ್ಬೆ ಹೊಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರ ಪುಕ್ಕಟೆ ಪುಂಗಿ ಊದಿದ್ದೇ ಬಂತು. ಲಸಿಕೆಯ ದಾಸ್ತಾನಿಲ್ಲದೆ, ಸೂಕ್ತ ಮುನ್ನೆಚ್ಚರಿಕೆ, ವ್ಯವಸ್ಥೆ ಮಾಡಿಕೊಳ್ಳದೆ ಬರೀ ಪ್ರಚಾರ ತೆಗೆದುಕೊಂಡ ಕೇಂದ್ರ, ರಾಜ್ಯ ಸರ್ಕಾರಗಳ ನಿಲುವು ಅಕ್ಷಮ್ಯ ಮತ್ತು ಖಂಡನೀಯ"ಎಂದು ಎಚ್ಡಿಕೆ ಟ್ವೀಟ್ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಮುಂದಿನ ಆದೇಶವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆತಮಿಳುನಾಡಿನಲ್ಲಿ ಮುಂದಿನ ಆದೇಶವರೆಗೂ ರಾತ್ರಿ ಕರ್ಫ್ಯೂ ವಿಸ್ತರಣೆ

"ಲಭ್ಯವಿರುವ ಮಾಹಿತಿ ಪ್ರಕಾರ ಮೇ ಒಂದರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸರ್ಕಾರ ಏದುಸಿರು ಬಿಡುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್ ಕೊಡಲು ಹೆಣಗಾಡುತ್ತಿದೆ. 18 ವರ್ಷ ಮೇಲ್ಪಟ್ಟ ದೇಶದ ಕೋಟ್ಯಾಂತರ ಮಂದಿಗೆ ಲಸಿಕೆ ನೀಡುವುದಾಗಿ ಬಾಯಿಮಾತಿನ ಉಪಚಾರ ಮಾಡಿದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹೊಣೆಗೇಡಿತನ ಮತ್ತು ತಿಕ್ಕಲುತನವನ್ನು ದೇಶದ ಜನತೆ ಎಂದಿಗೂ ಕ್ಷಮಿಸರು"ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Vaccination Above 18+ Years: Former CM H D Kumaraswamy Series Of Tweet

"ಆತುರಗಾರನಿಗೆ ಬುದ್ಧಿ ಕಡಿಮೆ ಎಂಬಂತೆ ಕೇವಲ ಮಾತಿನಲ್ಲಿ ಜನರನ್ನು ಓಲೈಸುವ ಇಂತಹ ಬೂಟಾಟಿಕೆಯನ್ನು ಸರ್ಕಾರ ಬಿಡಬೇಕು. "ನಿಮ್ಮನ್ನು ನೀವೇ ಕಾಪಾಡಿಕೊಳ್ಳಿ" ಎನ್ನುವ ಸರ್ಕಾರ ಇದ್ದರೇನು? ಇಲ್ಲದಿದ್ದರೇನು?"

"ಮೊದಲ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಲಸಿಕೆ ಹಾಕಲಾಗಿದೆ? ಅವರಲ್ಲಿ ಎಷ್ಟು ಮಂದಿಗೆ ಎರಡನೇ ಹಂತದಲ್ಲಿ ಲಸಿಕೆ ಕೊಡಲಾಗಿದೆ ಎಂಬ ಅಂಕಿಅಂಶಗಳನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿ" ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Recommended Video

ಚಾಮರಾಜನಗರ: 960 ಹಾಸಿಗೆಯ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ | Oneindia Kannada

"18 ವರ್ಷ ಮೇಲ್ಪಟ್ಟವರಿಗೆ ಎಷ್ಟು ಮಂದಿಗೆ ಯಾವತ್ತಿನಿಂದ ಲಸಿಕೆ ಹಾಕುವ ಅಭಿಯಾನ ಶುರು ಮಾಡುವಿರಿ? ಎಂಬುದನ್ನು ಸ್ಪಷ್ಟವಾಗಿ ದೇಶದ ಜನತೆಗೆ ಮಾಹಿತಿ ಕೊಡಿ. ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತೆ ವರ್ತಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯತನ ದೇಶದ ಜನತೆ ಮೂರ್ಖರು ಎಂದು ಭಾವಿಸಿದಂತಿದೆ"ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

English summary
Vaccination Above 18+ Years: Former CM H D Kumaraswamy Series Of Tweet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X