ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ

|
Google Oneindia Kannada News

ಬೆಂಗಳೂರು, ಮೇ 9: ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಮೇ 10 ರಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್ ಸಿ.ವಿ.ರಾಮನ್ ಜನರಲ್, ಇಎಸ್ ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷದವರಿಗೆ ಕೋವಿಡ್ ಲಸಿಕೆ ವಿತರಿಸಲಾಗುವುದು. ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ 18-44 ವಯೋಮಾನದವರಿಗೆ ಲಸಿಕೆ ನೀಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಸಚಿವರು ವಿವರಿಸಿದರು.

ಎರಡನೇ ಡೋಸ್ ವ್ಯಾಕ್ಸಿನ್‌ಗಾಗಿ ಕಾಯುತ್ತಿರುವವರಿಗೆ ಶಾಂಕಿಂಗ್ ನ್ಯೂಸ್!ಎರಡನೇ ಡೋಸ್ ವ್ಯಾಕ್ಸಿನ್‌ಗಾಗಿ ಕಾಯುತ್ತಿರುವವರಿಗೆ ಶಾಂಕಿಂಗ್ ನ್ಯೂಸ್!

18-44 ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲಾ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗುವುದು. ಕೋವಿಡ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕೆ ಕೇಂದ್ರಕ್ಕೆ ಬರುವವರಿಗೆ ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ಧವಾಗಿದೆ

ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ಧವಾಗಿದೆ

ಪ್ರತಿ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರ್ಕಾರ ಬದ್ಧವಾಗಿದೆ. ಅಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ಸಾಗಿದೆ. ಆದ್ದರಿಂದ ಎಲ್ಲಾ ನಾಗರಿಕರು, ಅದರಲ್ಲೂ ವಿಶೇಷವಾಗಿ ನನ್ನ ಯುವಮಿತ್ರರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು. ಖಂಡಿತವಾಗಿ ಲಸಿಕೆ ಸಿಗುತ್ತದೆ ಎಂದು ಸಚಿವರು ಮನವಿ ಮಾಡಿದ್ದಾರೆ.

ಯಡಿಯೂರಪ್ಪ ಸಾಂಕೇತಿಕ ಚಾಲನೆ ನೀಡಿದ್ದರು

ಯಡಿಯೂರಪ್ಪ ಸಾಂಕೇತಿಕ ಚಾಲನೆ ನೀಡಿದ್ದರು

18-44 ವರ್ಷವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮೇ 1 ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕ ಚಾಲನೆ ನೀಡಿದ್ದರು. ರಾಜ್ಯದಲ್ಲಿ 3.26 ಕೋಟಿ ಈ ವಯೋಮಾನದವರಿದ್ದಾರೆ. ಎಲ್ಲರಿಗೂ 6.52 ಕೋಟಿ ಡೋಸ್ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

ಇನ್ನಷ್ಟು ಲಸಿಕೆ ಮೇ 2 ಅಥವಾ ಮೂರನೇ ವಾರ ಸಿಗಲಿದೆ

ಇನ್ನಷ್ಟು ಲಸಿಕೆ ಮೇ 2 ಅಥವಾ ಮೂರನೇ ವಾರ ಸಿಗಲಿದೆ

ಇದಕ್ಕಾಗಿ ರಾಜ್ಯ ಸರ್ಕಾರದಿಂದ 2 ಕೋಟಿ ಕೋವಿಶೀಲ್ಡ್ ಡೋಸ್ ಹಾಗೂ 1 ಕೋಟಿ ಕೋವ್ಯಾಕ್ಸಿನ್ ಡೋಸ್ ಪೂರೈಕೆಗೆ ಬೇಡಿಕೆ ಇಡಲಾಗಿದೆ. ಸೀರಂ ಸಂಸ್ಥೆಯಿಂದ ಈವರೆಗೆ 6.5 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲಾಗಿದೆ. ಇನ್ನಷ್ಟು ಲಸಿಕೆ ಮೇ 2 ಅಥವಾ ಮೂರನೇ ವಾರ ಸಿಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

Recommended Video

Covid 19 ಪರಿಸ್ಥಿತಿಯಲ್ಲು Tax ಬರೇ ಎಳಿತಿರೋ Nirmala Sitharaman | Oneindia Kannada
ಎರಡನೇ ಡೋಸ್‌ಗೆ ಪರದಾಟ

ಎರಡನೇ ಡೋಸ್‌ಗೆ ಪರದಾಟ

ಕರ್ನಾಟಕದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಈವರೆಗೆ 84,06, 980 ಮಂದಿ ಮೊದಲನೇ ಡೋಸ್ ವ್ಯಾಕ್ಸಿನೇಷನ್ ಪಡೆದುಕೊಂಡಿದ್ದಾರೆ. ಎರಡನೇ ಡೋಸ್ ಪಡೆದುಕೊಂಡವರು 18,45,420. ಮೊದಲನೇ ಹಂತದ ಲಸಿಕೆ ಅಭಿಯಾನದಲ್ಲಿ ಜನರು ಪಡೆದಿರುವುದು ಕೋವ್ಯಾಕ್ಸಿನ್ ಮಾತ್ರ. ಅದಾಗಲೇ 18 ಲಕ್ಷ ಮಂದಿ ಎರಡನೇ ಡೋಸ್ ಕೋವ್ಯಾಕ್ಸಿನ್ ಪಡೆದವರೂ ಸೇಫ್. ಮೊದಲೇ ಡೋಸ್ ಕೋವ್ಯಾಕ್ಸಿನ್ ಪಡೆದು ಇದೀಗ 28 ದಿನ ಮುಗಿದಿದ್ದು, ಎರಡನೇ ಡೋಸ್ ಲಸಿಕೆಗಾಗಿ ಪರದಾಡುತ್ತಿದ್ದಾರೆ ಎಂದು ಅಂಕಿ ಅಂಶ ತಿಳಿಸಿದೆ.

English summary
Covid-19 vaccination will be provided to citizens of 18-44 age group at all major government hospitals and medical colleges from Monday, 10th May, said Health and Medical Education Minister Dr.K.Sudhakar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X