ಕರ್ನಾಟಕದಲ್ಲಿ ಬಿಕ್ಕಟ್ಟು: ಕೇಂದ್ರ ಗೃಹ ಇಲಾಖೆಗೆ ರಾಜ್ಯಪಾಲರ ವರದಿ

ಬೆಂಗಳೂರು, ಜುಲೈ 19: ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ರಾಜ್ಯಪಾಲ ವಜುಭಾಯಿ ವಾಲ ಅವರು ತುರ್ತು ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.

ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಮಧ್ಯಾಹ್ನ 1.30ರೊಳಗೆ ವಿಶ್ವಾಸಮತ ಯಾಚನೆಗೆ ಗಡುವು ನೀಡಿ ರಾಜ್ಯಪಾಲರು ಸಂದೇಶ ಕಳುಹಿಸಿದ್ದರು.

Governor Vajubhai Vala sends an interim report on today’s development to Home Secretary.

ಈ ಬಗ್ಗೆ ಸದನದಲ್ಲಿ ಉತ್ತರಿಸಿದ ಸಿಎಂ ಕುಮಾರಸ್ವಾಮಿ, "1.30ಕ್ಕೆ ವಿಶ್ವಾಸಮತ ಯಾಚನೆ ಸಾಧ್ಯವಿಲ್ಲ, ಸಂವಿಧಾನ, ರಾಜ್ಯಪಾಲರ ಬಗ್ಗೆ ಗೌರವವಿದೆ, ಆದರೆ ಅವರ ಸಂದೇಶದ ಪ್ರಕಾರ ನಡೆದುಕೊಳ್ಳಲಾಗುತ್ತಿಲ್ಲ, ನನ್ನದೇ ಆದ ಮಿತಿಯಿದೆ" ಎಂದರು.

ಮೊದಲು ನೀಡಿದ್ದ ಗಡುವು ತಿರಸ್ಕರಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲರು, ಕಾನೂನು ತಜ್ಞರ ಜೊತೆ ಚರ್ಚಿಸಿ, ಸದನ ಕಲಾಪದ ಬಗ್ಗೆ ಮಾಹಿತಿ ಪಡೆದು, ಕೇಂದ್ರ ಗೃಹ ಇಲಾಖೆಗೆ ತುರ್ತು ವರದಿಯನ್ನು ಸಲ್ಲಿಸಿದ್ದಾರೆ, ಈ ವರದಿ ಆಧಾರದ ಮೇಲೆ ಕೇಂದ್ರ ಸರ್ಕಾರ ಮುಂದಿನ ತೀರ್ಮಾನ ಕೈಗೊಳ್ಳಬಹುದು.

ಕರ್ನಾಟಕದಲ್ಲಿನ ಸದ್ಯದ ರಾಜಕೀಯ ಪರಿಸ್ಥಿತಿಯಿಂದ ಸಾಂವಿಧಾನಿಕ ಬಿಕ್ಕಟ್ಟು ಉದ್ಭವಿಸಿದೆ ಎಂದರೆ ಗೃಹ ಇಲಾಖೆಯೂ ರಾಜ್ಯಪಾಲರ ವರದಿ ಆಧಾರಿಸಿ, ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬಹುದು.

ಸದ್ಯಕ್ಕೆ ರಾಜ್ಯಪಾಲರು ಸಂಜೆ 6 ಗಂಟೆಯೊಳಗೆ ವಿಶ್ವಾಸಮತ ಯಾಚನೆ ಮಾಡುವಂತೆ ಮತ್ತೊಂದು ಗಡುವು ನೀಡಿದ್ದು, ಈ ಗಡುವಿನಲ್ಲಿ ಯಾವುದೇ ಫಲಿತಾಂಶ ಬರದಿದ್ದರೆ, ವಿಧಾನಸಭೆ ವಿಸರ್ಜನೆ, ರಾಷ್ಟ್ರಪತಿ ಆಡಳಿತ ಹೇರಿಕೆ ಅಸ್ತ್ರವನ್ನು ಕೇಂದ್ರದ ಬಿಜೆಪಿ ಸರ್ಕಾರವು ಪ್ರಯೋಗಿಸುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+