ವಿಧಾನಸೌಧದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭ ಉದ್ಘಾಟಿಸಿದ ಸಿಎಂ

ಮಹರ್ಷಿ ವಾಲ್ಮೀಕಿ ಜಯಂತಿ ಸಂತಸ ಎಲ್ಲೆಲ್ಲೂ ಕಳೆಗಟ್ಟಿದ್ದು, ಸಂಭ್ರಮದಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದೆ. ಹೀಗೆ ಕರ್ನಾಕಟದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು, ಸಿಎಂ ಸಿದ್ದರಾಮಯ್ಯ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿದರು.

ಹಾಗೇ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಾದ ಪ್ರತಿ ಸಾಧಕರಿಗೂ, 5 ಲಕ್ಷ ರೂಪಾಯಿ ನಗದನ್ನು ಮತ್ತು 20 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಯಿತು. ಇದೇ ವೇಳೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರತ್ಯೇಕ ಸಚಿವಾಲಯಕ್ಕೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ ಅವರು, ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ ರಿಮೋಟ್ ಒತ್ತುವುದರ ಮೂಲಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನೂತನ ಸಚಿವಾಲಯದ ಕೊಠಡಿ ಉದ್ಘಾಟಿಸಿದರು ಸಿಎಂ.

Valmiki Jayanti Celebration By Siddaramaiah Government In Karnataka

ಶಾಸಕರ ಭವನದ ಬಳಿಯೂ ಸಂಭ್ರಮ

ಹಾಗೇ ಮತ್ತೊಂದು ಕಡೆ ಸಿಎಂ ಸಿದ್ದರಾಮಯ್ಯ ಇಂದು ವಾಲ್ಮೀಕಿ ಜಯಂತಿಯ ಅಂಗವಾಗಿ ಶಾಸಕರ ಭವನದ ಬಳಿಯಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಹಾಗೆ ಪುಷ್ಪ ನಮನ ಸಲ್ಲಿಸಿದರು. ಈ ಸಮಯದಲ್ಲಿ ಹಾಲಿ ಸಚಿವರು ಹಾಗೂ ಮಾಜಿ ಸಚಿವರ ಸಮೇತ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸ್ವಾಮೀಜಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದ್ದರು.

ರಾಜ್ಯದ ಶಕ್ತಿಸೌಧದಲ್ಲೂ ಸಂಭ್ರಮ

ವಿಧಾನಸೌಧದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ, ರಾಜನಹಳ್ಳಿಯ ಮಹರ್ಷಿ ಗುರುಪೀಠದ ಪ್ರಸನ್ನಾನಂದ ಮಹಾಸ್ವಾಮೀಜಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ & ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಸೇರಿ ಇತರರು ಉಪಸ್ಥಿತರಿದ್ದರು.

Valmiki Jayanti Celebration By Siddaramaiah Government In Karnataka

ಒಟ್ನಲ್ಲಿ ಸಿಎಂ ಸಿದ್ದರಾಮಯ್ಯ ಕರ್ನಾಟಕದಲ್ಲಿ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಇದೀಗ ಅಧಿಕಾರ ವಹಿಸಿಕೊಂಡಿದ್ದು, 2ನೇ ಬಾರಿಗೆ ಸಿಎಂ ಆದ ನಂತರ ಮೊದಲ ಬಾರಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಿದ್ದಾರೆ. ವಿಧಾನಸೌಧವು ಸೇರಿ ವಿವಿಧೆಡೆ ಸರ್ಕಾರದ ವತಿಯಿಂದ ಅದ್ಧೂರಿಯಾಗಿ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಆಚರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+