ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಲ್ಮೀಕಿ ಜನಾಂಗಕ್ಕೆ ಡಿಸಿಎಂ ಸ್ಥಾನ ನೀಡುವಂತೆ ಸ್ವಾಮೀಜಿ ಆಗ್ರಹ

|
Google Oneindia Kannada News

ಬೆಂಗಳೂರು, ಆಗಸ್ಟ್ 25: ವಾಲ್ಮೀಕಿ ನಾಯಕ ಜನಾಂಗದ ನಾಯಕರೊಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಸೇರಿದಂತೆ ವಾಲ್ಮೀಕಿ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇತ್ತೀಚೆಗೆ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸ್ವಾಮೀಜಿ, " ಎಸ್ಟಿ ಮೀಸಲಾತಿ ಪ್ರಮಾಣವನ್ನು ಶೇ.3.5 ರಿಂದ ಶೇ.7.5ರಷ್ಟು ಹೆಚ್ಚಳಕ್ಕೆ ಸರ್ಕಾರ ಕೂಡಲೇ ಮುಂದಾಗಬೇಕು ಎಂದರು. ನಕಲಿ ಜಾತಿ ಪ್ರಮಾಣ ಪತ್ರ ಪಡೆದಿರುವ ಮತ್ತು ನೀಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಎಸ್ಟಿ ಜನಾಂಗಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಬೇಕೆಂಬುದು ಬಹಳ ದಿನದ ಬೇಡಿಕೆಯಾಗಿದೆ. ರಾಜ್ಯದ ಯಾವುದಾದರೂ ಒಂದು ವಿಶ್ವವಿದ್ಯಾಲಯಕ್ಕೆ ವಾಲ್ಮೀಕಿ ಅವರ ಹೆಸರನ್ನು ನಾಮಕರಣ ಮಾಡಬೇಕು ಮತ್ತು ವಾಲ್ಮೀಕಿ ನಾಯಕರ ಶಾಸಕರೊಬ್ಬರನ್ನು ಕೊಟ್ಟ ಮಾತಿನಂತೆ ಉಪ ಮುಖ್ಯಮಂತ್ರಿ ಯನ್ನಾಗಿ ಮಾಡಬೇಕು" ಎಂದರು.

ಕರ್ನಾಟಕ ಬಿಜೆಪಿ ಪಾಲಿಗೆ 'ಡಿಸಿಎಂ' ಕುರ್ಚಿಯೇ ಟೈಂ ಬಾಂಬ್; ಬಿಎಸ್ ವೈ ಜ್ವಾಲಾಮುಖಿ!ಕರ್ನಾಟಕ ಬಿಜೆಪಿ ಪಾಲಿಗೆ 'ಡಿಸಿಎಂ' ಕುರ್ಚಿಯೇ ಟೈಂ ಬಾಂಬ್; ಬಿಎಸ್ ವೈ ಜ್ವಾಲಾಮುಖಿ!

"ಯಾವುದೇ ಸರ್ಕಾರ ಬರಲಿ ಸಮಾಜದ ಮೂರು ಜನ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂಬುದು ನಮ್ಮ ಒತ್ತಾಯವಾಗಿದೆ" ಎಂದು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ತಿಳಿಸಿದರು. ನಿಗಮ ಮಂಡಳಿ ಮತ್ತು ಆಯೋಗಗಳ ರಚನೆಯಲ್ಲೂ ನಮ್ಮ ಸಮಾಜದವರನ್ನು ಪರಿಗಣಿಸಬೇಕು. ಮೀಸಲಾತಿ ಹೆಚ್ಚಳಕ್ಕಾಗಿ ಈ ಹಿಂದೆ ನಾವು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಿದಾಗ, ಅಂದಿನ ಸಮ್ಮಿಶ್ರ ಸರ್ಕಾರ 3 ತಿಂಗಳ ಕಾಲಾವಕಾಶ ಪಡೆದುಕೊಂಡಿತ್ತು. ಆ ಪ್ರಕಾರ ಸಮಯ ಮುಗಿಯುವ ಹಂತಕ್ಕೆ ಬಂದಿದ್ದು, ರಾಜ್ಯದಲ್ಲಿ ನೆರೆ ಹಾವಳಿಯಿಂದಾಗಿ ಸರ್ಕಾರಕ್ಕೆ ನಾವು ಒತ್ತಡ ಹಾಕಿರಲಿಲ್ಲ. ಇನ್ನಾದರೂ ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಳ ವಿಚಾರವಾಗಿ ಗಮನ ಹರಿಸಬೇಕು. ಮೀಸಲಾತಿ ಹೆಚ್ಚಳ ಕುರಿತು ರಚನೆ ಮಾಡಲಾಗಿದ್ದ ಆಯೋಗವು ಕೂಡಲೇ ತನ್ನ ವರದಿಯನ್ನು ಸರ್ಕಾರಕ್ಕೆ ನೀಡಬೇಕು ಎಂದು ಮನವಿ ಮಾಡಿದರು.

Vamilki community leader should become DCM in Yediyurappa Government

ಇನ್ನೊಂದೆಡೆ, ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ 41% ಸಚಿವ ಸ್ಥಾನಗಳನ್ನು ಹಂಚಿಕೆ ಮಾಡಿರುವುದನ್ನು ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಸ್ವಾಗತಿಸಿದ್ದಾರೆ. ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯ ಸಂದರ್ಭದಲ್ಲಿ ಇನ್ನೂ ಹೆಚ್ಚಿನ ಸಚಿವ ಸ್ಥಾನಗಳನ್ನು ನೀಡುತ್ತೇವೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ಜೀ ನಮಗೆ ಭರವಸೆ ನೀಡಿದ್ದಾರೆ.

ಮೂರು ಡಿಸಿಎಂ ಹುದ್ದೆ ಸೃಷ್ಟಿಗೆ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸೂಚನೆ?ಮೂರು ಡಿಸಿಎಂ ಹುದ್ದೆ ಸೃಷ್ಟಿಗೆ ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸೂಚನೆ?

ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಉತ್ತರ ಕರ್ನಾಟಕದ ಜನರಿಗೆ ಜಲಪ್ರವಾಹದಿಂದ ಅಪಾರವಾದ ಹಾನಿಯಾಗಿದೆ. ಆದ್ದರಿಂದ ಜನರು ಮನೆ ಮಠಗಳನ್ನು ಕಳೆದುಕೊಂಡು ಗಂಜಿ ಕೇಂದ್ರದಲ್ಲಿ ವಾಸಿಸುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಅತ್ಯಂತ ತ್ವರಿತವಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವ ಕಡೆಗೆ ಗಮನ ಹರಿಸಬೇಕು ಎಂದು ಶ್ರೀ ವಚನಾನಂದ ಸ್ವಾಮೀಜಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

English summary
Vamilki community leader should become DCM in Karnataka Government demands BS Yediyurappa Valmiki peetam Prasannananda swamiji.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X