ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಂದೇ ಭಾರತ್, ಕಾಶಿ ದರ್ಶನ ವಿಶೇಷ ರೈಲಿಗೆ ಪ್ರಧಾನಿ ಮೋದಿ ಚಾಲನೆ

|
Google Oneindia Kannada News

ಬೆಂಗಳೂರು,ನವೆಂಬರ್ 11 : ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಚಾಲನೆಗೆ ಹಸಿರು ನಿಶಾನೆ ತೋರಿಸಿದರು.

ಪ್ರಧಾನಿ ಮೋದಿ ಅವರನ್ನ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ವಾಗತಿಸಿದರು. ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡುವ ಮೊದಲು ಕೆಲ ಸಮಯ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನೊಳಗೆ ಪ್ರವೇಶಿಸಿ ಪರಿಶೀಲಿಸಿದರು.

ಇದೆ ವೇಳೆ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರದಾನಿ ಮೋದಿ ಅವರು ಚಾಲನೆ ನೀಡಿದರು. ಕಾಶಿಯಾತ್ರೆಗೆಂದು ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷೆಯ ಭಾರತ ಗೌರವ ಕಾಶಿ ದರ್ಶನ್ ರೈಲು ಇದಾಗಿದ್ದು, ರಾಜ್ಯದ ಜನತೆಯ ಕಾಶಿ ಯಾತ್ರೆ ಕನಸನ್ನು ನನಸಾಗಿಸಲಿದೆ.

Vande Bharat Express, Kashi Darshan Special Train Green signal from PM Modi

ಎಂಟು ದಿನಗಳ ಕಾಲ ಕಾಶಿ ದರ್ಶನದ ಈ ರೈಲು ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯಾ ಮುಂತಾದ ಪವಿತ್ರ ಸ್ಥಳಗಳಿಗೆ ಯಾತ್ರಿಕರನ್ನು ಕರೆದೊಯ್ಯುತ್ತದೆ. ಮುಜರಾಯಿ ಇಲಾಖೆ ಭಾರತ ಸರ್ಕಾರದ ಸಹಯೋಗದಲ್ಲಿ ಈ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ. ಈ ಯಾತ್ರೆಗೆ ಒಟ್ಟು ವೆಚ್ಚ 20,000 ರೂ ಇದ್ದು, ಇದರಲ್ಲಿ ಸರ್ಕಾರ 5000ರೂ ಸಹಾಯಧನ ನೀಡುತ್ತಿದೆ. ಪ್ರವಾಸದಲ್ಲಿ ಆಹಾರ, ವಸತಿ ಹಾಗೂ ಇನ್ನಿತರ ಸೌಕರ್ಯಗಳನ್ನು ಯಾತ್ರಿಕರಿಗೆ ಕಲ್ಪಿಸಲಾಗಿದೆ.

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನಲ್ಲಿ ಇರುವ ಸೌಲಭ್ಯಗಳೇನು..?

ದಕ್ಷಿಣ ಭಾರತದ ಮೊದಲ ಹಾಗೂ ದೇಶದ 5 ನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಿದರು. ವಂದೇ ಭಾರತ್ ರೈಲಿನಲ್ಲಿ ಆನ್ ಬೋರ್ಡ್ ಉಪಾಹಾರದ ವ್ಯವಸ್ಥೆ, ವೈಫೈ, ಮಾಹಿತಿ ವ್ಯವಸ್ಥೆ, ಚಾರ್ಜಿಂಗ್ ಪಾಯಿಂಟ್, ರೀಡಿಂಗ್ ಲೈಟ್ ವ್ಯವಸ್ಥೆ ಸ್ವಯಂ ಚಾಲಿತ ಬಾಗಿಲು,ಸಿಸಿ ಟಿವಿ,ಬಯೋ ಶೌಚಾಲಯ ವ್ಯವಸ್ಥೆ ಇದೆ.

Vande Bharat Express, Kashi Darshan Special Train Green signal from PM Modi

ಕಾಶಿ ದರ್ಶನ್ ರೈಲಿನಲ್ಲಿ ಪ್ರವಾಸಿಗರಿಗೆ ಇರುವ ಸೌಲಭ್ಯಗಳೇನು..?

ಕರ್ನಾಟಕ - ಭಾರತ್‌ ಗೌರವ್‌ ಕಾಶಿ ದರ್ಶನ ರೈಲು ಯಾತ್ರೆಯ ಟ್ರಿಪ್‌ನ ಲ್ಲಿ ಪ್ರವಾಸಿಗರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಕಾಶಿ ವಿಶ್ವನಾಥ ಹಾಗೂ ಅಯೋಧ್ಯೆ ರಾಮಲಲ್ಲಾ ದೈವ ಭೂಮಿಯ ವೈಭವ ಭಾಗ್ಯ ಇದಾಗಿದೆ. 8 ದಿನಗಳ ಕಾಲದ ಈ ಟೂರ್‌ ಪ್ಯಾಕೇಜ್‌ನಲ್ಲಿ ಟ್ರೈನ್‌ ದರ, ಪ್ರವಾಸಿ ಸ್ಥಳಗಳಲ್ಲಿ ಬಸ್‌ ವ್ಯವಸ್ಥೆ, ತಂಗಲು ಹೋಟೆಲ್‌, 8 ದಿನಗಳಲ್ಲಿಊಟ ಮತ್ತು ತಿಂಡಿ ವ್ಯವಸ್ಥೆ ಹಾಗೂ ವಿಮೆ ಇರಲಿದೆ. ಯಾತ್ರಾ ಸ್ಥಳಗಳಿಗೆ ಪ್ರಯಾಣಿಸಲು ಸ್ಥಳೀಯ ಸಾರಿಗೆ ವ್ಯವಸ್ಥೆ ಹಾಗೂ ತುರ್ತು ವೈದ್ಯ ಸೇವೆ ವ್ಯವಸ್ಥೆಗಳನ್ನು ಮಾಡಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ 3 ಟಯರ್‌ ಎ.ಸಿ. ವ್ಯವಸ್ಥೆ ಮಾಡಲಾಗಿದ್ದು, 14 ಬೋಗಿಗಳ ಮೇಲೂ ರಾಜ್ಯದ 28 ದೇವಸ್ಥಾನಗಳ ಛಾಯಾಚಿತ್ರಗಳ ಬ್ರಾಂಡಿಂಗ್‌ ಮಾಡಲಾಗಿದೆ. ನಮ್ಮ ರಾಜ್ಯದ ದೇವಸ್ಥಾನಗಳನ್ನು ಭಾರತದ ಉದ್ದಗಲಕ್ಕೂ ಸಂಚರಿಸಲಿರುವ ಟ್ರೈನ್‌ ಮೂಲಕ ಪ್ರಚಾರ ಮಾಡುವುದು ಇದರ ಉದ್ದೇಶವಾಗಿದೆ.

English summary
PM Modi drives Vande Bharat Express, Kashi Darshan Special Train in Bengaluru, Vande Bharat Express,Bharat Gaurav Kashi Darshan Train Yatra on Nov 11, Green signal from PM Modi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X