ಬೆಂಗಳೂರು ಹೊಸಪೇಟೆ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್?
ಬೆಂಗಳೂರು, ಸೆಪ್ಟೆಂಬರ್ 14: ರಾಜ್ಯಕ್ಕೆ ಮತ್ತೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚರಿಸುವ ಸಾಧ್ಯತೆ ಇದ್ದು, ಇದು ಬೆಂಗಳೂರು ಹೊಸಪೇಟೆ ನಡುವೆ ಬಳ್ಳಾರಿ ಮಾರ್ಗವಾಗಿ ಸಂಚರಿಸಿಲಿದೆ ಎಂಬ ಮಾಹಿತಿ ಈಗ ತಿಳಿದು ಬಂದಿದೆ.
ನೈರುತ್ಯ ರೈಲ್ವೆ ವಿಭಾಗವು ಬಳ್ಳಾರಿ ಗುಂತಕಲ್ ಮಾರ್ಗವಾಗಿ ಹೊಸಪೇಟೆ - ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದು ವರದಿಗಳು ತಿಳಿಸಿವೆ.

ವಂದೇ ಭಾರತ್' ಕಾರ್ಯಚರಣೆ ಶುರು ಮಾಡುವ ಕುರಿತಂತೆ ಸಮೀಕ್ಷೆ ನಡೆಸಲು ರೈಲ್ವೆ ಇಲಾಖೆ ನಿರ್ದೇಶನ ನೀಡಿದೆ. ಈ ಭಾಗದಲ್ಲಿ ರೈಲುಗಳು 100 - 130 ಕೆಎಂಪಿಎಚ್ ವೇಗದಲ್ಲಿ ಚಲಿಸಲು ಸಾಧ್ಯವಾಗುವಂತೆ ಹಳಿಗಳಿವೆ. ಬೆಂಗಳೂರು - ಹೊಸಪೇಟೆ ನಡುವೆ ಜೋಡಿ ಮಾರ್ಗವಿದ್ದು, ಸಂಪೂರ್ಣ ವಿದ್ಯುದೀಕರಣವಾಗಿದೆ ಎಂದು ವಿಜಯನಗರ ರೈಲ್ವೆ ಅಭಿವೃದ್ಧಿ ಕ್ರಿಯಾ ಸಮಿತಿ ಅಧ್ಯಕ್ಷ ವೈ.ಯಮುನೇಶ್ ಅವರು ಮಾಹಿತಿ ನೀಡಿದ್ದಾರೆ.
ಸದ್ಯ, ಬೆಂಗಳೂರು - ಹೊಸಪೇಟೆ ನಡುವೆ ಕಾರ್ಯಚರಣೆ ನಡೆಸುತ್ತಿರುವ ಇಂಟರ್ ಸಿಟಿ ಎಕ್ಸ್‌ಪ್ರೆಸ್, ಬೆಳಗ್ಗೆ 5 ಗಂಟೆಗೆ ಹೊರಟು ಮಾರ್ಗ ಮಧ್ಯೆ ಬರುವ 20ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ನಿಂತು, ಸಂಜೆ 4.25ಕ್ಕೆ ಹೊಸಪೇಟೆ ತಲುಪುತ್ತದೆ. ಅದೇ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ ಆರಂಭಿಸಿದರೆ, ಪ್ರಯಾಣದ ಅವಧಿಯು ಮತ್ತಷ್ಟು ಕಡಿಮೆಯಾಗಲಿದೆ ಎಂದು ಭಾವಿಸಲಾಗಿದೆ.
ಇದಕ್ಕೂ ಮುಂಚೆ ಬೆಂಗಳೂರು ಹಾಗೂ ಹೈದರಾಬಾದ್ ನಡುವೆ ಶೀಘ್ರವೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಕಾರ್ಯಾಚರಣೆ ಆರಂಭವಾಗಲಿದೆ ಎಂದು ವರದಿಗಳು ತಿಳಿಸಿದ್ದವು. ಆದರೆ ಕಾರ್ಯಾಚರಣೆ ದಿನಾಂಕದ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಇವರೆಡು ನಗರಗಳ ನಡುವೆ 618 ಕಿಲೋಮೀಟರ್ ಅಂತರವನ್ನು 7 - 8 ಗಂಟೆಗಳಲ್ಲಿ ವಂದೇ ಭಾರತ್ ಕ್ರಮಿಸಲಿದೆ ಎಂದು ಹೇಳಲಾಗಿದೆ.
ಶಿವಮೊಗ್ಗದಿಂದ ಬೆಂಗಳೂರು ನಡುವೆಯೂ ಶೀಘ್ರದಲ್ಲಿಯೇ ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಾಟ ಆರಂಭಿಸಲಾಗುತ್ತದೆಯೂ ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ಎಲ್ಲ ಸಿದ್ಧತೆಗಳು ಪ್ರಾರಂಭವಾಗಿವೆ. ಮಂಗಳೂರು ಬೆಂಗಳೂರು ನಡುವೆಯೂ ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಓಡಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ಪ್ರಸ್ತುತ, ಕರ್ನಾಟಕದಲ್ಲಿ ಎರಡು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸಂಚರಿಸುತ್ತಿವೆ. ಬೆಂಗಳೂರು - ಹುಬ್ಬಳ್ಳಿ - ಧಾರವಾಡ ನಡುವೆ ಓಡಾಟ ನಡೆಸುವ ರೈಲು ವಾರದ ಎಲ್ಲ ದಿನಗಳಲ್ಲಿ ಮಂಗಳವಾರ ಹೊರತುಪಡಿಸಿ ಕಾರ್ಯಾಚರಣೆ ನಡೆಸುತ್ತಿದೆ. ಇದು 7 ಗಂಟೆ ಪ್ರಯಾಣದ ಅವಧಿಯಾಗಿದೆ. ಇನ್ನೊಂದು ರೈಲು ಚೆನ್ನೈ - ಬೆಂಗಳೂರು - ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿದೆ.
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸೆಮಿ ಹೈಸ್ಟೀಡ್ ರೈಲುಗಳಾಗಿದ್ದು, ಅತ್ಯುಧುನಿಕ ಸೌಕರ್ಯವನ್ನು ಹೊಂದಿವೆ. ಇದರಲ್ಲಿ ಪ್ರತೇಕ ಎಂಜಿನ್ ಇಲ್ಲ. ಸಂಪೂರ್ಣ ಎಸಿಯಿರುವ ಈ ರೈಲಿನ ಸೀಟುಗಳು ಹೆಚ್ಚು ಆರಾಮದಾಯವಾಗಿವೆ. ಸ್ವಯಂ ಚಾಲಿತ ಬಾಗಿಲು, ಜೈವಿಕ ಶೌಚಾಲಯ, ವೈಫೈ, ಅಗ್ನಿ ಸುರಕ್ಷತಾ ಸಾಧನಗಳನ್ನು ಒಳಗೊಂಡಿವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು












Click it and Unblock the Notifications