ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು?

|
Google Oneindia Kannada News

ಬೆಳಗಾವಿ, ನವೆಂಬರ್ 5: ಭಾರತದ 'ವಂದೇ ಭಾರತ್ ಎಕ್ಸ್‌ಪ್ರೆಸ್' ಸೆಮಿ ಹೈಸ್ಪೀಡ್ ರೈಲು ಶೀಘ್ರದಲ್ಲೇ ಬೆಳಗಾವಿ ಮತ್ತು ಬೆಂಗಳೂರು ನಡುವೆ ಓಡುವ ನಿರೀಕ್ಷೆಯನ್ನು ಹುಟ್ಟು ಹಾಕಿದೆ.

ಶುಕ್ರವಾರ ಕೇಂದ್ರದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅನ್ನು ಭೇಟಿ ಮಾಡಿದ ಸಂಸದೆ ಮಂಗಳಾ ಸುರೇಶ ಅಂಗಡಿ, ಬೆಳಗಾವಿ-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಓಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ವಂದೇ ಭಾರತ್ ರೈಲಿಗೆ ಡಿಕ್ಕಿ: ಜಾನುವಾರು ಮಾಲೀಕರಿಗೆ ಎಚ್ಚರಿಕೆ ನೀಡಿದ ರೈಲು ಇಲಾಖೆವಂದೇ ಭಾರತ್ ರೈಲಿಗೆ ಡಿಕ್ಕಿ: ಜಾನುವಾರು ಮಾಲೀಕರಿಗೆ ಎಚ್ಚರಿಕೆ ನೀಡಿದ ರೈಲು ಇಲಾಖೆ

ನವದೆಹಲಿಯಲ್ಲಿರುವ ಸಚಿವರ ಕಚೇರಿಗೆ ಭೇಟಿ ನೀಡಿ ಅವರು ಮನವಿ ಸಲ್ಲಿಸಿದ್ದಾರೆ. "ಬೆಳಗಾವಿ ರಾಜ್ಯದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಕೈಗಾರಿಕೆ, ಶಿಕ್ಷಣ ಮತ್ತು ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಪ್ರಗತಿಯನ್ನು ಸಾಧಿಸುತ್ತಿದೆ. ಬೆಂಗಳೂರಿನಿಂದ ಬೆಳಗಾವಿಗೆ ಸೆಮಿ ಸ್ಪೀಡ್ ವಂದೇ ಭಾರತ್ ರೈಲನ್ನು ಪರಿಚಯಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಎರಡು ನಗರಗಳ ನಡುವೆ ವಂದೇ ಭಾರತ್ ರೈಲು ಪರಿಚಯಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದೆ ಮಂಗಳ ಸುರೇಶ್ ಅಂಗಡಿ ತಿಳಿಸಿದ್ದಾರೆ.

Vande Bharat express soon run between Bengaluru to Belagavi

ಇದರ ಜೊತೆಗೆ ಬಹು ನಿರೀಕ್ಷಿತ ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆಗೆ ಶಂಕುಸ್ಥಾಪನೆ ಮತ್ತು ಬೆಳಗಾವಿಯ ಹೈಟೆಕ್ ರೈಲು ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ಮೋದಿ ಅನ್ನು ಆಹ್ವಾನಿಸಲು ಸಂಸದ ಮಂಗಳಾ ಅಂಗಡಿ ಸಚಿವರೊಂದಿಗೆ ಚರ್ಚಿಸಿದರು.

ವಂದೇ ಭಾರತ್ ರೈಲಿನ ವಿಶೇಷತೆಗಳೇನು?

ವಂದೇ ಭಾರತ್ ಎಕ್ಸ್‌ಪ್ರೆಸ್ ಸಮಿ-ಹೈಸ್ಪೀಡ್, ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ಟ್ರೈನ್ ಆಗಿದ್ದು, ಅಕ್ಟೋಬರ್ 2022ರಲ್ಲಿ ದೇಶದ 4 ಮಾರ್ಗಗಳಲ್ಲಿ ಭಾರತೀಯ ರೈಲ್ವೆಯು ಈ ಸೇವೆಯನ್ನು ಪ್ರಾರಂಭಿಸಿದೆ.

ಇದನ್ನು ಮೇಕ್ ಇನ್ ಇಂಡಿಯಾ ಅಡಿಯಲ್ಲಿ ಚೆನ್ನೈನ ಪೆರಂಬೂರ್‌ನಲ್ಲಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF) ವಿನ್ಯಾಸಗೊಳಿಸಿದೆ. ಮೊದಲ ರೈಲಿನ ನಿರ್ಮಾಣವು 18 ತಿಂಗಳುಗಳನ್ನು ತೆಗೆದುಕೊಂಡಿತು. ಈ ಸೇವೆಗೆ 27 ಜನವರಿ 2019ರಂದು 'ವಂದೇ ಭಾರತ್ ಎಕ್ಸ್‌ಪ್ರೆಸ್' ಎಂದು ಹೆಸರಿಸಲಾಯಿತು. ವಂದೇ ಭಾರತ್ ಎಕ್ಸ್‌ಪ್ರೆಸ್ ಗರಿಷ್ಠ ವಾಣಿಜ್ಯ ವೇಗ ಗಂಟೆಗೆ 160 ಕಿ.ಮೀ. ಆಗಿದ್ದು, ಪರೀಕ್ಷೆಯ ಸಮಯದಲ್ಲಿ ಇದು ಗಂಟೆಗೆ 180 ಕಿ.ಮೀ ಮೀರಿತ್ತು. ಆದರೆ ಅದರ ಟ್ರ್ಯಾಕ್‌ಗಳು ಅಂತಹ ಹೆಚ್ಚಿನ ವೇಗವನ್ನು ಬೆಂಬಲಿಸುವ ಸಾಮರ್ಥ್ಯವನ್ನು ಹೊಂದಿಲ್ಲ. ಹೀಗಾಗಿ ರೈಲು ಗರಿಷ್ಠ 130 ವೇಗದಲ್ಲಿ ಕಾರ್ಯನಿರ್ವಹಿಸುತ್ತದೆ.

English summary
Vande Bharat express soon run between Bengaluru to Belagavi Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X