• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಂಗಳೂರು-ಚೆನ್ನೈ ನಡುವೆ ವಂದೇ ಭಾರತ್ ರೈಲು ಸಂಚಾರ

|

ಬೆಂಗಳೂರು, ಫೆಬ್ರವರಿ 22 : ಮಂಗಳೂರು-ಚೆನ್ನೈ ಮತ್ತು ಮಂಗಳೂರು-ಹೈದರಾಬಾದ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲಾಗುತ್ತದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಘೋಯೆಲ್ ಘೋಷಣೆ ಮಾಡಿದ್ದಾರೆ.

ಶುಕ್ರವಾರ ಪಿಯೂಷ್ ಘೋಯೆಲ್ ಅವರು ಕರ್ನಾಟಕ ಪ್ರವಾಸ ಕೈಗೊಂಡಿದ್ದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಮೇಕ್ ಇನ್ ಇಂಡಿಯಾ ಯೋಜನೆಯಡಿ ತಯಾರಿಸಲಾದ ದೇಶದ ಮೊದಲ ಸೆಮಿ ಹೈಸ್ಪೀಡ್ ರೈಲನ್ನು ಕರ್ನಾಟಕಕ್ಕೆ ಪರಿಚಯಿಸುವುದಾಗಿ ಹೇಳಿದರು.

'ವಂದೇ ಭಾರತ್' ರೈಲಿನ ಗಾಜು ಪುಡಿಮಾಡಿದ ಕಿಡಿಗೇಡಿಗಳು

'ದೇಶದ ಪ್ರಮುಖ ನಗರಗಳನ್ನು ಸಂಪರ್ಕಿಸಲು ವಂದೇ ಭಾರತ್ ರೈಲನ್ನು ಪರಿಚಯಿಸಲಾಗುತ್ತದೆ. ಮಂಗಳೂರು-ಚೆನ್ನೈ ಮತ್ತು ಮಂಗಳೂರು-ಹೈದರಾಬಾದ್ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸಲಿದೆ' ಎಂದರು.

ವಂದೇ ಭಾರತ್ ಎಕ್ಸ್ ಪ್ರೆಸ್ ಮೆನು : ಮಫಿನ್, ಡೊನಟ್ಸ್, ಫೈವ್ ಸ್ಟಾರ್ ಡಿನ್ನರ್

'ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ಆಳವಡಿಕೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ ಆರು ತಿಂಗಳಿನಲ್ಲಿ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಆಳವಡಿಸಲಾಗುತ್ತದೆ' ಎಂದು ಪಿಯೂಷ್ ಘೋಯೆಲ್ ತಿಳಿಸಿದರು.

ಪ್ರಧಾನಿ ಮೋದಿಯಿಂದ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ

ಏನಿದು ವಂದೇ ಭಾರತ್ ಎಕ್ಸ್‌ಪ್ರೆಸ್ : ಸಂಪೂರ್ಣ ಸ್ವದೇಶಿ ನಿರ್ಮಿತ ಹೈಸ್ಪೀಡ್‌ ರೈಲು ಟ್ರೈನ್‌ 18ಗೆ 'ವಂದೇ ಭಾರತ್‌ ಎಕ್ಸ್‌ಪ್ರೆಸ್' ಎಂದು ನಾಮಕರಣ ಮಾಡಲಾಗಿದೆ. ದೆಹಲಿ ಮತ್ತು ವಾರಣಾಸಿ ನಗರಗಳ ನಡುವೆ ಗಂಟೆಗೆ 160 ಕಿ.ಮೀ.ವೇಗದಲ್ಲಿ ಸಂಚಾರ ನಡೆಸುವ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಫೆ.15ರಂದು ಚಾಲನೆ ನೀಡಿದ್ದರು.

16 ಕೋಚ್‌ಗಳನ್ನು ಹೊಂದಿರುವ ಈ ರೈಲನ್ನು ಚೆನ್ನೈನ ಇಂಟೆಗ್ರೆಲ್ ಕೋಚ್ ಫ್ಯಾಕ್ಟರಿಯಲ್ಲಿ 18 ತಿಂಗಳಿನಲ್ಲಿ ನಿರ್ಮಾಣ ಮಾಡಲಾಗಿದೆ. ಇದು ಸಂಪೂರ್ಣ ಹವಾನಿಯಂತ್ರಿತವಾಗಿದೆ, ದೇಶದ ಪ್ರಥಮ ಎಂಜಿನ್ ರಹಿತ ರೈಲು ಎಂಬ ಖ್ಯಾತಿ ಪಡೆದಿದೆ.

English summary
Vande Bharat Express train will be introduced on the Mangaluru-Chennai and Mangaluru-Hyderabad routes said Railway Minister Piyush Goyal in Bengaluru, Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X