• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Breaking: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕ

|
Google Oneindia Kannada News

ಬೆಂಗಳೂರು, ಮೇ 27: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.

ಸದ್ಯ ಮುಖ್ಯ ಕಾರ್ಯದರ್ಶಿ ಆಗಿರುವ ಪಿ. ರವಿಕುಮಾರ್ ಅವರು ಮೇ 31ಕ್ಕೆ ನಿವೃತ್ತಿ ಆಗಲಿದ್ದಾರೆ. ಈ ಹಿನ್ನೆಲೆಯಲ್ಲಿ ವಂದಿತಾ ಶರ್ಮಾ ಅವರನ್ನು ಮೇ 31ರಿಂದ ಅನ್ವಯ ಆಗುವಂತೆ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಿಸಲಾಗಿದೆ.

ವಂದಿತಾ ಶರ್ಮಾ ಅವರು ಸದ್ಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತೆ ಹುದ್ದೆಯಲ್ಲಿದ್ದಾರೆ. ವಂದಿತಾ ಶರ್ಮಾ 1986ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಆಗಿದ್ದಾರೆ. ಇವರ ಪತಿ ಐಎಸ್‌ಎನ್‌ ಪ್ರಸಾದ್ ಸಹ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ಹುದ್ದೆಯಲ್ಲಿದ್ದಾರೆ.

ಸಿಎಸ್ ಆಗುತ್ತಿರುವ 4ನೇ ಮಹಿಳೆ:
ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು.

ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.

ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದೊಡನೆಯೇ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

English summary
1986-batch IAS officer Vandita Sharma is the new Karnataka chief secretary as Chie as incumbent P Ravi Kumar is retiring on May 31.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X