ಅಂತರ್‌ಜಿಲ್ಲಾ ನದಿ ವಿವಾದ: ವರದಾ-ಬೆಡ್ತಿ ನದಿ ಯೋಜನೆ, ಪರಿಸರಕ್ಕೆ ಹಾನಿ ಆಗದಂತೆ DPR: ಮಾಜಿ ಸಿಎಂ

ಹಾವೇರಿ, ಸೆಪ್ಟಂಬರ್ 11: ವರದಾ ನದಿ ಮತ್ತು ಬೆಡ್ತಿ ನದಿ ಜೋಡಣೆ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸಂಪೂರ್ಣ ಸಾರ್ವಜನಿಕರೊಂದಿಗೆ ಮಾಹಿತಿ ಹಂಚಿಕೊಂಡು ಸಂಬಂಧ ಪಟ್ಟ ಉತ್ತರ ಕನ್ನಡ ಜಿಲ್ಲೆಯ ಜನರು ಹಾಗೂ ಸ್ವಾಮೀಜಿಯ ಜೊತೆಗೆ ಚರ್ಚೆ ಮಾಡಬೇಕು. ಯೋಜನೆ ಬಗ್ಗೆ ಮನವರಿಕೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ

ಹಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರದಾ ನದಿ ಮತ್ತು ಬೆಡ್ತಿ ನದಿ ಜೋಡಣೆಯ ಬಗ್ಗೆ ನಾನು ಸಭೆ ಮಾಡಿದ ಮೇಲೆ ದೊಡ್ಡ ಮಟ್ಟದ ಸಭೆ ನಡೆಸಿದೆ ಚರ್ಚೆ ನಡೆಯುತ್ತಿದೆ. ಉತ್ತರ ಕನ್ನಡದಲ್ಲಿಯೂ ಸಭೆ ನಡೆಯಿತು. ರಾಜ್ಯದ ನೀರಿನ ಸಂಪತ್ತು ಸದುಪಯೋಗ ಆಗಬೇಕು. ಅದು ಎಲ್ಲಿ ಉಪಯೋಗ ಆಗಬೇಕು ಅಲ್ಲಿ ಬಳಸಬೇಕು.

Varada-Bedti River Linking DPR Must Ensure No Environmental Harm Basavaraj Bommai

ಅಂತರ್ ಜಿಲ್ಲಾ ನದಿ ವಿವಾದ: ಯೋಜನೆ ಮಾಡೋಣ

ಮಹಾರಾಷ್ಟ್ರದಲ್ಲಿ ಹುಟ್ಟಿದ ಕೃಷ್ಣೆಗೆ ನಾವು ರಾಜ್ಯದಲ್ಲಿ ಯೋಜನೆ ಮಾಡಿದ್ದೇವೆ. ಕರ್ನಾಟಕದಲ್ಲಿ ಹುಟ್ಟಿರುವ ಕಾವೇರಿಗೆ ತಮಿಳುನಾಡಿನಲ್ಲಿ ಯೋಜನೆ ಮಾಡಲಾಗಿದೆ. ನದಿ ನೀರು ವ್ಯರ್ಥವಾಗಿ ಹೋಗಬಾರದು. ಹಾಗೂ ಪ್ರವಾಹ ಉಂಟಾಗಿ ನೀರು ವ್ಯರ್ಥವಾಗಿ ಹೋಗಬಾರದು. ಮೊದಲು ಅಂತರಾಷ್ಟ್ರೀಯ ಮಟ್ಟದಲ್ಲಿ ನದಿ ವಿವಾದಗಳು, ಅಂತಾರಾಜ್ಯ ಜಲ ವಿವಾದಗಳು ಇದ್ದವು, ಈಗ ಅಂತರ್ ಜಿಲ್ಲಾ ನದಿ ವಿವಾದಗಳು ಶುರುವಾಗಿದೆ ಎಂದು ಅವರು ಅಭಿಪ್ರಾಯ ಹೊರ ಹಾಕಿದ್ದಾರೆ.

ಈ ಯೋಜನೆಯಿಂದ ಪರಿಸರಕ್ಕೆ ಯಾವ ಹಾನಿ ಇಲ್ಲ

ವರದಾ ನದಿ ಮತ್ತು ಬೆಡ್ತಿ ನದಿ ಜೋಡಣೆಗೆ ಮೊದಲು ಮಾಡಿದ ಡಿಪಿಆರ್‌ನಿಂದ ಪರಿಸರಕ್ಕೆ ನಷ್ಟವಾಗುತ್ತದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಅದರಿಂದ ಮಾರ್ಪಾಡು ಮಾಡಿ ಯಾವುದೇ ರೀತಿಯ ನಷ್ಟ ಆಗದಂತೆ ಯೋಜನೆ ರೂಪಿಸಿದ್ದೇವೆ. ಇದನ್ನು ಉತ್ತರ ಕನ್ನಡದ ಜನರಿಗೆ ಮಾಹಿತಿ ಕೊಡುವ ಅಗತ್ಯವಿದೆ. ಮತ್ತು ಯಾರಿಗೆ ಆಪತ್ತಿದೆ ಅಲ್ಲಿಯ ಪರಮಪೂಜ್ಯರ ಜೊತೆಗೆ ಮಾತನಾಡುವ ಅಗತ್ಯವಿದೆ. ರಾಜ್ಯ ಸರ್ಕಾರ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಾರ್ವಜನಿಕರೊಂದಿಗೆ ಹಂಚಿಕೊಂಡು ಸಂಬಂಧ ಪಟ್ಟವರಿಗೆ ಮನವರಿಕೆ ಮಾಡಬೇಕು.

Varada-Bedti River Linking DPR Must Ensure No Environmental Harm Basavaraj Bommai

ಉತ್ತರ ಕನ್ನಡ ಭಾಗದ ಜನರ ಜೊತೆಗೆ ಅಲ್ಲಿಯ ಜನರ ಮನವೊಲಿಸಲು ಸಂಪೂರ್ಣ ಕೈ ಜೋಡಿಸುತ್ತೇವೆ. ಯಾರಿಗೂ ತೊಂದರೆ ಕೊಡುವ ಉದ್ದೇಶ ನಮಗಿಲ್ಲ. ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುತ್ತೇವೆ. ರಾಜ್ಯ ಸರ್ಕಾರ ಡಿಪಿಆರ್ ಎಂದ ತಕ್ಷಣ ಕೇಂದ್ರ ಸರ್ಕಾರಕ್ಕೆ ಕಳುಹಿಸಿ ಕೊಡಬೇಕು. ಸೌಹಾರ್ದಯುತವಾಗಿ ಹರಿಸಿ ಯೋಜನೆ ರೂಪಿಸುವ ಉದ್ದೇಶವಿದೆ ಎಂದು ತಿಳಿಸಿದರು.

ಒಂದು ಕಡೆ ಹೆಚ್ಚಿನ ನೀರಿದೆ. ಮತ್ತೊಂದು ನೀರಿನ ಕೊರತೆ ಇದೆ. ನೀರು ರಾಷ್ಟ್ರೀಯ ಸಂಪತ್ತು. ಇದರಿಂದ ಎಲ್ಲರಿಗೂ ಅನುಕೂಲವಾಗಬೇಕು ಇದನ್ನು ಪ್ರತಿಷ್ಠೆ ಹಾಗೂ ರಾಜಕೀಯವಾಗಿ ನೋಡಬಾರದು ಎಂದು ಕಿವಿ ಮಾತು ಹೇಳಿದರು.
ಶಿಗ್ಗಾವಿ ತಾಲೂಕಿನ ರಸ್ತೆಗಳ ಕುರಿತು ಹಾಲಿ ಶಾಸಕರು ಎತ್ತಿರುವ ಆಕ್ಷೇಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶಿಗ್ಗಾವಿ ತಾಲೂಕಿನ ಗ್ರಾಮೀಣ ರಸ್ತೆ, ತಾಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಬಗ್ಗೆ ಮಾಧ್ಯಮಗಳೇ ಸಮೀಕ್ಷೆ ಮಾಡಿ, ನಾವು ಹೆಚ್ಚು ಗುಣಮಟ್ಟದ ರಸ್ತೆಗಳನ್ನು ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡರು.

ಡಿಜೆ ಬಳಕೆಯಿಂದ ಸರ್ಕಾರಕ್ಕೇನು ತೊಂದರೆ?

ಗಣೇಶೋತ್ಸವದಲ್ಲಿ ಡಿಜೆ ಹಚ್ಚಲು ಅಡ್ಡಿಪಡಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಎಸ್ಪಿ ಜೊತೆ ಮಾತನಾಡಿದ ಡಿಜೆ ಹಚ್ಚದಂತೆ ಸರ್ಕಾರದ ಸ್ಪಷ್ಟ ಆದೇಶ ನೀಡಿದ್ದು, ಡಿಜೆಗೆ ಅವಕಾಶ ಇಲ್ಲ ಎಂದು ಎಸ್ಪಿ ಹೇಳಿದ್ದಾರೆ. ಎಲ್ಲ ಧರ್ಮದವರು ತಮ್ಮ ಧರ್ಮದ ಆಚರಣೆ ಮಾಡಲು ಸಂವಿಧಾನದಲ್ಲಿಯೇ ಅವಕಾಶವಿದೆ. ಡಿಜೆ ಹಚ್ಚುವುದರಿಂದ ಯಾರಿಗೆ ಏನು ಸಮಸ್ಯೆ ಇದೆ. ಕೋರ್ಟ್‌ನವರು ಡಿಜಿ ಡೆಸಿಬಲ್ ಕಡಿಮೆ ಮಾಡಬೇಕು ಎಂದು ಹೇಳುತ್ತಾರೆ. ಆ ರೀತಿ ನೋಡಿಕೊಂಡರೆ ಡಿಜೆ ಹಾಕಲು ಯಾವುದೇ ತೊಂದರೆ ಇಲ್ಲ. ಈ ಮಿಲಾದ್ ಶಾಂತಯುತವಾಗಿ ನಡೆಯುತ್ತಿದೆ. ಅದೇ ರೀತಿ ಗಣೇಶೋತ್ಸವ, ದೀಪಾವಳಿ ಶಾಂತರೀತಿಯಾಗಿ ನಡೆಯಲು ಸರ್ಕಾರಕ್ಕೆ ಅವಕಾಶ ಕೊಡಬೇಕು ಎಂದು ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+