Gruhalakshmi : ಮಹಿಳೆಯರಿಗೆ ವರಮಹಾಲಕ್ಷ್ಮೀ ಹಬ್ಬಕ್ಕೆ ಗಿಫ್ಟ್; ಗೃಹಲಕ್ಷ್ಮಿ ಹಣ ಬಿಡುಗಡೆ: ಎಷ್ಟು ತಿಂಗಳ ಹಣ ಖಾತೆಗೆ ಜಮಾ?
ಬೆಂಗಳೂರು, ಆಗಸ್ಟ್ 08: : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರಾಜ್ಯದ ರಾಜ್ಯದ ಮಹಿಳೆಯರಿಗೆ ವರಮಮಹಾಲಕ್ಮೀ ಹಬ್ಬದ ಸಂದರ್ಭದಲ್ಲಿ ಸಿಹಿಸುದ್ದಿ ಸಿಕ್ಕಿದ್ದು,ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ರಾಜ್ಯದ ಮಹಿಳೆಯರು ಎರಡು ತಿಂಗಳಿನಿಂದ ಕಾಯುತ್ತಿದ್ದಾರೆ. ಮೇ ತಿಂಗಳ ಗೃಹ ಲಕ್ಷ್ಮಿ ಯೋಜನೆಯ ಹಣ ಈಗಾಗಲೇ ಬಿಡುಗಡೆಯಾಗಿದ್ದು, ಜೂನ್ ಹಾಗೂ ಜುಲೈ ತಿಂಗಳ ಹಣಕ್ಕಾಗಿ ಮಹಿಳೆಯರು ಕಾದುಕುಳಿತಿದ್ದಾರೆ.

ಇದೀಗ ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಶುಭಸುದ್ದಿ ಸಿಕ್ಕಿದ್ದು, ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ ರಾಜ್ಯದ 1.24 ಕೋಟಿ ಮಹಿಳೆಯರು ಈ ಯೋಜನೆಯ ಫಲಾನುಭವಿಗಳಾಗಿದ್ದು, ಪ್ರತಿ ತಿಂಗಳು 2000 ರೂ ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಜಾರಿಯಾದ ದಿನದಿಂದಲೂ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೆ ಇದೆ. ಹಲವು ಸಮಸ್ಯೆಗಳ ನಡುವೆಯೂ ಮಹಿಳೆಯರಿಗೆ ಖಾತೆಗೆ ರಾಜ್ಯ ಸರ್ಕಾರ 2000 ಹಣ ಜಮಾ ಮಾಡುತ್ತಿದೆ.
ಗೃಹಲಕ್ಷ್ಮಿ ಯೋಜನೆಯ ಹಣವನ್ನ ಮಹಿಳೆಯರ ಖಾತೆಗೆ ಜಮಾ ಮಾಡಲು ಕೆಲವು ತಿಂಗಳಿನಿಂದ ವಿಳಂಬವಾಗಿತ್ತಿದೆ. ತಾಂತ್ರಿಕ ಸಮಸ್ಯೆ, ಖಾತೆ ಪರಿಶೀಲನೆ, ನಿರ್ವಹಣಾ ವಿಲಂಬ ಮತ್ತು ಅನುದಾನ ಕೊರತೆಯಿಂದಾಗಿ ಪ್ರತಿ ತಿಂಗಳು ಖಾತೆಗೆ ಹಣ ಹಾಕಲಾಗುತ್ತಿಲ್ಲ ಎಂದು ಹೇಳಲಾಗಿದೆ. ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ. ಸದ್ಯ 3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅಧ್ಯಕ್ಷ ಹೆಚ್.ಎಂ ರೇವಣ್ಣ ಹೇಳಿದ್ದಾರೆ.
ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ 1 ಲಕ್ಷ 20 ಸಾವಿರ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ ಸಮಸ್ಯೆಯನ್ನ ಬಗೆಹರಿಸಿದ್ದೇವೆ. ಉಳಿದ ಜನರ ಸಮಸ್ಯೆ ಬಗೆ ಹರಿಸುತ್ತೇವೆ ಎಂದಿದ್ದಾರೆ.ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ. ಹೀಗಾಗಿ ಕೊಡಲು ಆಗುತ್ತಿಲ್ಲ ಎನ್ನುವ ಮೂಲಕ ಪ್ರತಿ ತಿಂಗಳ ಗೃಹಲಕ್ಷ್ಮಿ ಹಣ ಕೊಡಲು ಆಗಲ್ಲ ಎಂದು ಹೇಳಿದ್ದರು. ಇದೀಗ ಗೃಹ ಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬಾಕಿ ಉಳಿದಿದ್ದು, ಕೆಲ ಜಿಲ್ಲೆಗಳಲ್ಲಿ ಇನ್ನೂ ಮೂರ್ನಾಲ್ಕು ತಿಂಗಳ ಹಣ ಬಂದಿಲ್ಲ ಎಂದು ಮಹಿಳೆಯರು ತಮ್ಮ ಸಮಸ್ಯೆಯನ್ನ ಹೇಳಿಕೊಂಡಿದ್ದಾರೆ.
ಇದೀಗ ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾಗಿರುವ ಗೃಹ ಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ನೇರವಾಗಿ ಹಣ ವರ್ಗಾವಣೆ ಆಗುತ್ತಿದ್ದು. ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಮಾಹಿತಿಗಾಗಿ ತಿಳಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ನಿವಾಸ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications