Gruha Lakshmi scheme: ವರಮಹಾಲಕ್ಷ್ಮಿ ಹಬ್ಬಕ್ಕೆ ಗೃಹಲಕ್ಷ್ಮಿ ಹಣ- ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು ಆಗಸ್ಟ್ 6: ರಾಜ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ತಯಾರಿಯಲ್ಲಿ ಗೃಹಿಣಿಯರು ನಿರತರಾಗಿದ್ದಾರೆ. ಹಬ್ಬ ಸಮೀಸುತ್ತಿದ್ದಂತೆ ಖರ್ಚು ವೆಚ್ಚಗಳು ಅಧಿಕವಾಗಿವೆ. ಹಾಗಂತ ಹಬ್ಬ ಆಚರಣೆ ಮಾಡದೇ ಇರಲು ಸಾಧ್ಯವಿಲ್ಲ. ಈ ವೇಳೆ ರಾಜ್ಯ ಸರ್ಕಾರ ಗೃಹಿಣಿಯರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ.

ಹೌದು... ಕಳೆದ ಎರಡು ತಿಂಗಳಿನಿಂದ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ ಆಗಿಲ್ಲ. ಹೀಗಾಗಿ ಮಹಿಳೆಯರು ಈ ಹಣಕ್ಕಾಗಿ ಎದುರು ನೋಡುತ್ತಿದ್ದಾರೆ. ಜೂನ್ ತಿಂಗಳ ಹಣ ಇಂದು ಅಥವಾ ನಾಳೆ ಖಾತೆ ಸೇರುವ ಸೂಚನೆ ಸಿಕ್ಕಿದೆ. ಇದರಿಂದಾಗಿ ಹಬ್ಬದ ತಯಾರಿಯಲ್ಲಿರುವ ಮಹಿಳೆಯರು ಸಂತೋಷಗೊಂಡಿದ್ದಾರೆ.

varamahalakshmi festival karnataka govt may release gruhalakshmi scheme june money

ಈಗಾಗಲೇ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು, ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಒಂದು ವೇಳೆ ಹಣ ಬಿಡುಗಡೆಯಾದರೆ ಹಬ್ಬದ ತಯಾರಿಯಲ್ಲಿರುವ ಮಹಿಳೆಯರಿಗೆ ವರಮಹಾಲಕ್ಷ್ಮಿ ಹಬ್ಬದ ಸಡಗರ ಮತ್ತಷ್ಟು ಸಂತೋಷ ಹೆಚ್ಚಿಸುವುದರಲ್ಲಿ ಅನುಮಾನವಿಲ್ಲ.

ಬೆಂಗಳೂರು, ಕೋಲಾರ, ಹಾವೇರಿ, ರಾಯಚೂರು, ಕೊಪ್ಪಳ, ಗದಗ, ವಿಜಯಪುರ, ಬೀದರ್, ಬೆಳಗಾವಿ, ಕಲಬುರ್ಗಿ, ಬಾಗಲಕೋಟೆ, ಚಿತ್ರದುರ್ಗ, ಯಾದಗಿರಿ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಮೊದಲ ಹಂತದಲ್ಲಿ 533 ಕೋಟಿ ರೂಪಾಯಿ ಪಾವತಿಯಾಗಲಿದೆ. ಹೀಗಾಗಿ ಈ ಬಾರಿ ವರಮಹಾಲಕ್ಷ್ಮಿ ಹಬ್ಬ ಮತ್ತಷ್ಟು ಮೆರಗು ಪಡೆದುಕೊಳ್ಳಲಿದೆ.

varamahalakshmi festival karnataka govt may release gruhalakshmi scheme june money

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವದ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಮಹಿಳೆಯರಿಗೆ ತಿಂಗಳಿಗೆ 2000 ರೂಪಾಯಿ ಹಣ ನೀಡುವ ಗೃಹಲಕ್ಷ್ಮೀ ಯೋಜನೆ ಇದಾಗಿದೆ. ಆದರೆ ಕಳೆದ ಎರಡ್ಮೂರು ತಿಂಗಳುಗಳಿಂದ ಸರ್ಕಾರ ಮಹಿಳೆಯರ ಖಾತೆಗೆ ಹಣ ಹಾಕದೇ ಇರೋದು ಮಹಿಳೆಯರಿಗೆ ಕೊಂಚ ಬೇಸರಗೊಳಿಸಿತ್ತು. ಇದೀಗ ಸಾಲು ಸಾಲು ಹಬ್ಬಗಳ ಮಧ್ಯೆ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಲು ಮುಂದಾಗಿದೆ.

ಆಗಸ್ಟ್‌ ತಿಂಗಳಿನಿಂದ ವರಮಹಾಲಕ್ಷ್ಮೀ, ನಾಗರ ಪಂಚಮಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಹೀಗೆ ಸಾಲು ಸಾಲು ಹಬ್ಬಗಳು ಬರುತ್ತವೆ. ಈ ವೇಳೆ ಒಂದಿಷ್ಟು ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಹಣದ ಅವಶ್ಯಕತೆ ಇರುತ್ತದೆ. ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಬಂದ ಬಳಿಕ ಅಗತ್ಯ ವಸ್ತುಗಳ ಖರೀದಿಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೆಚ್ಚಿಕೊಂಡಿದ್ದಾರೆ.

ಹೀಗಾಗಿ ಮುಂದಿನ ದಿನಗಳಲ್ಲಿ ಬರುವ ಸಾಲು ಸಾಲು ಹಬ್ಬಗಳಿಗೆ ಕೊಡುಗೆಯಾಗಿ ಸಿಎಂ ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದ್ದು, ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನು ನೀಡಲು ತಯಾರಿ ನಡೆಸಿದೆ. ಇದರಿಂದಾಗಿ ಈ ಹಬ್ಬದ ಸಂತಸ ಹೆಚ್ಚಾಗಲಿದೆ. ಒಟ್ಟಿನಲ್ಲಿ ಗೃಹಲಕ್ಷ್ಮಿ ಹಣ ಕೆಲ ದಿನಗಳಲ್ಲಿ ಮಹಿಳೆಯರ ಖಾತೆಗೆ ಜಮಾ ಆಗಲಿದ್ದು, ಸಿದ್ದರಾಮಯ್ಯ ಸರ್ಕಾರದ ಈ ಯೋಜನೆಯ ಬಗ್ಗೆ ಮಹಿಳಾ ಮಣಿಗಳು ಸಾಕಷ್ಟು ಸಂತೋಷಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+