ಸೆ.26ರ ಕರ್ನಾಟಕ ಬಂದ್‌ಗೆ ಹಲವು ಸಂಘಟನೆಗಳ ಬೆಂಬಲ

ಬೆಂಗಳೂರು, ಸೆ. 18 : ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಆಗ್ರಹಿಸಿ ಸೆ.26ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಹಲವು ಸಂಘಟನೆಗಳು ಬೆಂಬಲ ನೀಡಿವೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.

ಬೆಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, 'ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಒತ್ತಾಯಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಕನ್ನಡ ಪರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ'ಎಂದರು. [ಏನಿದು ಕಳಸಾ-ಬಂಡೂರಿ ಯೋಜನೆ?]

vatal nagaraj

'ಲಾರಿ ಮಾಲೀಕರು, ಸಾರಿಗೆ ಕಾರ್ಮಿಕರು, ಚಿತ್ರೋದ್ಯಮ ಸೇರಿದಂತೆ 800ಕ್ಕೂ ಹೆಚ್ಚು ಸಂಘಟನೆಗಳು ಬಂದ್‍ಗೆ ಬೆಂಬಲ ನೀಡಿವೆ. ಸೆ.26ರ ಶನಿವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಸಲಾಗುತ್ತದೆ' ಎಂದು ವಾಟಾಳ್ ನಾಗರಾಜ್ ತಿಳಿಸಿದರು. [ನೀರು ಹಂಚಿಕೆ ವಿವಾದಕ್ಕೆ ರಿಯಲ್ ಸ್ಟಾರ್ ರಿಂದ ಪರಿಹಾರ]

'ಕರ್ನಾಟಕ ಸರ್ಕಾರ ಕೂಡಲೇ ಮೂರು ದಿನಗಳ ವಿಶೇಷ ವಿಧಾನಸಭೆ ಅಧಿವೇಶನ ಕರೆದು ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಕುರಿತು ತನ್ನ ನಿಲುವನ್ನು ಪ್ರಕಟಿಸಬೇಕು. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ಶ್ವೇತ ಪತ್ರವನ್ನು ಹೊರಡಿಸಬೇಕು' ಎಂದು ಒತ್ತಾಯಿಸಿದರು. [ಸೆ.26ರಂದು ಕರ್ನಾಟಕ ಸಂಪೂರ್ಣ ಬಂದ್]

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ರಾಜ್‍ಕುಮಾರ್ ಅಭಿಮಾನಿ ಸಂಘಗಳ ಅಧ್ಯಕ್ಷ ಸಾ.ರಾ. ಗೋವಿಂದು ಅವರು, 'ಕಾವೇರಿ ವಿವಾದಕ್ಕೆ ಕರ್ನಾಟಕ ಬಂದ್ ಮಾಡಿದಂತೆ ನಮ್ಮ ಅಭಿವೃದ್ಧಿಗೆ ಕನ್ನಡ ಸಂಘಗಳು ಬೆಂಬಲ ನೀಡುತ್ತಿಲ್ಲ ಎನ್ನುವ ಬೇಸರ ಉತ್ತರ ಕರ್ನಾಟಕ ಜನತೆಗಿದೆ. ಆದರೆ, ನಮಗೆ ಅಖಂಡ ರಾಜ್ಯ ಒಂದೇ. ಅದಕ್ಕಾಗಿ ಈ ಬಂದ್ ಕರೆ ನೀಡಲಾಗಿದೆ' ಎಂದರು.

'ರಾಷ್ಟ್ರೀಯ ಜಲನೀತಿ ಪ್ರಕಾರ ಕುಡಿಯುವ ನೀರಿನ ಯೋಜನೆಗೆ ಅಡ್ಡಿಪಡಿಸಬಾರದು. ಆದರೆ, ಮಹದಾಯಿ ಯೋಜನೆಗೆ ಅಡ್ಡಿಪಡಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯಸ್ಥಿಕೆ ವಹಿಸಿ, ರಾಜ್ಯ ಸರ್ಕಾರಗಳ ಜೊತೆ ಮಾತುಕತೆಗೆ ಮುಂದಾಗಬೇಕು' ಎಂದು ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+