ಅಧಿಕಾರದ ಆಸೆ ಬಹಿರಂಗಪಡಿಸಿದ ಸಿಎಂ ಪುತ್ರ; ನನಗೂ ಸ್ಥಾನಮಾನ ಬೇಕು: ಯತೀಂದ್ರ ಸಿದ್ದರಾಮಯ್ಯ!

ಮೈಸೂರು, ಜುಲೈ 05: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಂದೆಗಾಗಿ ವರುಣಾ ಕ್ಷೇತ್ರವನ್ನ ತ್ಯಾಗ ಮಾಡಿದ್ದ ಮಾಜಿ ಶಾಸಕ ಯತೀಂದ್ರ ಸರ್ಕಾರ ರಚನೆಯ ಬಳಿಕ ನನಗೂ ಸ್ಥಾನ ಬೇಕು ಎಂದು ತಮ್ಮ ಅಧಿಕಾರದ ಆಸೆಯನ್ನ ಬಹಿರಂಗಪಡಿಸಿದ್ದಾರೆ.

ಈ ಕುರಿತು ಮಾಜಿ ಶಾಸಕ ಯತೀಂದ್ರ ಮಾತನಾಡಿ, ತಂದೆಯವರು ಸಿಎಂ ಆಗಿರುವ ಕಾರಣ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ಅವರನ್ನ ನೋಡಲು ಬರುವ ರಾಜ್ಯದ ಜನರನನ್ನೆಲ್ಲ ಭೇಟಿಯಾಗಬೇಕು. ಆದ್ದರಿಂದ ವರುಣ ಕ್ಷೇತ್ರದ ಮತದಾರರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ಜನರ ಸಮಸ್ಯೆಯನ್ನ ಅಧಿಕಾರಿಗಳೊಂದಿಗೆ ಚರ್ಚಿಸಬೇಕು. ಅಧಿಕಾರಿಗಳಿಗೆ ಹೇಳಿ ಜನರ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಲು ಸರ್ಕಾರಿ ಸ್ಥಾನಮಾನ ಇರಬೇಕು. ನನಗೆ ಯಾವುದಾದರು ಚಿಕ್ಕದಾದ ಸ್ಥಾನಮಾನ ನೀಡಿದ್ರು ಸಹಕಾರಿ ಆಗುತ್ತೆ ಎಂದು ಯತೀಂದ್ರ ಹೇಳಿದ್ದಾರೆ.

Varuna Constituency Congress Former MLA Yathindra Siddaramaiah Eye On Government Post

ಇನ್ನೂ ಕಳೆದ ಬಾರಿಯಂತೆ ಸಣ್ಣ ಹುದ್ದೆ ನೀಡಿದರು ನಾನು ಉತ್ತಮವಾಗಿ ನಿಭಾಯಿಸುತ್ತೇನೆ. ಕಳೆದ ಬಾರಿ ಆಶ್ರಯ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿದ್ದರು. ಅದು ದೊಡ್ಡ ಹುದ್ದೆಯಲ್ಲ, ಆದರೂ ಅಂತದ್ದೆ ಸಣ್ಣ ಹುದ್ದೆ ನೀಡಿದ್ರು ಜನರ ಸೇವೆ ಮಾಡಲು ನಾನು ಸಿದ್ದನಿದ್ದೇನೆ ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತಿಂದ್ರ ಸಿದ್ದರಾಮಯ್ಯ ಅಧಿಕಾರದ ಆಸೆಯನ್ನ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+