ವರುಣಾದಲ್ಲಿ ಈ ನಾಯಕನಿಗೆ ಟಿಕೆಟ್ ಕನ್ಫರ್ಮ್! : ಸುಳಿವು ನೀಡಿದ ಡಿ ಕೆ ಶಿವಕುಮಾರ್.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಈ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗಲಿದೆ.

ಮೈಸೂರು,ಫೆಬ್ರವರಿ21: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರವನ್ನ ನಡೆಸುತ್ತಿವೆ. ಈಗಾಗಲೇ ಜೆಡಿಎಸ್ ಮೊದಲ ಪಟ್ಟಿಯನ್ನ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಪಟ್ಟಿ ಈ ತಿಂಗಳ ಕೊನೆಯಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಇನ್ನೂ ಈಗಾಗಲೇ ಕಾಂಗ್ರೆಸ್ ನಾಯಕರು ಈ ತಿಂಗಳ ಕೊನೆಯಲ್ಲಿ ಪಟ್ಟಿ ಬಿಡುಗಡೆಯ ಬಗ್ಗೆ ಸುಳಿವು ನೀಡಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಈಗಾಗಲೇ ಬಾದಾಮಿ ಬಿಟ್ಟು ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ. ಆದರೂ ಸಹ ಕೊನೆ ಕ್ಷಣದಲ್ಲಿ ವರುಣಾದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

ಈ ಕುರಿತು ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವರುಣಾದಲ್ಲಿ ಯತೀಂದ್ರ ಸಿದ್ದರಾಮಯ್ಯ ಗೆ ಟಿಕೆಟ್ ನೀಡುವ ಬಗ್ಗೆ ಸುಳಿವು ನೀಡಿದ್ದಾರೆ. ವರುಣಾ ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಒಬ್ಬರೇ ಅರ್ಜಿ ಹಾಕಿದ್ದಾರೆ. ಅವರನ್ನು 50 ಸಾವಿರ ಮತಗಳಿಂದ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದರು. ಆ ಮೂಲಕ ವರುಣಾ ಕ್ಷೇತ್ರದಲ್ಲಿ ಯತೀಂದ್ರ ಅವರಿಗೆ ಟಿಕೆಟ್‌ ಎಂಬುದನ್ನು ತಿಳಿದು ಬಂದಿದೆ.

Varuna Constituency Congress Ticket To Yathindra Siddaramaiah Said DK Shivakumar

ಯತೀಂದ್ರ, ಧ್ರುವನಾರಾಯಣ ಅವರ ಕೈ ಬಲಪಡಿಸಲು ನಾವೆಲ್ಲರೂ ಇಲ್ಲಿಗೆ ಬಂದಿದ್ದೇವೆ. ಈ ಕ್ಷೇತ್ರಕ್ಕೆ ಯತೀಂದ್ರ ಒಬ್ಬರೇ ಅರ್ಜಿ ಹಾಕಿದ್ದಾರೆ. ಆದರೂ ನಮ್ಮ ತಂದೆ ಬಂದು ಸ್ಪರ್ಧೆ ಮಾಡಲಿ ಎಂದರು. ಬಹಳ ಸಂತೋಷದಿಂದ ವರುಣಾ ಕ್ಷೇತ್ರಕ್ಕೆ ಬಂದಿದ್ದೇನೆ. ಈ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ದಿಯ ಕೆಲಸಗಳನ್ನ ಯತೀಂದ್ರ ಸಿದ್ದರಾಮಯ್ಯ ಮಾಡಿದ್ದಾರೆ ಅವನ್ನ ಗೆಲ್ಲಿಸಿಕೊಂಡು ಬರಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.

ಬಿಜೆಪಿ ಸರ್ಕಾರ ಎಂದಾದರೂ ಜನರ ಬದುಕಿನಲ್ಲಿ ಬದಲಾವಣೆ ತರುವ ಕಾರ್ಯಕ್ರಮ ನೀಡಿದೆಯಾ? ಬಿಜೆಪಿ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಹೇಳಿತ್ತು. 1 ಲಕ್ಷದ ವರೆಗಿನ ಸಾಲವ ಮನ್ನಾ ಮಾಡುತ್ತೇವೆ ಎಂದರು. ಸ್ವಿಸ್ ಬ್ಯಾಂಕ್ ನಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದರು. ಅಚ್ಛೇದಿನ ಕೊಡುತ್ತೇವೆ ಎಂದರು.

Varuna Constituency Congress Ticket To Yathindra Siddaramaiah Said DK Shivakumar

ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದರು. ಯಾರಿಗಾದರೂ ಈ ಭರವಸೆ ಈಡೇರಿದೆಯೇ? ನಮ್ಮ ಕಾಂಗ್ರೆಸ್ ಸರ್ಕಾರ ಉಳುವವನಿಗೆ ಭೂಮಿ, ಆಹಾರ ಭದ್ರತೆ, ಬಿಸಿಯೂಟ, ಸ್ತ್ರೀ ಶಕ್ತಿ, ನಿವೇಶನ, ಪಿಂಚಣಿ, ಉದ್ಯೋಗ ಖಾತ್ರಿ, ಶಿಕ್ಷಣ ಹಕ್ಕು ನೀಡಿದೆ. ಬಂಗಾರಪ್ಪ ಅವರ ಕಾಲದಲ್ಲಿ ರೈತರಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಆಮೂಲಕ ಅನ್ನದಾತನ ರಕ್ಷಣೆ ಮಾಡುತ್ತಾ ಬಂದಿರುವುದು ಕಾಂಗ್ರೆಸ್ ಸರ್ಕಾರ.ಬಿಜೆಪಿ ಅವಧಿಯಲ್ಲಿ ರಸಗೊಬ್ಬರ, ಪಶು ಮೇವುಗಳ ಬೆಲೆ ಹೆಚ್ಚಾಗುತ್ತಿವೆ ಎದು ಹೇಳಿರು..

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+