ಹಾವೇರಿಯಲ್ಲಿ ವಾಟಾಳ್ ನಾಗರಾಜ್ ಬಂಧನ

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಡಾ.ರಾಜ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆಯ ಅಧ್ಯಕ್ಷ ಕುಮಾರ್ ಮುಂತಾದ ಕನ್ನಡ ಪರ ಸಂಘಟನೆಗಳು ಬೆಂಗಳೂರಿನಿಂದ ಬೆಳಗಾವಿಯ ತನಕ ಸಂಭಾಜಿ ಪಾಟೀಲ್ ಅಣಕು ಶವಯಾತ್ರ ನಡೆಸುತ್ತಿದ್ದವು. ಬುಧವಾರ ಬೆಳಗ್ಗೆ ಬೆಂಗಳೂರಿನಲ್ಲಿ ಯಾತ್ರೆಗೆ ಚಾಲನೆ ದೊರಕಿತ್ತು. (ಕರ್ನಾಟಕದ ಶವಯಾತ್ರೆ ಮಾಡುತ್ತೇನೆಂದ ಭಂಡ ಸಂಭಾಜಿ)
ಆದರೆ, ಹಾವೇರಿ ಜಿಲ್ಲೆಯ ಬಂಕಾಪುರದ ಟೋಲ್ ಗೇಟ್ ಬಳಿ ಸಂಜೆ 4 ಗಂಟೆ ಸುಮಾರಿಗೆ ಶವಯಾತ್ರೆ ಆಗಮಿಸುತ್ತಿದ್ದಂತೆ ಪೊಲೀಸರು ಅಣಕು ಶವಯಾತ್ರೆ ನೇತೃತ್ವ ವಹಿಸಿದ್ದ ವಾಟಾಳ್ ನಾಗರಾಜ್ ಮತ್ತು ಇತರ ಕನ್ನಡ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ವಾಟಾಳ್ ಮತ್ತು ಇತರರು ಬೆಳಗಾವಿವರೆಗೆ ಶವಯಾತ್ರೆ ಮಾಡಲು ಉದ್ದೇಶಿಸಿದ್ದರು. (ಬುಧವಾರದಿಂದ ಸಂಭಾಜಿ ಪಾಟೀಲ್ ಶವಯಾತ್ರೆ)
ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಯಾವ ಶಾಸಕರೂ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ಹೇಳಿಕೆಯನ್ನು ಖಂಡಿಸಿಲ್ಲ. ಸರ್ಕಾರ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಸರ್ಕಾರದ ಶವಯಾತ್ರೆ ಮಾಡುವುದಾಗಿ ಹೇಳಿದ ಪಾಟೀಲ್ ಶವಯಾತ್ರೆಯನ್ನು ನಾವೇ ಮಾಡುತ್ತಿದ್ದೇವೆ ಎಂದು ವಾಟಾಳ್ ನಾಗರಾಜ್ ಅಣಕು ಶವಯಾತ್ರ ಆರಂಭಿಸಿದ್ದರು.












Click it and Unblock the Notifications