ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾವೇರಿ ವಿವಾದ : ಏಪ್ರಿಲ್ 12ರಂದು ಕರ್ನಾಟಕ ಬಂದ್

|
Google Oneindia Kannada News

Recommended Video

Cauvery Board Issue : ಏಪ್ರಿಲ್ 12ರಂದು ಕರ್ನಾಟಕ ಬಂದ್ ಗೆ ಕರೆ ಕೊಟ್ಟ ವಾಟಾಳ್ ನಾಗರಾಜ್ | Oneindia Kannada

ಬೆಂಗಳೂರು, ಏಪ್ರಿಲ್ 05 : ಕಾವೇರಿ ನಿರ್ವಹಣಾ ಮಂಡಳಿಯನ್ನು ರಚನೆ ಮಾಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಏಪ್ರಿಲ್ 12ರ (ಗುರುವಾರ) ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.

ಕಾವೇರಿ ನಿರ್ವಹಣಾ ಮಂಡಳಿ ರಚನೆ ಬೇಡ ಎಂದು ಹೊಸೂರು ರಸ್ತೆಯ ಅತ್ತಿಬೆಲೆ ಬಳಿ ಗುರುವಾರ ವಾಟಾಳ್ ನಾಗರಾಜ್ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕಾವೇರಿ ನಿರ್ವಹಣಾ ಮಂಡಳಿ ರಚನೆ, ಕೇಂದ್ರದ ಅಂಗಳದಲ್ಲಿ ಚೆಂಡು, ಮುಂದೇನು?ಕಾವೇರಿ ನಿರ್ವಹಣಾ ಮಂಡಳಿ ರಚನೆ, ಕೇಂದ್ರದ ಅಂಗಳದಲ್ಲಿ ಚೆಂಡು, ಮುಂದೇನು?

ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, 'ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ' ಎಂದರು.

ಕಾವೇರಿ ನದಿ ಪಾಲು : ಕರ್ನಾಟಕಕ್ಕೆ ಸಿಕ್ಕ ಪಾಲು ಇನ್ನು ಹೆಚ್ಚಳ!ಕಾವೇರಿ ನದಿ ಪಾಲು : ಕರ್ನಾಟಕಕ್ಕೆ ಸಿಕ್ಕ ಪಾಲು ಇನ್ನು ಹೆಚ್ಚಳ!

Vatal Nagaraj calls for Karnataka bandh on April 12

'ಇನ್ನು ಮುಂದೆ ಕರ್ನಾಟಕದಲ್ಲಿ ರಜನಿಕಾಂತ್ ಮತ್ತು ಕಮಲ್ ಹಾಸನ್ ಚಿತ್ರಗಳನ್ನು ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ. ಕಾವೇರಿ ನಿರ್ವಹಣಾ ಮಂಡಳಿ ಪರವಾಗಿ ನಿಂತಿರುವ ಇಬ್ಬರು ನಟರ ಚಿತ್ರಗಳು ಇಲ್ಲಿ ಬಿಡುಗಡೆ ಯಾಗುವುದು ಬೇಡ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕಕ್ಕೆ ಮಾರಕವಾಗಲಿರುವ ಕಾವೇರಿ ನಿರ್ವಹಣಾ ಮಂಡಳಿ ರಚನೆಕರ್ನಾಟಕಕ್ಕೆ ಮಾರಕವಾಗಲಿರುವ ಕಾವೇರಿ ನಿರ್ವಹಣಾ ಮಂಡಳಿ ರಚನೆ

'ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಕೇಂದ್ರ ಸರ್ಕಾರ ಮುಂದಾಗಬಾರದು. ಮಂಡಳಿ ರಚನೆ ಮಾಡಲು ಮುಂದಾದರೆ ಕನ್ನಡಿಗರಿಂದ ತೀವ್ರ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ' ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.

ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗೂತ್ತ ಅತ್ತಿಬೆಲೆ ಬಳಿ ರಸ್ತೆ ನಡೆಸುತ್ತಿದ್ದ ವಾಟಾಳ್ ನಾಗರಾಜ್ ಮತ್ತು ಇತರ ಕನ್ನಡ ಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಫೆ.16ರಂದು ಕಾವೇರಿ ವಿವಾದದ ಅಂತಿಮ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಆದರೆ, ಕರ್ನಾಟಕ ರಾಜ್ಯ ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ವಿರೋಧ ವ್ಯಕ್ತಪಡಿಸುತ್ತಿದೆ.

2016ರ ಸೆಪ್ಟೆಂಬರ್‌ನಲ್ಲಿ ಕಾವೇರಿ ವಿವಾದದ ಕುರಿತು ಕರ್ನಾಟಕ ವಿರುದ್ಧವಾಗಿ ತೀರ್ಪು ಬಂದಿತ್ತು. ಆಗ ಬೆಂಗಳೂರು ನಗರದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ನಗರದ 16 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

English summary
Kannada Chalavali Vatal Paksha president Vatal Nagaraj called for Karnataka Bandh on April 12, 2018 to oppose to the formation of Cauvery Management Board.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X