ಜು.26ರಂದು ಕರ್ನಾಟಕ ಬಂದ್ ಗೆ ವಾಟಾಳ್ ಕರೆ
ಬೆಂಗಳೂರು, ಜು. 21 : ಕರ್ನಾಟಕದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ಜು.26ರ ಶನಿವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಈ ಬಂದ್ ಗೆ ಕರೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಜು.26ರ ಶನಿವಾರದಂದು ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಕರೆ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದ ಎಲ್ಲಾ ಕನ್ನಡ ಪರ ಸಂಘಟನೆಗಳು ಕನ್ನಡ ಚಳವಳಿ ವಾಟಾಳ್ ಪಕ್ಷದ ಕರೆಗೆ ಸ್ಪಂದಿಸಿ ಬಂದ್ ಗೆ ಬೆಂಬಲ ನೀಡಲಿವೆ ಎಂಬ ವಿಶ್ವಾಸವಿದೆ ಎಂದು ಹೇಳಿದ ವಾಟಾಳ್ ನಾಗರಾಜ್, ಅತ್ಯಾಚಾರದಂತಹ ಹೇಯ ಕತ್ಯವನ್ನು ಖಂಡಿಸಿ ಬಂದ್ ಗೆ ಕರೆ ನೀಡಿರುವುದರಿಂದ ವಿವಿಧ ರಾಜಕೀಯ ಪಕ್ಷಗಳು ಬೆಂಬಲ ನೀಡಬಹುದು ಎಂಬ ವಿಶ್ವಾಸವಿದೆ ಎಂದು ಹೇಳಿದರು. [ಶಾಲೆಯಲ್ಲಿ ಅತ್ಯಾಚಾರ ಪ್ರಕರಣ, ಆರೋಪಿ ಬಂಧನ]











Click it and Unblock the Notifications