ಏಪ್ರಿಲ್ 12ರಂದು ಕರ್ನಾಟಕ ಬಂದ್ ಇಲ್ಲ

Posted By: Gururaj
Subscribe to Oneindia Kannada

ಬೆಂಗಳೂರು, ಏಪ್ರಿಲ್ 09 : ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಕರೆ ನೀಡಿದ್ದ ಏ.12ರ ಕರ್ನಾಟಕ ಬಂದ್ ವಾಪಸ್ ಪಡೆಯಲಾಗಿದೆ. ಕನ್ನಡ ಪರ ಸಂಘಟನೆಗಳ ಒಕ್ಕೂಟ ಬಂದ್ ಕರೆ ನೀಡಿತ್ತು.

ಕಾವೇರಿ ವಿವಾದ : ಏಪ್ರಿಲ್ 12ರಂದು ಕರ್ನಾಟಕ ಬಂದ್

ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, 'ಏಪ್ರಿಲ್ 12ರಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಾಪಸ್ ಪಡೆಯಲಾಗಿದೆ' ಎಂದು ಹೇಳಿದರು.

ಕಾವೇರಿ ನಿರ್ವಹಣಾ ಮಂಡಳಿ ರಚನೆ : ಸರ್ಕಾರಕ್ಕೆ ಮೇ 3ರ ಗಡುವು

Vatal Nagaraj withdraws strike called on April 12

'ಏಪ್ರಿಲ್ 12ರ ಗುರುವಾರ ಕನ್ನಡ ಪರ ಸಂಘಟನೆಗಳು ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿರೋಧಿಸಿ ಪ್ರತಿಭಟನೆ ನಡೆಸಲಿವೆ. ಅಂದು ರಾಜಭವನಕ್ಕೆ ಮುತ್ತಿಗೆ ಹಾಕಲಾಗುವುದು' ಎಂದು ತಿಳಿಸಿದರು.

ಕರ್ನಾಟಕ ಬಂದ್‌ಗೆ ಕರೆ ನೀಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಪದೇ-ಪದೇ ಬಂದ್‌ಗೆ ಕರೆ ನೀಡಬಾರದು ಎಂದು ಜನರು ಒತ್ತಾಯಿಸಿದ್ದರು. ಬಂದ್‌ಗೆ ಕರೆ ನೀಡಿದ್ದ ವಾಟಾಳ್ ನಾಗರಾಜ್ ವಿರುದ್ಧ ದೂರು ದಾಖಲಾಗಿತ್ತು.

ಫೆ.16ರಂದು ಕಾವೇರಿ ವಿವಾದದ ಕುರಿತು ಸುಪ್ರೀಂಕೋರ್ಟ್ ಅಂತಿಮ ತೀರ್ಪು ನೀಡಿತ್ತು. ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಕರ್ನಾಟಕ ರಾಜ್ಯ ನಿರ್ವಹಣಾ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Kannada Chalavali Vatal Paksha president Vatal Nagaraj withdraws strike called on April 12, 2018. Bandh called to oppose to the formation of Cauvery Management Board.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ