ಕೇಂದ್ರ ಸರ್ಕಾರ ಬಯಸಿದಾಗ ಮಾತ್ರ ಕೆಲಸ ನೀಡುವ ‘ವಿಬಿ ಗ್ರಾಮ್ ಜಿ’ ಯೋಜನೆ: ಸಚಿವ ಎಂ.ಬಿ ಪಾಟೀಲ್
ಬೆಂಗಳೂರು: ದೇಶದ ಲಕ್ಷಾಂತರ ಬಡ ಕುಟುಂಬಗಳಿಗೆ ವರ್ಷವಿಡೀ ಉದ್ಯೋಗ ಒದಗಿಸುತ್ತಾ, ಅವರ ಜೀವನ ನಿರ್ವಹಣೆಗೆ ಆಧಾರವಾಗಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗಷ್ಟೇ ಉದ್ಯೋಗ ನೀಡುವ 'ವಿಬಿ ಗ್ರಾಮ್ ಜಿ' ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಇದು ಮಹಾತ್ಮ ಗಾಂಧಿಯವರ ಚಿಂತನೆ ಮತ್ತು ಅವರ ಗ್ರಾಮ ಸ್ವರಾಜ್ಯದ ಆಶಯದ ಮೇಲಿನ ಗದಾಪ್ರಹಾರ. ಕೇಂದ್ರ ಸರ್ಕಾರವು ಈ ಜನವಿರೋಧಿ ಕಾಯ್ದೆಯನ್ನು ಹಿಂಪಡೆದು, ಮನರೇಗಾ ಮರು ಜಾರಿ ಮಾಡುವ ವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ. ಕೆಪಿಸಿಸಿ ವತಿಯಿಂದ ಫ್ರೀಡಂ ಪಾರ್ಕ್‌ನಲ್ಲಿ ಆಯೋಜಿಸಿದ್ದ "ನರೇಗಾ ಉಳಿಸಿ ಆಂದೋಲನ ಮತ್ತು ಲೋಕಭವನ ಚಲೋ" ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ, ಜನರ ಕೂಗಿಗೆ ದನಿಗೂಡಿಸಿದೆ ಎಂದು ಅವರು ಹೇಳಿದ್ದಾರೆ.

ರಾಜಭವನ ಚಲೋ - ಮಹಾತ್ಮ ಗಾಂಧಿ ನರೇಗಾ ಬಚಾವ್ ಸಂಗ್ರಾಮ
ದೇಶದ ಲಕ್ಷಾಂತರ ಬಡ ಕುಟುಂಬಗಳಿಗೆ ನಿರಂತರ ಉದ್ಯೋಗದ ಭರವಸೆ ನೀಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA)ಯನ್ನು ರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗ ಮಾತ್ರ ಕೆಲಸ ನೀಡುವ 'ವಿಬಿ ಗ್ರಾಮ್ ಜಿ' ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಮಹಾತ್ಮ ಗಾಂಧಿಯ ಚಿಂತನೆಗೂ, ಗ್ರಾಮ ಸ್ವರಾಜ್ಯದ ಆಶಯಕ್ಕೂ ಮಾಡಿದ ಗದಾಪ್ರಹಾರವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
ಮನರೇಗಾ ಯೋಜನೆಯನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ದಮನಕಾರಿ ನೀತಿಗಳ ವಿರುದ್ಧ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಕೇಂದ್ರದ ಧೋರಣೆಯನ್ನು ತೀವ್ರವಾಗಿ ಖಂಡಿಸಲಾಯಿತು. ರಾಜ್ಯ ಸಚಿವ ಸಂಪುಟದ ಸದಸ್ಯರು, ಕಾಂಗ್ರೆಸ್ ಪಕ್ಷದ ನಾಯಕರು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು-ಪದಾಧಿಕಾರಿಗಳು, ಕಾರ್ಯಕರ್ತರು, ಸಹಸ್ರಾರು ರೈತರು, ಯುವಕರು ಹಾಗೂ ಮಹಿಳೆಯರು ಈ ರ್ಯಾಲಿಯಲ್ಲಿ ಪಾಲ್ಗೊಂಡು ತಮ್ಮ ವಿರೋಧವನ್ನು ದೃಢವಾಗಿ ವ್ಯಕ್ತಪಡಿಸಿದರು.
ಈ ಬೃಹತ್ ಪ್ರತಿಭಟನೆಯ ಮೂಲಕ ಗ್ರಾಮೀಣ ಕೂಲಿಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವುದು, ಮನರೇಗಾ ಯೋಜನೆಯ ಮೂಲ ಉದ್ದೇಶ ಮತ್ತು ಸಂವಿಧಾನಾತ್ಮಕ ಆತ್ಮವನ್ನು ಕಾಪಾಡುವುದು ನಮ್ಮ ಅಚಲ ಸಂಕಲ್ಪ ಎಂಬ ಸಂದೇಶವನ್ನು ಸ್ಪಷ್ಟವಾಗಿ ಸಾರಲಾಯಿತು ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ. ಸಿ. ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.












Click it and Unblock the Notifications