ಶಿವಮೊಗ್ಗ, ಹಾಸನ ಪಶುವೈದ್ಯಕೀಯ ಕಾಲೇಜಿಗೆ ಮಾನ್ಯತೆ

ಬೆಂಗಳೂರು, ಅ.27 : ಶಿವಮೊಗ್ಗ ಮತ್ತು ಹಾಸನದ ಸರ್ಕಾರಿ ಪಶುವೈದ್ಯಕೀಯ ಕಾಲೇಜುಗಳಿಗೆ ಭಾರತೀಯ ಪಶುವೈದ್ಯಕೀಯ ಪರಿಷತ್ತು ಮಾನ್ಯತೆ ನೀಡಿದೆ. ಇದುವರೆಗೂ ಈ ಕಾಲೇಜುಗಳಿಗೆ ಮಾನ್ಯತೆ ದೊರೆಯದ ಕಾರಣ ಇಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದರು.

ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪಶುಸಂಗೋಪನಾ ಸಚಿವ ಟಿ.ಬಿ. ಜಯಚಂದ್ರ ಅವರು ಈ ಕುರಿತು ಮಾಹಿತಿ ನೀಡಿದರು. ಭಾರತೀಯ ಪಶು ವೈದ್ಯಕೀಯ ಪರಿಷತ್ತಿನ ಅಧ್ಯಕ್ಷ ಡಾ.ಉಮೇಶ್ ಚಂದ್ರ ಶರ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಲೇಜುಗಳಿಗೆ ಮಾನ್ಯತೆ ನೀಡಲು ತೀರ್ಮಾನಿಸಲಾಗಿದೆ ಎಂದರು.

T.B. Jayachandra

ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿಗೆ 24-8-2011 ರಿಂದ ಅನ್ವಯವಾಗುವಂತೆ ಹಾಗೂ ಹಾಸನ ಪಶುವೈದ್ಯಕೀಯ ಕಾಲೇಜಿಗೆ 24-8-2012 ರಿಂದ ಅನ್ವಯವಾಗುವಂತೆ ಮಾನ್ಯತೆ ನೀಡಲಾಗಿದೆ ಎಂದು ಜಯಚಂದ್ರ ಅವರು ಮಾಹಿತಿ ನೀಡಿದರು. [2 ಪಶುವೈದ್ಯಕೀಯ ಕಾಲೇಜು ಮುಚ್ಚಲು ಸೂಚನೆ]

ಸರ್ಕಾರ ಶಿವಮೊಗ್ಗದ ಕಾಲೇಜಿಗೆ ಮೂಲಸೌಕರ್ಯ ಅಭಿವೃದ್ಧಿಗಾಗಿ 137 ಕೋಟಿ ರೂ. ಹಾಗೂ ಹಾಸನದ ಕಾಲೇಜಿಗೆ 131 ಕೋಟಿ ರೂ. ಬಿಡುಗಡೆ ಮಾಡಿತ್ತು. ಸರ್ಕಾರದ ಪ್ರಯತ್ನದ ಫಲವಾಗಿ ಈ ಕಾಲೇಜುಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳ ಆತಂಕ ನಿವಾರಣೆಯಾಗಿದೆ ಎಂದು ಹೇಳಿದರು.

ಧರಣಿ ನಡೆಸಿದ್ದರು : ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾರತೀಯ ಪಶು ವೈದ್ಯಕೀಯ ಪರಿಷತ್ ಮಾನ್ಯತೆ (ವಿಸಿಐ)ಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ರಾಜ್ಯ ಸರ್ಕಾರ ಶಿವಮೊಗ್ಗ ಮತ್ತು ಹಾಸನ ಪಶು ವೈದ್ಯಕೀಯ ಕಾಲೇಜಿಗೆ 2013-14ನೇ ಸಾಲಿನ ಪ್ರಥಮ ವರ್ಷದ ಪಶು ವೈದ್ಯಕೀಯ ಪದವಿಗೆ ಷರತ್ತುಬದ್ಧ ಅನುಮತಿಯನ್ನು ಕಷ್ಟಪಟ್ಟು ಪಡೆದುಕೊಂಡಿತ್ತು.

ವಿದ್ಯಾರ್ಥಿಗಳಿಗೆ ಸಂಕಷ್ಟ : ಮೂಲ ಸೌಲಭ್ಯದ ಕೊರತೆ ಕಾರಣದಿಂದ ಶಿವಮೊಗ್ಗ, ಹಾಸನ ಪಶು ವೈದ್ಯಕೀಯ ಕಾಲೇಜುಗಳಿಗೆ ವಿಸಿಐ ಮಾನ್ಯತೆ ನೀಡಲು ನಿರಾಕರಿಸಿತ್ತು. ಕಾಲೇಜಿಗೆ ಮಾನ್ಯತೆ ಇಲ್ಲದಿದ್ದಲ್ಲಿ ಅಂತಹ ಕಾಲೇಜುಗಳಲ್ಲಿ ಐದು ವರ್ಷದ ಪದವಿ ಮುಗಿಸಿದರೂ ವಿದ್ಯಾರ್ಥಿಗಳಿಗೆ ಉದ್ಯೋಗ ದೊರೆಯುವುದು ಕಷ್ಟವಾಗಿತ್ತು. ಇದರಿಂದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದರು.

2006 ಮತ್ತು 2007ನೇ ಸಾಲಿನಲ್ಲಿ ಕ್ರಮವಾಗಿ ಹಾಸನ ಹಾಗೂ ಶಿವಮೊಗ್ಗ ಪಶುವೈದ್ಯಕೀಯ ಕಾಲೇಜುಗಳು ಸ್ಥಾಪನೆಯಾಗಿದ್ದವು. ಬೋಧನಾ ಸಿಬ್ಬಂದಿ ಹಾಗೂ ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿದ್ದ ಕಾಲೇಜುಗಳನ್ನು ಮುಚ್ಚುವಂತೆ ಭಾರತೀಯ ಪಶುವೈದ್ಯಕೀಯ ಸಮಿತಿ (ವಿಸಿಐ) 2008ರಲ್ಲಿ ಸೂಚಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+