ನರೇಂದ್ರ ಮೋದಿ 11 ದಿನ ಉಪವಾಸ ಮಾಡಿದ್ದೇ ಅನುಮಾನ: ಮಾಜಿ ಸಿಎಂ
ಚಿಕ್ಕಬಳ್ಳಾಪುರ, ಜನವರಿ 23: ಮೋದಿ ಉಪವಾಸ ಮಾಡಿಲ್ಲ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ರೆ ಒಂದೆರೆಡು ದಿನದಲ್ಲಿ ಮನುಷ್ಯ ಬೀಳುತ್ತಾನೆ. 11 ದಿನಗಳ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಉಪವಾಸ ವ್ರತದ ಮೇಲೆ ಅನುಮಾನವನ್ನ ಮಾಜಿ ಸಿಎಂ ವೀರಪ್ಪ ಮೊಯ್ಲಿ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಗುಜರಾತ್‌ನ ಹತ್ಯಾಕಾಂಡದ ವೇಳೆ ಅಂದಿನ ಮುಖ್ಯಮಂತ್ರಿ ಆಗಿದ್ದ ಮೋದಿ ರಾಜಧರ್ಮ, ಕಾನೂನು ಪರಿಪಾಲನೆ ಮಾಡಲಿಲ್ಲ. ಅಂತಹ ಮೋದಿ ಅವರಿಂದ ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಮಾಡಿಸಿದ್ದು ಎಷ್ಟು ಸರಿ.? ಮೋದಿಯಿಂದ ದೇವಾಲಯಕ್ಕೆ ಎಷ್ಟು ಪಾವಿತ್ರತ್ಯತೆ ಬರಲಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೋದಿ ಉಪವಾಸ ಮಾಡಿದ್ದ ಬಗ್ಗೆ ನನಗೆ ಅನುಮಾನವಿದೆ. ಉಪವಾಸ ಮಾಡದೇ ಗರ್ಭಗುಡಿಗೆ ಹೋಗಿದ್ದರೆ ಅಪವಿತ್ರವಾಗುತ್ತದೆ, ಗರ್ಭಗುಡಿಗೆ ಹೋಗಿ ಪೂಜೆ ಮಾಡಿದ್ದರೆ ಆ ಸ್ಥಳ ಅಪವಿತ್ರವಾಗುತ್ತದೆ. ಅಪವಿತ್ರವಾಗಿ ಆ ಸ್ಥಳದಲ್ಲಿ ಯಾವುದೇ ಶಕ್ತಿ ಇರಲ್ಲ. ರಾಮಮಂದಿರ ಹೆಸರೇಳಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇನ್ಮುಂದೆ ಬಿಜೆಪಿಗೆ ಮಾತಾಡಲು ಬೇರೆ ವಿಚಾರವಿಲ್ಲ ಎಂದು ಹೇಳಿದರು.
ನರೇಂದ್ರ ಮೋದಿ ಗರ್ಭಗುಡಿಗೆ ಪ್ರವೇಶ ಮಾಡಿದೆ ತಪ್ಪು, ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ಸಹ ತಪ್ಪು, ನಿಜವಾದ ಸ್ವಾಮೀಜಿಗಳು, ಬ್ರಾಹ್ಮಣರು ಆಗಿದ್ರೆ ನರೇಂದ್ರ ಮೋದಿ ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು. ಯೋಧ್ಯೆ ರಾಮಮಂದಿರ ಲೋಕಾರ್ಪಣೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಮಮಂದಿರ ಅಪೂರ್ಣ ಮಂದಿರ. ಕೇವಲ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಮಾಡಿದ್ರೆ ಸಾಲದು. ಅಲ್ಲಿ ರಾಮ ಲಕ್ಷಣ, ಸೀತಾ ಹಾಗೂ ಆಂಜನೇಯನ ವಿಗ್ರಹಗಳು ಇರಬೇಕು ಆಗಲೇ ರಾಮಮಂದಿರ ಪೂರ್ಣ ಆಗೋದು ಎಂದರು.
ಆಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಪ್ರಧಾನಿ ಮೋದಿ ಅಮೃತ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸಿದ್ದಾರೆ. ರಾಮ ಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ 11 ದಿನಗಳ ಕಠಿಣ ಉಪವಾಸ ವೃತ ಅಂತ್ಯಗೊಳಿಸಿದ್ದಾರೆ.
ಮೊಯ್ಲಿಯವರ ಕೊಳಕು ಮನಸ್ಸು ತೋರಿಸಿದ ಹೇಳಿಕೆ: ರಘು ಕೌಟಿಲ್ಯ
ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರ ಇವತ್ತಿನ ಹೇಳಿಕೆ ಅವರ ಕೊಳಕು ಮನಸ್ಸನ್ನು ತೋರಿಸುತ್ತದೆ ಎಂದು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ ಅವರು ತಿಳಿಸಿದರು.
ಒಬ್ಬ ಹಿಂದುಳಿದ ವರ್ಗದ ಪ್ರಮುಖರಾಗಿ, ವೈಚಾರಿಕವಾಗಿ ಒಂದಷ್ಟು, ಸಾಹಿತ್ಯಕವಾಗಿ ಒಂದಷ್ಟು ಹಿನ್ನೆಲೆಯಿರುವ ಮೊಯಿಲಿಯವರಿಂದ ಇಂಥ ಕೊಳಕು ಹೇಳಿಕೆಯನ್ನು ಜನರು ನಿರೀಕ್ಷಿಸಿರಲಿಲ್ಲ ಎಂದು ತಿಳಿಸಿದರು.
ಸನಾತನ ಹಿಂದೂ ಧರ್ಮದಲ್ಲಿ ಬಹುದೊಡ್ಡ ಪ್ರಮಾಣದಲ್ಲಿ ಸುಧಾರಣೆಯ ಕ್ರಾಂತಿ ಆಗುತ್ತಿದೆ. ಸಮಾನತೆ, ನಾವೆಲ್ಲರೂ ಒಂದು, ನಾವೆಲ್ಲರೂ ಹಿಂದುಗಳು ಎಂಬ ಭಾವನೆ ಗಟ್ಟಿಗೊಳ್ಳುತ್ತಿದೆ. ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಿರುವುದು ಹಿಂದೂ ಧರ್ಮದ ಸಮಾನತೆಯ ಸಂಕೇತವಾಗಿದೆ ಎಂದು ವಿವರಿಸಿದರು.
ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಾಲರಾಮನ ಪ್ರತಿಷ್ಠೆ ಮಾಡಿದ್ದು, ಇಡೀ ವಿಶ್ವದ ಹಿಂದೂಗಳ ಪಾಲಿಗೆ ಅತ್ಯಂತ ಸಂಭ್ರಮದ ವಿಷಯವಾಗಿದೆ. ಇದನ್ನು ಕಂಡು ವೀರಪ್ಪ ಮೊಯಿಲಿಯವರು ಪ್ರಶಂಸೆ ಮಾಡಬೇಕಿತ್ತು ಎಂದರು.
ಸನಾತನ ಹಿಂದೂ ಧರ್ಮದಲ್ಲಿ ಭಗವಂತನನ್ನು ಅಪ್ಪಿಕೊಳ್ಳಲು, ಅಪ್ಪಿಕೊಳ್ಳಲು, ಆರಾಧಿಸಲು ಅವಕಾಶ ಆಗಿದೆ. ಆದರೆ, ವೀರಪ್ಪ ಮೊಯಿಲಿ ಅವರ ಹತಾಶೆಯ ಈ ಹೇಳಿಕೆಯ ಮೂಲಕ ಅವರ ಘನತೆಯನ್ನು ತಗ್ಗಿಸಿಕೊಂಡಿದ್ದಾರೆ ಅವರ ಸಂಸ್ಕಾರದಲ್ಲಿ ಕಪ್ಪುಚುಕ್ಕಿಯನ್ನು ಅವರೇ ಬಳಿದುಕೊಂಡಿದ್ದಾರೆ ಎಂದು ತಿಳಿಸಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications