ಲೋಕಸಭಾ ಟಿಕೆಟ್ ಗಾಗಿ ಕೈ ಪಾಳಯದಲ್ಲಿ ಪೈಪೋಟಿ; ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಯಲು ಮಾಜಿ ಸಿಎಂ ಪ್ಲಾನ್!
ಚಿಕ್ಕಬಳ್ಳಾಪುರ,ಸೆಪ್ಟೆಂಬರ್ 05: ರಾಜ್ಯ ಕಾಂಗ್ರೆಸ್ 2024 ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಮೂಲಕ ರಾಜ್ಯ ಬಿಜೆಪಿಗೆ ಠಕ್ಕರ್ ಕೊಡಲು ಭರ್ಜರಿ ಪ್ಲಾನ್ ನಡೆಸುತ್ತಿದ್ದು, ಈ ಬಾರೀ ಅಳೆದು ತೂಗಿ ಟಿಕೆಟ್ ನೀಡಲು ಕೈ ಪಡೆ ಚಿಂತನೆ ನಡೆಸಿದೆ.
ಹೌದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಕಾಂಗ್ರೆಸ್ ಪಾಳಯದಲ್ಲಿ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿಈಗಾಗಲೇ ಕೆಲ ಅಭ್ಯರ್ಥಿಗಳು ಚುನಾವಣಾ ತಯಾರಿ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸದ್ಯ ಬಿಜೆಪಿಯ ವಶದಲ್ಲಿದ್ದು, ಈ ಬಾರೀಯ ಲೋಕಸಭಾ ಚುನಾವಣೆಯಲ್ಲಿ ಶತಾಯುಗತಾಯ ಈ ಕ್ಷೇತ್ರವನ್ನ ಕೈ ವಶ ಮಾಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಸಿದ್ದತೆ ಮಾಡಿಕೊಂಡಿದ್ದಾರೆ.

2009, 2014 ರಲ್ಲಿ ಗೆಲುವು ಸಾಧಿಸಿದ್ದ ಮಾಜಿ ಸಂಸದ ಎಂ.ವೀರಪ್ಪ ಮೊಯ್ಲಿಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸಲು ಭರ್ಜರಿ ತಯಾರಿ ನಡೆಸಿಕೊಂಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಬಿಜೆಪಿ ತೆಕ್ಕೆಯಲ್ಲಿರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಈ ಬಾರಿ ಶತಾಯಗತಾಯ ಕೈ ವಶ ಮಾಡಿಕೊಳ್ಳಬೇಕೆನ್ನುವ ತವಕದಲ್ಲಿ ಎಂ ವೀರಪ್ಪ ಮೊಯ್ಲಿ ಇದ್ದಾರೆ ಎಂದು ಹೇಳಲಾಗಿದೆ.
2009, 2014 ರಲ್ಲಿ ಕಾಂಗ್ರೆಸ್ ನಿಂದ ಎಂ ವೀರಪ್ಪ ಮೊಯ್ಲಿ ಗೆಲುವು ಸಾಧಿಸಿದ್ರು. ಆಗ ಬಿಜೆಪಿ ಎರಡನೇ ಹಾಗೂ ಜೆಡಿಎಸ್ ಮೂರನೇ ಸ್ಥಾನ ವನ್ನ ಪಡೆದಿತ್ತು. 2014ರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಿದ್ದರು. ಇನ್ನೂ 2019ರಲ್ಲಿ ಬಿಜೆಪಿಯಿಂದ ಬಿ.ಎನ್.ಬಚ್ಚೇಗೌಡ ಗೆಲುವು ಸಾಧಿಸಿದ್ರು. ಆದರೆ, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿ.ಎನ್.ಬಚ್ಚೇಗೌಡ ಅನುಮಾನವಾಗಿದೆ. ಹೀಗಾಗಿ ಈ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸೋತ ಮಾಜಿ ಸಚಿವ ಡಾ. ಕೆ ಸುಧಾಕರ್ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಲಿವೆ ಎನ್ನುವ ಮಾತು ಕೇಳಿ ಬಂದಿದ್ದು, ಸದ್ಯ ಮೈತ್ರಿ ಮಾತುಕತೆ ಜೀವಂತವಾಗಿದೆ. ಒಂದು ವೇಳೆ ಕಮಲ-ದಳ ಮೈತ್ರಿಯಾದ್ರೆ ಈ ಕ್ಷೇತ್ರವನ್ನ ಬಿಜೆಪಿಗೆ ಬಿಟ್ಟು ಕೊಡುವ ಸಾಧ್ಯತೆ ಇದ್ದು, ಜೆಡಿಎಸ್ ಹಾಗೂ ಬಿಜೆಪಿಯ ನಡೆ ಸದ್ಯ ಕುತೂಹಲ ಮೂಡಿಸಿದೆ. ಇನ್ನೂ ಕಾಂಗ್ರೆಸ್ ಪಾಳಯದಲ್ಲಿ ಈ ಬಾರೀ ಅಭ್ಯರ್ಥಿಗಳ ಆಯ್ಕೆ ವಿಚಾರ ದೊಡ್ಡ ತಲೆನೋವಾಗಿದ್ದು, ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳ ವಿಷಯದಲ್ಲಿ ಕುತೂಹಲ ಸೃಷ್ಟಿಯಾಗಿದೆ. ಮಾಜಿ ಸಿಎಂ ಹಾಗೂ ಮಾಜಿ ಸಂಸದ ವೀರಪ್ಪ ಮೊಯ್ಲಿ ಅವರು ಸದ್ಯ ಕ್ಷೇತ್ರದಲ್ಲಿ ಚುನಾವಣಾ ತಯಾರಿ ನಡೆಸುತ್ತಿದ್ದು, ಚಿಕ್ಕಬಳ್ಳಾಪುರ ಟಿಕೆಟ್ ಗಾಗಿ ನಾನಾ ಅಭ್ಯರ್ಥಿಗಳು ರೇಸ್ ನಲ್ಲಿದ್ದಾರೆ ಎನ್ನಲಾಗಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಾಗೇಪಲ್ಲಿ, ಗೌರಿಬಿದನೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಹೊಸಕೋಟೆ, ದೇವನಹಳ್ಳಿ, ನೆಲಮಂಗಲ ಮತ್ತು ಯಲಹಂಕ ವಿಧಾನಸಭಾ ಕ್ಷೇತ್ರಗಳಿವೆ. ಅಲ್ಲದೇ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲೂ ಈ ಹಿಂದೆ ಕಾಂಗ್ರೆಸ್ ಗಟ್ಟಿಗೊಂಡಿತ್ತು. ಮಾಜಿ ಸಚಿವ ಡಾ.ಕೆ.ಸುಧಾಕರ್ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ಹಿನ್ನೆಲೆ ಕ್ಷೇತ್ರದಲ್ಲಿ ಕಮಲ ಅರಳುವಂತಾಗಿತ್ತು. ಆದರೆ, 2023 ರ ವಿಧಾನಸಭಾ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಗೆಲುವಿನಿಂದಾಗಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಸಿಕ್ಕಿದೆ.
ಇನ್ನೂ ಉಳಿದ ವಿಧಾನಸಭಾ ಕ್ಷೇತ್ರಗಳಾದ ಗೌರಿಬಿದನೂರು, ಬಾಗೇಪಲ್ಲಿ, ಹೊಸಕೋಟೆ, ದೇವನಹಳ್ಳಿ, ನೆಲಮಂಗಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನವರೇ ಶಾಸಕರಾಗಿದ್ದಾರೆ. ದೊಡ್ಡಬಳ್ಳಾಪುರ ಮತ್ತು ಯಲಹಂಕ ಮಾತ್ರ ಬಿಜೆಪಿ ಶಾಸಕರು ಗೆಲುವು ಸಾಧಿದ್ದು, ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲೂ ಕಾರ್ಯಕರ್ತರನ್ನು ಗಟ್ಟಿಗೊಳಿಸುವ ಪಯತ್ನವನ್ನ ಕಾಂಗ್ರೆಸ್ ಆರಂಭಿಸಿದೆ ಎಂದು ಹೇಳಲಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications