'ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲು ವೀರಪ್ಪ ಮೊಯ್ಲಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದಿಲ್ಲ'
ಬೆಂಗಳೂರು, ಜನವರಿ 24: ನಿಮಗೆ ರಾಮನಲ್ಲಿ ನಂಬಿಕೆಯಿದ್ದರೆ ನೀವು ಉಪವಾಸ ಮಾಡಿ ಬದುಕಬಹುದು, ಗಾಂಧಿ ಕುಟುಂಬವನ್ನು ಸಂತೋಷಪಡಿಸಿದರೆ ಅಲ್ಲ. ಕುಟುಂಬವನ್ನು ಮೆಚ್ಚಿಸಲು ಇಷ್ಟೆಲ್ಲಾ ಪ್ರಯತ್ನ ಮಾಡಿದರೂ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಲು ವೀರಪ್ಪ ಮೊಯ್ಲಿಗೆ ಕಾಂಗ್ರೆಸ್ ಟಿಕೆಟ್ ಸಿಗುವುದಿಲ್ಲ ಎಂದು ಬಿಜೆಪಿ ಸಂಸದ ಲೆಹರ್ ಸಿಂಗ್ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ರಾಮಮಂದಿರದ ಶಂಕುಸ್ಥಾಪನೆಗೂ ಮುನ್ನ 11 ದಿನಗಳ ಕಠಿಣ ಉಪವಾಸ ವೃತವನ್ನ ಮಾಡಿದ್ದಾರೆ. ಈ 11 ದಿನ ಉಪವಾಸದ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅನುಮಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಬಿಜೆಪಿ ಸಂಸದ ಲೆಹರ್ ಸಿಂಗ್ ಸಾಮಾಜಿಕ ಜಾಲತಾಣದ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಮಹಾನ್ ಬರಹಗಾರನ ಮುಖವಾಡ ಹಾಕಿಕೊಂಡು ತಿರುಗಾಡುವ ವೀರಪ್ಪ ಮೊಯ್ಲಿ, ಎಲ್ಲರೂ ತಮ್ಮಂತೆ ನಕಲಿ ಎಂದು ಭಾವಿಸುತ್ತಾರೆ. ಮೊಯ್ಲಿ ಪ್ರಧಾನಿಯನ್ನು ಅನುಮಾನಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ರಾಮಮಂದಿರದ ಶಂಕುಸ್ಥಾಪನೆಗೂ ಮುನ್ನ ಉಪವಾಸಕೈಗೊಂಡಿರುವುದರ ಕುರಿತು ದೇಶಕ್ಕೆ ಸತ್ಯ ಗೊತ್ತಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ವೀರಪ್ಪ ಮೊಯ್ಲಿ ಹೇಳಿದ್ದೇನು?
ಮೋದಿ ಉಪವಾಸ ಮಾಡಿಲ್ಲ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ರೆ ಒಂದೆರೆಡು ದಿನದಲ್ಲಿ ಮನುಷ್ಯ ಬೀಳುತ್ತಾನೆ. 11 ದಿನಗಳ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಉಪವಾಸ ವ್ರತದ ಮೇಲೆ ಅನುಮಾನವನ್ನ ಮಾಜಿ ಸಿಎಂ ವೀರಪ್ಪ ಮೊಯ್ಲಿ ವ್ಯಕ್ತಪಡಿಸಿದ್ದಾರೆ.
ಗುಜರಾತ್‌ನ ಹತ್ಯಾಕಾಂಡದ ವೇಳೆ ಅಂದಿನ ಮುಖ್ಯಮಂತ್ರಿ ಆಗಿದ್ದ ಮೋದಿ ರಾಜಧರ್ಮ, ಕಾನೂನು ಪರಿಪಾಲನೆ ಮಾಡಲಿಲ್ಲ. ಅಂತಹ ಮೋದಿ ಅವರಿಂದ ಅಯೋಧ್ಯೆ ರಾಮಲಲ್ಲಾ ಪ್ರತಿಷ್ಠಾಪನೆ ಮಾಡಿಸಿದ್ದು ಎಷ್ಟು ಸರಿ.? ಮೋದಿಯಿಂದ ದೇವಾಲಯಕ್ಕೆ ಎಷ್ಟು ಪಾವಿತ್ರತ್ಯತೆ ಬರಲಿದೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Veerappa Moily, who goes around wearing the mask of a great writer, thinks everybody is a fake like him. Moily has doubted PM @narendramodi ji’s fast before the consecration of Ayodhya Ram temple. The nation knows the truth. 1/2@JPNadda @BJP4India @kharge @RahulGandhi @INCIndia pic.twitter.com/bC5LqZbWJK
— Lahar Singh Siroya (@LaharSingh_MP) January 23, 2024
ಮೋದಿ ಉಪವಾಸ ಮಾಡಿದ್ದ ಬಗ್ಗೆ ನನಗೆ ಅನುಮಾನವಿದೆ. ಉಪವಾಸ ಮಾಡದೇ ಗರ್ಭಗುಡಿಗೆ ಹೋಗಿದ್ದರೆ ಅಪವಿತ್ರವಾಗುತ್ತದೆ, ಗರ್ಭಗುಡಿಗೆ ಹೋಗಿ ಪೂಜೆ ಮಾಡಿದ್ದರೆ ಆ ಸ್ಥಳ ಅಪವಿತ್ರವಾಗುತ್ತದೆ. ಅಪವಿತ್ರವಾಗಿ ಆ ಸ್ಥಳದಲ್ಲಿ ಯಾವುದೇ ಶಕ್ತಿ ಇರಲ್ಲ. ರಾಮಮಂದಿರ ಹೆಸರೇಳಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇನ್ಮುಂದೆ ಬಿಜೆಪಿಗೆ ಮಾತಾಡಲು ಬೇರೆ ವಿಚಾರವಿಲ್ಲ ಎಂದು ಹೇಳಿದರು.
ನರೇಂದ್ರ ಮೋದಿ ಗರ್ಭಗುಡಿಗೆ ಪ್ರವೇಶ ಮಾಡಿದೆ ತಪ್ಪು, ಪ್ರಾಣ ಪ್ರತಿಷ್ಠಾಪನೆ ಮಾಡಿದ್ದು ಸಹ ತಪ್ಪು, ನಿಜವಾದ ಸ್ವಾಮೀಜಿಗಳು, ಬ್ರಾಹ್ಮಣರು ಆಗಿದ್ರೆ ನರೇಂದ್ರ ಮೋದಿ ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು. ಯೋಧ್ಯೆ ರಾಮಮಂದಿರ ಲೋಕಾರ್ಪಣೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಗರ್ಭಗುಡಿಗೆ ಬಿಡಬಾರದಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಮಮಂದಿರ ಅಪೂರ್ಣ ಮಂದಿರ. ಕೇವಲ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಮಾಡಿದ್ರೆ ಸಾಲದು. ಅಲ್ಲಿ ರಾಮ ಲಕ್ಷಣ, ಸೀತಾ ಹಾಗೂ ಆಂಜನೇಯನ ವಿಗ್ರಹಗಳು ಇರಬೇಕು ಆಗಲೇ ರಾಮಮಂದಿರ ಪೂರ್ಣ ಆಗೋದು ಎಂದರು.
ಆಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಪ್ರಧಾನಿ ಮೋದಿ ಅಮೃತ ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಿಸಿದ್ದಾರೆ. ರಾಮ ಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಮ್ಮ 11 ದಿನಗಳ ಕಠಿಣ ಉಪವಾಸ ವೃತ ಅಂತ್ಯಗೊಳಿಸಿದ್ದಾರೆ.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications