ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿಯಲ್ಲಿ ಅಂಗಡಿ ಸಮಾಧಿ, ರುದ್ರಭೂಮಿಗೆ ತಡೆಗೋಡೆ ನಿರ್ಮಿಸಿ

|
Google Oneindia Kannada News

ಬೆಂಗಳೂರು ಸೆಪ್ಟೆಂಬರ್‌ 30: ಇತ್ತೀಚೆಗೆ ನಿಧನರಾದ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವರಾಗಿದ್ದ ದಿವಂಗತ ಸುರೇಶ್‌ ಅಂಗಡಿ ಅವರ ಅಂತ್ಯಕ್ರಿಯೆಯನ್ನು ದೆಹಲಿಯಲ್ಲಿ ನಡೆಸಲಾಯಿತು. ದೆಹಲಿಯ ವೀರಶೈವ ಲಿಂಗಾಯತ ರುದ್ರಭೂಮಿಗೆ ತಡೆಗೋಡೆ ಹಾಗೂ ಸಮಾಧಿ ನಿರ್ಮಾಣದ ವಿಷಯವಾಗಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರಿಗೆ ಇಂದು‌ ದಿವಂಗತ ಸುರೇಶ್‌ ಅಂಗಡಿ ಅವರ ಅಳಿಯಂದಿರಾದ ಸಂಕಲ್ಪ ಶೆಟ್ಟರ್‌ ಹಾಗೂ ಡಾ ರಾಹುಲ್‌ ಪಾಟೀಲ್‌ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಧ್ಯಮ ಮತ್ತು ಬೃಹತ್‌ ಕೈಗಾರಿಕಾ ಸಚಿವರಾದ ಜಗದೀಶ್‌ ಶೆಟ್ಟರ್‌ ಉಪಸ್ಥಿತರಿದ್ದರು.

ಕೊರೊನಾ ರೋಗಕ್ಕೆ ತುತ್ತಾಗಿ ಸೆಪ್ಟೆಂಬರ್‌ 23 ರಂದು ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಕೇಂದ್ರ ಸಚಿವ ಸುರೇಶ್‌ ಅಂಗಡಿ ಅವರು ನಿಧನರಾಗಿದ್ದರು. ಕರೋನಾ ಹಿನ್ನಲೆಯಲ್ಲಿ ಅವರ ಪಾರ್ಥಿವ ಶರೀರವನ್ನು ದೆಹಲಿಯ ದ್ವಾರಕಾದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆಯನ್ನು ನಡೆಸಲಾಗಿತ್ತು.

ಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಸ್ಮರಣೆಕೇಂದ್ರ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಸ್ಮರಣೆ

Veerashaiva Lingayat Burial Ground In Delhi Need Barrier Compound Wall

ಈ ಸ್ಥಳದಲ್ಲಿ ದಿವಂಗತರ ಘನತೆಗೆ ತಕ್ಕುದಾದಂತಹ ಸಮಾಧಿಯನ್ನು ನಿರ್ಮಿಸುವ ಮೂಲಕ ಗೌರವ ಸಲ್ಲಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ದೆಹಲಿಯ ದ್ವಾರಕದಲ್ಲಿರುವ ವೀರಶೈವ ಲಿಂಗಾಯತ ರುದ್ರಭೂಮಿಗೆ ಕಾಂಪೋಂಡ್‌ ಹಾಗೂ ಸಮಾಧಿಯನ್ನು ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿಯನ್ನು ಸಲ್ಲಿಸಲಾಯಿತು.

English summary
Veerashaiva Lingayat Burial ground which includes Suresh Angadi's Samadhi in Delhi need barrier Compound wall, a request letter submitted to CM BS Yediyurappa by Angadi's relatives.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X