ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌; 500 ಕೋಟಿ ಅನುದಾನ

ಬೆಂಗಳೂರು, ನವೆಂಬರ್ 23 : ಕರ್ನಾಟಕ ಸರ್ಕಾರ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ‌ ಸ್ಥಾಪನೆ ಕುರಿತು ಅಧಿಕೃತವಾದ ಆದೇಶ ಹೊರಡಿಸಿದೆ. ಮಾನ್ಯ ಮುಖ್ಯಮಂತ್ರಿಗಳ ಟಿಪ್ಪಣಿ ಆಧರಿಸಿ ಆದೇಶ ಪ್ರಕಟವಾಗಿದೆ.

ಸೋಮವಾರ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮಾಜದ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ ಎಂದು ತಿಳಿಸಲಾಗಿದೆ.

ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಅಗತ್ಯವಾಗಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ನಿಗಮ ಸ್ಥಾಪನೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಕರ್ನಾಟಕ ಸರ್ಕಾರ ಮರಾಠ ಮತ್ತು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಒಪ್ಪಿಗೆ ಕೊಟ್ಟಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಒಕ್ಕಲಿಗ, ಕ್ರೈಸ್ತ, ಆರ್ಯ-ಈಡಿಗ, ಕುರುಬ ಸಮುದಾಯದವರು ಸಹ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ

ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013, ಸೆಕ್ಷನ್ 7ರ ಅನ್ವಯ ನೋಂದಾಯಿಸಿ ಸ್ಥಾಪಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಭರವಸೆ ಕೊಟ್ಟಿದ್ದರು. ಈಗ ಅಧಿಕೃತ ಆದೇಶ ಪ್ರಕಟವಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ನೋಂದಾಯಿಸುವ ಕಾರ್ಯ ವಹಿಸಲು ಹಾಗೂ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನು ಭರ್ತಿ ಮಾಡುವ ತನಕ ಸದರಿ ನಿಗಮದ ಕಾರ್ಯಕ್ರಮಗಳನ್ನು ಆಯುಕ್ತರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರಿಗೆ ವಹಿಸಿದೆ.

ಪ್ರಾರಂಭಿಕ ವೆಚ್ಚ ಭರಿಸುವುದು

ಪ್ರಾರಂಭಿಕ ವೆಚ್ಚ ಭರಿಸುವುದು

ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ತಗುಲುವ ಪ್ರಾರಂಭಿಕ ವೆಚ್ಚವನ್ನು ಆಯುಕ್ತರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರು ಭರಿಸಿ, ನಂತರ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದಿಂದ ಮರು ಭರಣ ಮಾಡುವುದು ಎಂದು ಸೂಚಿಸಲಾಗಿದೆ.

Recommended Video

    Samsung ಭಾರತದಲ್ಲಿ ನೂತನವಾಗಿ 5 ಸಾವಿರ ಕೋಟಿ ಹೂಡಿಕೆ | Oneindia Kannada
    500 ಕೋಟಿ ರೂ. ಅನುದಾನ

    500 ಕೋಟಿ ರೂ. ಅನುದಾನ

    ಕರ್ನಾಟಕ ಸರ್ಕಾರದ ಆದೇಶದಲ್ಲಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಒದಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+