ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ‌; 500 ಕೋಟಿ ಅನುದಾನ

|
Google Oneindia Kannada News

ಬೆಂಗಳೂರು, ನವೆಂಬರ್ 23 : ಕರ್ನಾಟಕ ಸರ್ಕಾರ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ‌ ಸ್ಥಾಪನೆ ಕುರಿತು ಅಧಿಕೃತವಾದ ಆದೇಶ ಹೊರಡಿಸಿದೆ. ಮಾನ್ಯ ಮುಖ್ಯಮಂತ್ರಿಗಳ ಟಿಪ್ಪಣಿ ಆಧರಿಸಿ ಆದೇಶ ಪ್ರಕಟವಾಗಿದೆ.

ಸೋಮವಾರ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮಾಜದ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ ಎಂದು ತಿಳಿಸಲಾಗಿದೆ.

ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂಗೆ ಮನವಿ ಆರ್ಯ ಈಡಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಿಎಂಗೆ ಮನವಿ

ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಅಗತ್ಯವಾಗಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ನಿಗಮ ಸ್ಥಾಪನೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಲಾಗಿದೆ.

 ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಸ್ವಾಗತಿಸಿ ಸಂಭ್ರಮಾಚರಣೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಸ್ವಾಗತಿಸಿ ಸಂಭ್ರಮಾಚರಣೆ

ಕರ್ನಾಟಕ ಸರ್ಕಾರ ಮರಾಠ ಮತ್ತು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಒಪ್ಪಿಗೆ ಕೊಟ್ಟಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಒಕ್ಕಲಿಗ, ಕ್ರೈಸ್ತ, ಆರ್ಯ-ಈಡಿಗ, ಕುರುಬ ಸಮುದಾಯದವರು ಸಹ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವಂತೆ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಬೇಡಿಕೆ! ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಬೇಡಿಕೆ!

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ

ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013, ಸೆಕ್ಷನ್ 7ರ ಅನ್ವಯ ನೋಂದಾಯಿಸಿ ಸ್ಥಾಪಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಭರವಸೆ ಕೊಟ್ಟಿದ್ದರು. ಈಗ ಅಧಿಕೃತ ಆದೇಶ ಪ್ರಕಟವಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ನೋಂದಾಯಿಸುವ ಕಾರ್ಯ ವಹಿಸಲು ಹಾಗೂ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನು ಭರ್ತಿ ಮಾಡುವ ತನಕ ಸದರಿ ನಿಗಮದ ಕಾರ್ಯಕ್ರಮಗಳನ್ನು ಆಯುಕ್ತರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರಿಗೆ ವಹಿಸಿದೆ.

ಪ್ರಾರಂಭಿಕ ವೆಚ್ಚ ಭರಿಸುವುದು

ಪ್ರಾರಂಭಿಕ ವೆಚ್ಚ ಭರಿಸುವುದು

ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ತಗುಲುವ ಪ್ರಾರಂಭಿಕ ವೆಚ್ಚವನ್ನು ಆಯುಕ್ತರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯವರು ಭರಿಸಿ, ನಂತರ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದಿಂದ ಮರು ಭರಣ ಮಾಡುವುದು ಎಂದು ಸೂಚಿಸಲಾಗಿದೆ.

Recommended Video

Samsung ಭಾರತದಲ್ಲಿ ನೂತನವಾಗಿ 5 ಸಾವಿರ ಕೋಟಿ ಹೂಡಿಕೆ | Oneindia Kannada
500 ಕೋಟಿ ರೂ. ಅನುದಾನ

500 ಕೋಟಿ ರೂ. ಅನುದಾನ

ಕರ್ನಾಟಕ ಸರ್ಕಾರದ ಆದೇಶದಲ್ಲಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಒದಗಿಸಲಾಗುತ್ತದೆ ಎಂದು ತಿಳಿಸಲಾಗಿದೆ.

English summary
Karnataka government official notification on set up Veerashaiva Lingayat development board. ಕರ್ನಾಟಕ ಸರ್ಕಾರ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ‌ ಸ್ಥಾಪನೆ ಕುರಿತು ಅಧಿಕೃತವಾದ ಆದೇಶ ಹೊರಡಿಸಿದೆ. ಮಾನ್ಯ ಮುಖ್ಯಮಂತ್ರಿಗಳ ಟಿಪ್ಪಣಿ ಆಧರಿಸಿ ಆದೇಶ ಪ್ರಕಟವಾಗಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X