ರಾಜಕೀಯ ಮೀರಿ ವೀರಶೈವ ಲಿಂಗಾಯತರು ಒಟ್ಟಾದರೆ ಸಮಾಜದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ

ಬೆಂಗಳೂರು, ಜಲೈ 06: ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮುದಾಯ ಹಲವಾರು ಸವಾಲುಗಳನ್ನು ಎದುರಿಸಿದೆ. ಸವಾಲನ್ನು ಎದುರಿಸುವವರು ನಾಯಕರಾಗುತ್ತಾರೆ. ಅಂತಹ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಮಾಜದ ನೂತನ ಶಾಸಕರು ಹಾಗೂ ಸಚಿವರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೀರಶೈವ ಲಿಂಗಾಯತರು ರಾಜಕೀಯ ಮೀರಿ ಒಗ್ಗಟ್ಟಾದರೆ ಸಾಮಾಜದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗಲಿದೆ ಎಂದು ಅಭಿಪ್ರಾಯಪಟ್ಟರು. ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರಿಗೆ ಅಭಿನಂದನೆ ಮಾಡುವುದು ಸಂಪ್ರದಾಯ. ಅದು ಪರಮ ಪೂಜ್ಯರ ನೇತೃತ್ವದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ ಎಂದರು.

Veerashaiva Lingayat If Will Unite Beyond Politics The Society Problems Will Solved Bommai

ನಾವು ಒಂದು ಕಡೆ ಸೇರಿ ಪರಮಪೂಜ್ಯರ ನೇತೃತ್ವದಲ್ಲಿ ಸನ್ಮಾನಕ್ಕೆ ಒಳಪಡುವುದರ ಸಂದೇಶ ಏನೆಂದರೆ ಪರಮಪೂಜ್ಯರ ಹಾಗೂ ಸಮಾಜದ ರಕ್ಷಾ ಕವಚ ಮತ್ತು ಜವಾಬ್ದಾರಿಯ ಮಾಲೆ ಅಂತ ನನ್ನ ಭಾವನೆ. ರಾಜಕಾರಣಿ ಗಳಿಗೆ ಹಲವಾರು ಸವಾಲುಗಳಿವೆ. ಕೇವಲ ಚುನಾವಣೆ ಒಂದೇ ರಾಜಕಾರಣಗಳ ಸವಾಲು ಅಲ್ಲ.

ಅನೇಕ ಸವಾಲುಗಳನ್ನು ಎದುರಿಸುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕೆ ಇದೆ. ನಾವು ವಿಶ್ವಗುರು ಬಸವಣ್ಣನವರ ಅವರ ಕಾಯಕವೇ ಕೈಲಾಸ ತತ್ವ ಪಾಲಿಸಬೇಕು. ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ ಅನ್ಯರಿಗೆವಾಸಹ್ಯ ಪಡಬೇಡ ಅನ್ನುವುದನ್ನು ಪಾಲಿಸಿದರೆ ಸಾಕು ಎಂದು ತಿಳಿಸಿದರು.

Veerashaiva Lingayat If Will Unite Beyond Politics The Society Problems Will Solved Bommai

ಮಠಗಳಿಂದ ಶಿಕ್ಷಣ ದಾಸೋಹ

ನಮಗೆ ಚರಿತ್ರೆ ಇದೆ‌ ಚಾರಿತ್ರ್ಯ ಬೇಕಿದೆ. ಆಚಾರ್ಯರಿದ್ದಾರೆ ಆಚರಣೆ ಬೇಕಿದೆ. ಚಾರಿತ್ರ್ಯ ಪರಮಪೂಜ್ಯರ ಆಶೀರ್ವಾದದಿಂದ ದೊರೆಯುತ್ತದೆ. ಒಬ್ಬ ನಾಯಕರು ಮಠಗಳನ್ನು ವಿರೋಧ ಮಾಡಿದ್ದರು, ಕೊಳ್ಳೆಗಾಲದಿಂದ ಹಿಡಿದು ಬೀದರ್‌ ವರೆಗೂ ನಮ್ಮ ಸಮಾಜ ಸಾವಿರಾರು ವರ್ಷಗಳಿಂದ ಮಠಗಳು ಶಿಕ್ಷಣ, ದಾಸೋಹ ಮಾಡಿಕೊಂಡು ಬಂದಿವೆ. ಸರ್ಕಾರ ಇಲ್ಲದ ಸಂದರ್ಭದಲ್ಲಿ ಶಿಕ್ಷಣ ನೀಡುತ್ತ ಬಂದಿವೆ. ಒಗ್ಗಟ್ಟಿನಲ್ಲಿ ಬಲ ಇದೆ. ರಾಜಕೀಯ ಮೀರಿ ಒಗ್ಗಟ್ಟಾದರೆ ನಮ್ಮ ಮುಂದಿನ ಪೀಳಿಗೆ ಈಗ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಬೊಮ್ಮಾಯಿ ವಿವರಿಸಿದರು.

ಶಿಕ್ಷಣ, ಉದ್ಯೋಗದಲ್ಲಿ ಲಿಂಗಾಯತರಿಗೆ ಪ್ರಾತಿನಿಧ್ಯ: ಎಂಬಿ ಪಾಟೀಲ್

ಕಾರ್ಯಕ್ರಮದಲ್ಲಿ ಮಾತನಾಡಿದ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು, ವೀರಶೈವರು, ಲಿಂಗಾಯತರು ನಾವೆಲ್ಲರೂ ಕೂಡಿ ಹೋರಾಟ ಮಾಡಿ ನಮ್ಮ ಸಮುದಾಯದ ಯುವ ಪೀಳಿಗೆಯವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಪ್ರಾತಿನಿಧ್ಮ ಸಿಗುವಂತೆ ಮಾಡಬೇಕಿದೆ ಎಂದರು.

ಅನುಭವ ಮಂಟಪ, ದಾಸೋಹ, ಕಾಯಕ ಇಂತಹ ಮಹಾನ್ ಪರಿಕಲ್ಪನೆಗಳನ್ನು ಸಮಾಜಕ್ಕೆ ಕೊಟ್ಟ ಶ್ರೇಷ್ಠ ಸಂಸ್ಕೃತಿ ನಮ್ಮದಾಗಿದೆ. ಕುಂಬಾರರು, ಕಮ್ಮಾರರು ಸೇರಿದಂತೆ ಹಲವಾರು ಕಾಯಕ ವರ್ಗಗಳು ಸೇರಿರುವ ಸಮುದಾಯವು ಜಾತಿರಹಿತ ಸಮುದಾಯವಾಗಿದೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಸೇರಿದಂತೆ ಅನೇಕ ಮಠಾಧೀಶರು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ, ನೂತನವಾಗಿ ಆಯ್ಕೆಯಾದ ವೀರಶೈವ ಲಿಂಗಾಯತ ಸಮುದಾಯದ ಸಚಿವರು ಹಾಗೂ ಶಾಸಕರು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+