Karnataka Elections 2023: ಬಿಎಸ್‌ವೈ ನಿವೃತ್ತಿ- ಕಾಂಗ್ರೆಸ್‌ ವರಿಷ್ಠರ ಮೇಲೆ ಲಿಂಗಾಯತ ಮುಖಂಡರ ಒತ್ತಡ- ಕಾರಣ, ವಿವರ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಎರಡು ತಿಂಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳು ಹಲವಾರು ಯತ್ನಗಳಲ್ಲಿ ತೊಡಗಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ಗಾಗಿ ಲಿಂಗಾಯತ ಸಮುದಾಯದ ಮುಖಂಡರು ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ.

ಬೆಂಗಳೂರು, ಮಾರ್ಚ್‌ 04: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಎರಡು ತಿಂಗಳು ಬಾಕಿ ಇದೆ. ಈ ಸಂದರ್ಭದಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳು ಹಲವಾರು ಯತ್ನಗಳಲ್ಲಿ ತೊಡಗಿದ್ದಾರೆ. ಜೆಡಿಎಸ್‌ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಮೊದಲನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್‌ ಹಾಗೂ ಬಿಜೆಪಿ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಬೇಕಿದೆ. ಕಾಂಗ್ರೆಸ್‌ ಟಿಕೆಟ್‌ಗಾಗಿ ಲಿಂಗಾಯತ ಸಮುದಾಯದ ಮುಖಂಡರು ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ.

ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದ ವೀರಶೈವ ಲಿಂಗಾಯತ ಸಮುದಾಯದ ಕಾಂಗ್ರೆಸ್ ಮುಖಂಡರ ನಿಯೋಗ ಗುರುವಾರ ಸಂಜೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದೆ. ತಮ್ಮ ಸಮುದಾಯದ ಎಷ್ಟು ಮಂದಿಗೆ ಪಕ್ಷದ ಟಿಕೆಟ್ ನೀಡಬೇಕೆಂಬ ಪ್ರಸ್ತಾವನೆಯನ್ನು ಕಾಂಗ್ರೆಸ್‌ ವರಿಷ್ಠರ ಮುಂದಿಟ್ಟಿದೆ.

Veerashaiva Lingayat leaders meet Congress brass, seek tickets in Karnataka Assembly polls

ಬಿಜೆಪಿಯ ವರಿಷ್ಠ ನಾಯಕರಾದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಇನ್ನು ಮುಂದೆ ಚುನಾವಣಾ ರಾಜಕಾರಣಿದಲ್ಲಿ ಇರುವುದಿಲ್ಲ. ಇದು ಕಾಂಗ್ರೆಸ್‌ಗೆ ವರದಾನವಾಗಬೇಕು. ಕಾಂಗ್ರೆಸ್‌ನಲ್ಲಿರುವ ಲಿಂಗಾಯತ ಸಮುದಾಯದ ಮುಖಂಡರು ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ತಂದುಕೊಡಬಹುದು. ಈ ಹಿನ್ನೆಲೆಯಲ್ಲಿ ತಮ್ಮ ಸಮುದಾಯದ ಮುಖಂಡರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಟಿಕೆಟ್‌ ನೀಡಬೇಕೆಂದು ಲಿಂಗಾಯತ ನಾಯಕರು ಒತ್ತಡ ಹೇರಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯದಿಂದ 68 ಆಕಾಂಕ್ಷಿಗಳು ಇದ್ದಾರೆ. ಅವರೆಲ್ಲರಿಗೂ ಟಿಕೆಟ್‌ ನೀಡಬೇಕೆಂದೂ ಕಾಂಗ್ರೆಸ್‌ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಬಿಎಸ್‌ವೈ ನಿವೃತ್ತಿಯಿಂದ ಲಿಂಗಾಯತ ಮತಗಳು ಕಾಂಗ್ರೆಸ್ ಪರವಾಗಿ ಚಲಾವಣೆಯಾಗಬಹುದು ಎಂಬ ಆಶಯವನ್ನೂ ಕಾಂಗ್ರೆಸ್‌ನ ಲಿಂಗಾಯತ ಮುಖಂಡರು ಹೊಂದಿದ್ದಾರೆ. ಆದರೆ ಇದು ಹೇಗೆ ಪರಿವರ್ತನೆ ಆಗಲಿದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಹೇಳಿದರು.

Veerashaiva Lingayat leaders meet Congress brass, seek tickets in Karnataka Assembly polls

ಮಾಜಿ ಶಾಸಕ ವಿನಯ್‌ ಕುಲಕರ್ಣಿ, ಹಿರಿಯ ಮುಖಂಡ ಅಲ್ಲಂ ವೀರಭದ್ರಪ್ಪ, ಬೆಂಗಳೂರು ಮಾಜಿ ಉಪಮೇಯರ್‌ ಸಿ.ಎಸ್‌.ಪುಟ್ಟರಾಜು ಅಭ್ಯರ್ಥಿಗಳ ಪಟ್ಟಿಯನ್ನು ಮಂಡಿಸಿದರು. ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಹಳೆ ಮೈಸೂರು ಭಾಗದಲ್ಲೂ ಸಮುದಾಯದ ಮತಗಳು ಗಣನೀಯವಾಗಿ ಇರುವುದರಿಂದ ನಾವು ಈ ಬಾರಿ ಉತ್ತರ ಕರ್ನಾಟಕಕ್ಕೆ ಸೀಮಿತವಾಗಿಲ್ಲ ಎಂದು ವೀರಭದ್ರಪ್ಪ 'ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌'ಗೆ ತಿಳಿಸಿದ್ದಾರೆ.

ಚಿಕ್ಕಮಗಳೂರು, ಕಡೂರು ಮತ್ತು ತರೀಕೆರೆ ವಿಧಾನಸಭಾ ಕ್ಷೇತ್ರಗಳಲ್ಲಿ ಸಮುದಾಯದ ಮುಖಂಡರನ್ನು ಕಣಕ್ಕಿಳಿಸುವ ಮೂಲಕ ನಾವು ಗೆಲ್ಲಬಹುದು. ಆದರೆ ಅರಸೀಕೆರೆಯಲ್ಲಿ ಹಾಲಿ ಶಾಸಕ ಕೆಎಂ ಶಿವಲಿಂಗೇಗೌಡರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡುವ ಸಾಧ್ಯತೆ ಇದೆ ಎಂದು ಮುಖಂಡರು ಹೇಳಿದ್ದಾರೆ.

Veerashaiva Lingayat leaders meet Congress brass, seek tickets in Karnataka Assembly polls

2018 ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸಮುದಾಯದ 43 ಸದಸ್ಯರನ್ನು ಕಣಕ್ಕಿಳಿಸಿತ್ತು. ಅವರಲ್ಲಿ 16 ಜನರು ಗೆದ್ದರು, ಶೇಕಡಾ 37 ರಷ್ಟು ಯಶಸ್ಸನ್ನು ಸಾಧಿಸಲಾಗಿತ್ತು. ಪ್ರಸ್ತುತ ಬಿಜೆಪಿಯು ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಈಗ ನಮ್ಮ ಸಮುದಾಯದ ಮುಖಂಡರು ಹೆಚ್ಚು ಯಶಸ್ಸನ್ನು ಸಾಧಿಸಬಹುದು ಎಂದೂ ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ.

ಆಗಿನ ಸರ್ಕಾರ ಪ್ರತ್ಯೇಕ ಸ್ಥಾನಮಾನದ ಭರವಸೆ ನೀಡುವ ಮೂಲಕ ಸಮುದಾಯವನ್ನು ಒಡೆಯಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿಯ ಮುಖಂಡರು ಸೇರಿದಂತೆ ಸಮುದಾಯದ ಸದಸ್ಯರು ಆರೋಪಿಸಿದರು. ಇದು ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದು, ಈ ಬಾರಿ ಅದನ್ನು ಚುನಾವಣಾ ಪ್ಲಾಂಕ್ ಮಾಡದಿರಲು ಪಕ್ಷ ನಿರ್ಧರಿಸಿದೆ. ಇದು ಪಕ್ಷದ ಪ್ರಣಾಳಿಕೆಯ ಭಾಗವಾಗುವುದಿಲ್ಲ. ಸಮುದಾಯದವರಾದ ನಾವು ಈ ಬಗ್ಗೆ ಸಾಮೂಹಿಕವಾಗಿ ಕರೆ ನೀಡುತ್ತೇವೆ ಎಂದು ಪಾಟೀಲ್ ಸ್ಪಷ್ಟಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+