HSRP: ಅಂತಿಮ ಗಡುವು ಡಿಸೆಂಬರ್ ತನಕ ವಿಸ್ತರಣೆ ಸಾಧ್ಯತೆ

ಬೆಂಗಳೂರು, ಸೆಪ್ಟೆಂಬರ್ 12: ಕರ್ನಾಟಕ ಸರ್ಕಾರದ ಸಾರಿಗೆ ಇಲಾಖೆ ಏಪ್ರಿಲ್ 1, 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಇದ್ದ ಗಡುವು ಹಲವು ಬಾರಿ ವಿಸ್ತರಣೆ ಮಾಡಿದೆ. ಈಗ ನಂಬರ್ ಪ್ಲೇಟ್ ಆಳವಡಿಕೆ ಮಾಡಲು ಇರುವ ಸಮಯ ಮೂರು ದಿನ ಮಾತ್ರ. 15/9/2024ರ ಬಳಿಕ ಹೆಚ್ಎಸ್ಆರ್‌ಪಿ ಅಳವಡಿಕೆ ಮಾಡದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ.

ಸದ್ಯದ ಮಾಹಿತಿ ಪ್ರಕಾರ ಇನ್ನೂ ಕೋಟ್ಯಾಂತರ ವಾಹನಗಳಿಗೆ ರಾಜ್ಯದಲ್ಲಿ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಆಗಬೇಕು. ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದ ವಾಹನಗಳಿಗೆ 500 ರೂ. ದಂಡವನ್ನು ವಿಧಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಇದಕ್ಕಾಗಿ ಸಂಚಾರಿ ಪೊಲೀಸರು, ಸಾರಿಗೆ ಇಲಾಖೆ ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸಲಿವೆ.

Vehicle HSRP Install Deadline May Extend Till December 2024

ಸಾರಿಗೆ ಇಲಾಖೆ ಅಧಿಕಾರಿಗಳ ಪ್ರಕಾರ 2 ಕೋಟಿ ವಾಹನಗಳಲ್ಲಿ ಇದುವರೆಗೂ ಕೇವಲ 52 ಲಕ್ಷ ವಾಹನಗಳಿಗೆ ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಅಲ್ಲದೇ ನೂರಾರು ಸರ್ಕಾರಿ ವಾಹನಗಳಿಗೆ ಇನ್ನೂ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ಲ. ಆದ್ದರಿಂದ ಮತ್ತೆ ನಂಬರ್ ಪ್ಲೇಟ್ ಅಳವಡಿಕೆ ಮಾಡುವ ಗಡುವು ವಿಸ್ತರಣೆಯಾಗಲಿದೆಯೇ? ಎಂದು ಪ್ರಶ್ನೆ ಎದ್ದಿದೆ.

ದಂಡ ವಿಧಿಸಲು ತೀರ್ಮಾನ: ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ (ಜಾರಿ, ದಕ್ಷಿಣ) ಸಿ. ಮಲ್ಲಿಕಾರ್ಜುನ್ ಈ ಕುರಿತು ಮಾತನಾಡಿದ್ದಾರೆ. "ಸೆಪ್ಟೆಂಬರ್ 16ರಿಂದ ದಂಡವನ್ನು ಸಂಗ್ರಹ ಮಾಡಲಾಗುತ್ತದೆ. ವಿಶೇಷ ಅಭಿಯಾನವನ್ನು ಬೆಂಗಳೂರು ಮತ್ತು ಇತರ ಜಿಲ್ಲೆಗಳಲ್ಲಿ ಕೈಗೊಳ್ಳಲಾಗುತ್ತದೆ. ಇದಕ್ಕೆ ಸಂಚಾರಿ ಪೊಲೀಸರು, ಸಾರಿಗೆ ಇಲಾಖೆ ಅಧಿಕಾರಿಗಳು ಕೈ ಜೋಡಿಸಲಿದ್ದಾರೆ" ಎಂದರು.

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ಮೊದಲು 500 ರೂ. ದಂಡ ವಿಧಿಸಲಾಗುತ್ತದೆ. ಆದರೂ ನಂಬರ್ ಪ್ಲೇಟ್ ಹಾಕಿಸದಿದ್ದರೆ 1000 ರೂ. ದಂಡ ಹಾಕಲಾಗುತ್ತದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಮತ್ತೆ ಗಡುವು ವಿಸ್ತರಣೆ ಮಾಡಲಾಗುತ್ತದೆಯೇ? ಎಂಬ ಪ್ರಶ್ನೆಗೆ ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿಲ್ಲ.

ಜನರು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಹೆಚ್ಚಿನ ಆಸಕ್ತಿ ತೋರುತ್ತಿಲ್ಲ. ಆದ್ದರಿಂದ ದಂಡ ಸಂಗ್ರಹ ಅನಿವಾರ್ಯವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಸರ್ಕಾರಿ ವಾಹನಗಳಲ್ಲೇ 32,848 ವಾಹನಗಳ ಪೈಕಿ 13,901 ವಾಹನಗಳಿಗೆ ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ರಾಜ್ಯದ ಸಾರಿಗೆ ಇಲಾಖೆ ಆದೇಶವನ್ನು ಹೊಡಸಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಇದಕ್ಕೆ ಪ್ರತಿಕ್ರಿಯೆ ಸಿಕ್ಕಿಲ್ಲ. ಸರ್ಕಾರಿ ವಾಹನಗಳಿಗೂ ಸಹ ನಂಬರ್ ಪ್ಲೇಟ್ ಅಳವಡಿಕೆ ಬಾಕಿ ಇದೆ. ನಂಬರ್ ಪ್ಲೇಟ್ ಅಳವಡಿಕೆ ಗಡುವು 2024ರ ಡಿಸೆಂಬರ್ ತನಕ ವಿಸ್ತರಣೆ ಮಾಡುವ ಚಿಂತನೆ ಸರ್ಕಾರದ ಮುಂದಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಬಗ್ಗೆ ಸಾರಿಗೆ ಇಲಾಖೆ ಜನರಲ್ಲಿ ಅರಿವು ಮೂಡಿಸಿದೆ. ಆದರೆ ಇನ್ನೂ ಈ ಕುರಿತು ಗೊಂದಲವಿದೆ. ಆದ್ದರಿಂದ ಇಲಾಖೆ ಸಹಾಯವಾಣಿ ಆರಂಭಿಸಿದೆ. ಜನರು 9449863429/ 26 ಸಂಖ್ಯೆಗೆ ಕರೆ ಮಾಡಿ ಅಗತ್ಯ ಮಾಹಿತಿ ಪಡೆಯಬಹುದು.

ಹೆಚ್‌ಎಸ್‌ಆರ್‌ಪಿ ನೋಂದಣಿ ಹೆಸರಿನಲ್ಲಿ ಆನ್‌ಲೈನ್‌ನಲ್ಲಿ ಹಲವು ಲಿಂಕ್‌ಗಳು ಲಭ್ಯವಿದೆ. ಬೇರೆ ಲಿಂಕ್ ಕ್ಲಿಕ್ ಮಾಡಿ ಹಣ ಕಳೆದುಕೊಳ್ಳಬೇಡಿ ಎಂದು ಸಾರಿಗೆ ಇಲಾಖೆ ಜನರಿಗೆ ಮನವಿ ಮಾಡಿದೆ.

ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ನೋಂದಣಿಗೆ https://transport.karnataka.gov.in ಅಥವ www.siam.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಈ ವೆಬ್‌ಸೈಟ್ ಮೂಲಕ ನೋಂದಣಿಯಾದವು ಮಾತ್ರ ಅಧಿಕೃತ ಎಂದು ಇಲಾಖೆ ಸ್ಪಷ್ಟಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+