Get Updates
Get notified of breaking news, exclusive insights, and must-see stories!

ಹೊಸ ವಾಹನ ಸವಾರರಿಗ ಗುಡ್ ನ್ಯೂಸ್: ಸಾರಿಗೆ ಇಲಾಖೆಯಿಂದಲೇ ಸ್ಮಾರ್ಟ್ ಕಾರ್ಡ್ ವಿತರಣೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು, ಡಿ. 09: ಹೊಸ ವಾಹನಗಳಿಗೆ ಡೀಲರ್ ಮಟ್ಟದಲ್ಲಿಯೇ ಆನ್‌ಲೈನ್ ಮೂಲಕ ಆರ್ ಸಿ (ನೋಂದಣಿ ಪ್ರಮಾಣ ಪತ್ರ) ವಿತರಿಸುವ ಸಂಬಂಧ ಸಾರಿಗೆ ಇಲಾಖೆ ಹೊರಡಿಸಿದ್ದ ಆದೇಶಕ್ಕೆ ಬ್ರೇಕ್ ಬಿದ್ದಿದೆ. ಬದಲಿಗೆ ವಾಹನಗಳ ನೋಂದಣಿ ಪ್ರಮಾಣ ಪತ್ರವನ್ನು ಹಿಂದಿನ ವ್ಯವಸ್ಥೆಯಂತೆ ಸ್ಮಾರ್ಟ್ ಕಾರ್ಡ್ ವಿತರಿಸುವಂತೆ ಕರ್ನಾಟಕ ಹೈಕೋರ್ಟ್ ಸಾರಿಗೆ ಇಲಾಖೆಗೆ ನಿರ್ದೇಶಿಸಿದೆ.

ಕರ್ನಾಟಕ ಮೋಟಾರು ವಾಹನ ಅಧಿನಿಯಮ-1989ರ ನಿಯಮ 33ಕ್ಕೆ ತಿದ್ದುಪಡಿ ಮಾಡುವ ಮೂಲಕ ಸಾರಿಗೆ ಇಲಾಖೆ ನೂತನ ವಾಹನಗಳಿಗೆ ಡೀಲರ್ ಮಟ್ಟದಲ್ಲೇ ಎಲೆಕ್ಟ್ರಾನಿಕ್ ಅಥವಾ ಆನ್‌ಲೈನ್ ಮೂಲಕ ಆರ್ ಸಿ ವಿತರಿಸಬಹುದು ಎಂದು ಆದೇಶ ಹೊರಡಿಸಿತ್ತು. 2021ರ ಅಕ್ಟೋಬರ್‌ 31ರಂದು ಸಾರಿಗೆ ಇಲಾಖೆ ಹೊರಡಿಸಿರುವ ಆದೇಶ ಪ್ರಶ್ನಿಸಿ ಸ್ಮಾರ್ಟ್ ಕಾರ್ಡ್ ಆಧಾರಿತ ಆರ್‌ ಸಿ ವಿತರಣಾ ಸಂಸ್ಥೆಯಾದ ರೊಸ್ಮೆರ್ಟಾ ಟೆಕ್ನಾಲಜೀಸ್ ಲಿಮಿಟೆಡ್ ನ್ಯಾಯಾಲಯದ ಮೆಟ್ಟಿಲೇರಿತ್ತು. ರೋಸ್ಮಾರ್ಟ್ ಟೆಕ್ನಾಲಜೀಸ್ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ರಿತುರಾಜ್ ಅವಸ್ಥಿ ಮತ್ತು ನ್ಯಾ. ಸಚಿನ್ ಶಂಕರ್ ಮಗದುಮ್ ನೇತೃತ್ವದ ವಿಭಾಗೀಯ ಪೀಠ ಈ ಮಹತ್ವದ ಆದೇಶವನ್ನು ನೀಡಿದೆ.

ರೋಸ್ಮಾರ್ಟ್ ಟೆಕ್ನಾಲಜೀಸ್ ಸಂಸ್ಥೆ ಪರ ಹಿರಿಯ ವಕೀಲರಾದ ಅಶೋಕ್ ಹಾರ್ನಹಳ್ಳಿ ವಾದ ಮಂಡಿಸಿದರು. ಸರ್ಕಾರದ ಪರ ಅಭಿಯೋಜಕರು ಇದಕ್ಕೆ ಅಕ್ಷೇಪಣೆ ಸಲ್ಲಿಸಿದರು. ವಾದ ಮತ್ತು ಪ್ರತಿವಾದ ಆಲಿಸಿದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠ, ಮೂರು ವಾರದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು2022 ಜನವರಿ 31 ಕ್ಕೆ ಮುಂದೂಡಿದೆ. ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ, ಉಪ ಕಾರ್ಯದರ್ಶಿ, ಅಧೀನ ಕಾರ್ಯದರ್ಶಿ ಹಾಗೂ ಸಾರಿಗೆ ಮತ್ತು ರಸ್ತೆ ಸುರಕ್ಷತಾ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿದೆ. ಅಲ್ಲದೇ ನೂತನ ವಾಹನಗಳ ನೋಂದಣಿ ಅಕ್ಟೋಬರ್‌ 31ರ ಅಧಿಸೂಚನೆ ಹೊರಡಿಸುವುದಕ್ಕೂ ಮೊದಲೇ ಇದ್ದ ವ್ಯವಸ್ಥೆಯಂತೆಯೇ ನಡೆಸಬಹುದು ಎಂದು ಪೀಠ ಸ್ಪಷ್ಟಪಡಿಸಿದೆ.

Vehicle registration: Karnataka High Court Orders to Register vehicles as per earlier rules for now

ಸ್ಮಾರ್ಟ್ ಕಾರ್ಡ್ ಆಧಾರಿತ ವಾಹನ ನೋಂದಣಿ ಪ್ರಮಾಣಪತ್ರ ವಿತರಣೆಗೆ ಸಂಬಂಧಿಸಿದಂತೆ ಅರ್ಜಿದಾರ ಸಂಸ್ಥೆಯೊಂದಿಗೆ ಸರ್ಕಾರ 2009ರಲ್ಲಿ ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ಅವಧಿ 2024ರ ವರೆಗೆ ಚಾಲ್ತಿಯಲ್ಲಿರಲಿದೆ. ಹೀಗಿರುವಾಗ ಕರ್ನಾಟಕ ಮೋಟಾರು ವಾಹನ ಅಧಿನಿಯಮ-1989ರ ನಿಯಮ 33ಕ್ಕೆ ತಿದ್ದುಪಡಿ ತಂದು, ಸ್ಮಾರ್ಟ್ ಕಾರ್ಡ್ ಆಧಾರಿತ ಆರ್ ಸಿ ಬದಲಿಗೆ ಎಲೆಕ್ಟ್ರಾನಿಕ್ ವಿಧಾನದ ಮೂಲಕ ಆರ್ ಸಿ ವಿತರಣೆಗೆ ಸರ್ಕಾರ ನಿರ್ಧಾರ ಕೈಗೊಂಡಿರುವುದು ಕಾನೂನು ಬಾಹಿರ ಕ್ರಮ ಎಂದು ಮನವಿಯಲ್ಲಿ ಆಕ್ಷೇಪಿಸಲಾಗಿದೆ.

Vehicle registration: Karnataka High Court Orders to Register vehicles as per earlier rules for now

ಡೀಲರ್ ಮಟ್ಟದಲ್ಲೇ ವಾಹನ ನೋಂದಣಿಗೆ ಅವಕಾಶ ಕಲ್ಪಿಸುವ ಸಂಬಂಧ ಅಕ್ಟೋಬರ್‌ 26ರಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಕರಡು ಅಧಿಸೂಚನೆ ಹೊರಡಿಸಿದ್ದಾರೆ. ಸಾರ್ವಜನಿಕರ ಸಲಹೆ ಹಾಗೂ ಆಕ್ಷೇಪಣೆ ಸಲ್ಲಿಸಲು ಕೇವಲ ಐದು ದಿನ ಕಾಲಾವಕಾಶ ನೀಡಿ, ನಿಯಮಗಳನ್ನು ಅಂತಿಮಗೊಳಿಸಿ, ಅಧಿಸೂಚನೆ ಹೊರಡಿಸಲಾಗಿದೆ. ಸಾರ್ವಜನಿಕರ ಆಕ್ಷೇಪಣೆ ಸಲ್ಲಿಕೆಗೆ ಕಡ್ಡಾಯವಾಗಿ ಕನಿಷ್ಠ ಒಂದು ತಿಂಗಳು ಕಾಲಾವಕಾಶ ನೀಡಬೇಕೆಂಬ ನಿಯಮವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಅಧಿಸೂಚನೆಯನ್ನು ರದ್ದುಪಡಿಸಬಹುದಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಸರ್ಕಾರದ ನಿರ್ಧಾರ ನಿಯಮಬಾಹಿರ, ಕಾನೂನುಬಾಹಿರ ಹಾಗೂ ವಿವೇಚನಾರಹಿತವಾಗಿದ್ದು, ಕೇಂದ್ರ ಸರ್ಕಾರದ ಮೋಟಾರು ವಾಹನ ಕಾಯಿದೆ-1988 ಹಾಗೂ ಕೇಂದ್ರ ಮೋಟಾರು ವಾಹನ ಅಧಿನಿಯಮ-1989ಕ್ಕೆ ವ್ಯತಿರಿಕ್ತವಾಗಿದೆ. ಮೇಲಾಗಿ, ಸ್ಮಾರ್ಟ್ ಕಾರ್ಡ್ ಆಧಾರಿತ ಆರ್ ಸಿ ಬದಲಿಗೆ ಕೇವಲ ಎಲೆಕ್ಟ್ರಾನಿಕ್ ಆರ್ ಸಿ ವಿತರಿಸುವ ನಿರ್ಧಾರ ಅರ್ಜಿದಾರ ಸಂಸ್ಥೆ ಹಾಗೂ ಸರ್ಕಾರದ ನಡುವಿನ ಒಪ್ಪಂದಕ್ಕೆ ವಿರುದ್ಧವಾಗಿದೆ. ಆದ್ದರಿಂದ, ಅಕ್ಟೋಬರ್‌ 31ರಂದು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಸಂಸ್ಥೆಯೊಂದಿಗಿನ ಒಪ್ಪಂದದ ಅವಧಿ ಪೂರ್ಣಗೊಳ್ಳುವವರೆಗೆ (2024ರ ವರೆಗೆ) ಒಪ್ಪಂದ ಮುಂದುವರಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿರುವ ಅರ್ಜಿದಾರರು, ಅರ್ಜಿ ಇತ್ಯರ್ಥವಾಗುವವರೆಗೆ ಸರ್ಕಾರದ ಅಧಿಸೂಚನೆಗೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ.

Recommended Video

      ಮತ್ತೆ ನರಿ ಬುದ್ದಿ ತೋರಿದ ಚೀನಾ | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+