ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇವನಹಳ್ಳಿಯಲ್ಲಿ ಗ್ರಾಮ ದತ್ತು ಪಡೆದ ವೆಂಕಯ್ಯ ನಾಯ್ಡು

|
Google Oneindia Kannada News

ಬೆಂಗಳೂರು, ಮಾ.6 : ಕೇಂದ್ರ ನಗರಾಭಿವೃದ್ಧಿ ಸಚಿವ ಮತ್ತು ರಾಜ್ಯಸಭಾ ಸದಸ್ಯ ವೆಂಕಯ್ಯ ನಾಯ್ಡು ಅವರು ದೇವನಹಳ್ಳಿ ತಾಲೂಕಿನ ಗ್ರಾಮವೊಂದನ್ನು ದತ್ತು ಪಡೆದಿದ್ದಾರೆ. ಸಚಿವರು ಆಂಧ್ರಪ್ರದೇಶದ ಗ್ರಾಮವನ್ನು ದತ್ತು ಪಡೆಯಲು ನಿರ್ಧರಿಸಿದ್ದು, ವಿರೋಧಕ್ಕೆ ಕಾರಣವಾಗಿತ್ತು.

ಸಂಸದರ ಆದರ್ಶ ಗ್ರಾಮ ಯೋಜನಯಡಿಯಲ್ಲಿ ವೆಂಕಯ್ಯ ನಾಯ್ಡು ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಯಲಿಯೂರು ಗ್ರಾಮವನ್ನು ದತ್ತು ಪಡೆದುಕೊಂಡಿದ್ದಾರೆ. ಶುಕ್ರವಾರ ಯಲಿಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಿಗೆ ಖುದ್ದು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

Venkaiah Naidu

ಗ್ರಾಮದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಜನಸಾಮಾನ್ಯರೊಂದಿಗೆ ಸಮಸ್ಯೆಗಳ ಕುರಿತು ಸಂವಾದ ನಡೆಸಿದ ಅವರು, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಂಡು ಗ್ರಾಮಗಳನ್ನು ಅಭಿವೃದ್ಧಿಪಡಿಸುತ್ತೇನೆ ಎಂದು ಹೇಳಿದರು. [ಪ್ರತಿಕ್ರಿಯೆ : ವೆಂಕಯ್ಯ ನಾಯ್ಡು ಕರ್ನಾಟಕಕ್ಕೆ ದ್ರೋಹ ಮಾಡಿಲ್ಲವೇ?]

ಕೊಪ್ಪಳದಲ್ಲಿ ದತ್ತು ಪಡೆಯುತ್ತೇನೆ : ಈ ಬಾರಿ ಯಲಿಯೂರು ಗ್ರಾಮವನ್ನು ದತ್ತು ಪಡೆದಿದ್ದೇನೆ, ಮುಂದಿನ ವರ್ಷ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಗ್ರಾಮವೊಂದನ್ನು ದತ್ತು ಪಡೆಯುವುದಾಗಿ ವೆಂಕಯ್ಯ ನಾಯ್ಡು ತಿಳಿಸಿದರು. [ಕರ್ನಾಟಕದ ಸಂಸದರು ಆಯ್ಕೆಮಾಡಿಕೊಂಡ ಗ್ರಾಮಗಳು]

ಆಂಧ್ರದಲ್ಲಿ ದತ್ತುಪಡೆಯಲು ಮುಂದಾಗಿದ್ದರು : ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ವೆಂಕಯ್ಯ ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಗ್ರಾಮವೊಂದನ್ನು ದತ್ತು ಪಡೆಯಲು ನಿರ್ಧರಿಸಿದ್ದರು. ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಕರ್ನಾಟಕ ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಸಚಿವರು ಕರ್ನಾಟಕದಲ್ಲೇ ಗ್ರಾಮವನ್ನು ದತ್ತು ಪಡೆಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದರು. [ಪಿಟಿಐ ಚಿತ್ರ]

English summary
Union urban development minister Venkaiah Naidu has adopted Yaliyuru village of Devanhalli taluku, Bengaluru Rural district for development under Pradhan Mantri Adarsh Gram Yojana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X